ಮಡಿಕೇರಿ: ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯಲ್ಲಿ ವಾರಕ್ಕೆ ನೂರಾರು ಜನರು ಮಕ್ಕಳು ಸಾಮೂಹಿಕವಾಗಿ ಅನಾರೋಗ್ಯಕ್ಕೀಡಾಗುತ್ತಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಆಗೋಮ್ಮೆ ಈಗೊಮ್ಮೆ ಮಳೆ, ಬಿಸಿಲು, ಚಳಿಯ ವಾತಾವರಣ ಬರುತ್ತಿರುವುದರಿಂದ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ಸುಮಾರು 200 ರಿಂದ 300 ಜನ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮಳೆಗಾಲದಲ್ಲಿ ಪ್ರಕೃತಿ ವಿಕೋಪದಿಂದ ನಲುಗಿದ ಕೊಡಗಿನ ಜನರಿಗೆ ಈ ವರ್ಷ ಇಡಿ ಹವಾಮಾನ ವೈಪರೀತ್ಯದಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದಾಗಿ ಜಿಲ್ಲೆಯ ಜನರಿಗೆ ಶೀತ, ಕೆಮ್ಮು, ವೈರಲ್ ಫೀವರ್, ರಿಕೆಟ್ಸಿಯಲ್ ಫೀವರ್ ಹರಡುತ್ತಿದೆ. ಅಲ್ಲದೇ ನಿರಂತರವಾಗಿ ಬಿಸಿಲಿನ ಉಷ್ಣಾಂಶ ಹಾಗೂ ಗಾಳಿ, ಚಳಿ ಹೆಚ್ಚಾಗಿರುವುದರಿಂದ ಆಸ್ತಮಾ ಕಾಯಿಲೆಯಿಂದ ಬಳಲುತ್ತಿರುವ ಜನರಿಗೆ ಉಸಿರಾಟದ ಸಮಸ್ಯೆ ಕಾಡುತ್ತಿದೆ. ಮಕ್ಕಳು, ಮಧ್ಯ ವಯಸ್ಕರು ವೃದ್ಧರು ಹೆಚ್ಚಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರೊಂದಿಗೆ ದಿಢೀರ್ ಮಳೆ, ಬಿಸಿಲು ಬರುತ್ತಿರುವುದರಿಂದ ಮನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಂತು ಮಲೇರಿಯಾ ಸೊಳ್ಳೆಗಳ ಉತ್ಪತ್ತಿಯಾಗುವ ಸಾಧ್ಯತೆ ಇದೆ ಅನ್ನೋ ಅತಂಕವೂ ಎದುರಾಗಿದೆ.
ಕೊಡಗು ಜಿಲ್ಲೆಯಲ್ಲಿ ವಾತಾವರಣದಲ್ಲಿ ವೈಪರೀತ್ಯ ಆಗುತ್ತಲೇ ಇದೆ. ಬೆಳಗ್ಗೆ ಮೋಡ ಕವಿದ ವಾತಾವರಣ ಇದ್ದರೇ ಸಂಜೆ ವೇಳೆಗೆ ದಿಢೀರ್ ಮಳೆ ಸುರಿಯುತ್ತೆ. ಈ ರೀತಿಯ ಭಾರಿ ಮಳೆಯ ಜೊತೆಗೆ ನಗರದಲ್ಲಿ ತಾಪಮಾನದ ಕುಸಿತವು ಜನರ ಆರೋಗ್ಯದ ಮೇಲೆ ಪರಿಣಾಮ ಉಂಟು ಮಾಡುತ್ತಿದೆ. ನೆಗಡಿಯಿಂದ ಶುರುವಾಗಿ ನಂತರ ಗಂಟಲು ಕೆರೆತ, ಕೆಮ್ಮು, ಕಫಾ, ಜ್ವರದಿಂದ ಬಳಲುವ ಜನರು ಆಸ್ಪತ್ರೆ ಹಾಗೂ ಕ್ಲಿನಿಕ್ ಮೊರೆ ಹೋಗುತ್ತಿದ್ದಾರೆ. ಇದನ್ನೂ ಓದಿ: ಕಟ್ಟಡ ದುರಂತ ಸ್ಥಳಕ್ಕೆ ಭೇಟಿ ಕೊಟ್ಟ ಸಿಎಂ- ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಕೊಡಗು ಐದು ತಾಲೂಕಿನಲ್ಲಿ ದಿನವೊಂದಕ್ಕೆ 200 ರಿಂದ 300 ಜನರು ಆಸ್ಪತ್ರೆಯಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೇ ಅಕ್ಟೋಬರ್ ತಿಂಗಳಲ್ಲೇ ಸುಮಾರು 600 ರಿಂದ 700 ಜನರು ಚಿಕಿತ್ಸೆ ಪಡೆದು ಹೋಗಿದ್ದಾರೆ. ಅಷ್ಟೇ ಅಲ್ಲದೇ ಜನವರಿಯಿಂದ ಇಲ್ಲಿಯ ವರೆಗೂ… ಡೇಗ್ಯೂ ಜ್ವರ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮೀಣ ಭಾಗದ ಜನರಲ್ಲಿ ಅರೋಗ್ಯ ಇಲಾಖೆ ಜಾಗೃತಿ ಕಾರ್ಯವನ್ನು ಮಾಡಲಾಗುತ್ತಿದೆ. ಇದನ್ನೂ ಓದಿ: ಮುಡಾದಲ್ಲಿ ಜಿಲ್ಲಾಧಿಕಾರಿ ಪಾತ್ರವಿಲ್ಲ, ಲೋಕಾಯುಕ್ತರಿಗೆ ಸ್ಪಷ್ಟನೆ ನೀಡಿದ್ದೇನೆ: ಜಿ.ಕುಮಾರ ನಾಯಕ್