ವಾಷಿಂಗ್ಟನ್: ಒಂದು ಹಾವು ಹಾಗೂ ಅಳಿಲಿನ ಮಧ್ಯೆ ಮುಖಾಮುಖಿಯಾದರೆ ಏನಾಗುತ್ತೆ? ಸಾಮಾನ್ಯವಾಗಿ ಅಳಿಲು ಇಹಲೋಕ ತ್ಯಜಿಸುತ್ತೆ. ಆದರೆ ಯುಎಸ್‍ಎನಲ್ಲಿ ಒಂದು ಅಚ್ಚರಿ ನಡೆದಿದೆ. ಇಲ್ಲಿ ಅಳಿಲೊಂದು ಹಾವನ್ನು ತಿಂದು ಸದ್ಯ ಸಖತ್ ಸುದ್ದಿಯಲ್ಲಿದೆ.
ಹೌದು. ಹೀಗೆ ಹಾವೊಂದನ್ನು ಅಳಿಲು ಹಿಡುದು ತಿನ್ನುತ್ತಿರುವ ಫೋಟೋವೊಂದನ್ನು ಅಮೆರಿಕದ ನ್ಯಾಷನಲ್ ಪಾರ್ಕ್ ಸರ್ವಿಸ್ ತನ್ನ ಅಧಿಕೃತ ಫೇಸ್‍ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡಿದೆ. ಹಾಗೆಯೇ ಈ ಫೋಟೋವನ್ನು ಗಡಾಲ್ಪೆ ಶಿಖರದ ನ್ಯಾಷನಲ್ ಪಾರ್ಕ್ ನಲ್ಲಿ ಸೆರೆ ಹಿಡಿದಿದ್ದು ಅಲ್ಲಿನ ಅಳಿಲುಗಳು ಸಾಧಾರಣವಾಗಿ ಸಸ್ಯವನ್ನೇ ಸೇವಿಸುತ್ತವೆ. ಹಣ್ಣು, ಒಣ ಹಣ್ಣು ಇತ್ಯಾದಿ ಹೀಗೆ. ಆದರೆ, ಹಕ್ಕಿಯ ಮೊಟ್ಟೆ, ಹಲ್ಲಿ ಹಾಗೂ ಹಾವನ್ನು ಕೂಡ ಅಳಿಲುಗಳು ತಿನ್ನುತ್ತವೆ ಎಂಬುದು ಗೊತ್ತಾ? ಅಷ್ಟೇ ಅಲ್ಲದೆ ಈ ಫೊಟೋವನ್ನು ಕ್ಲಿಕ್ಕಿಸಿದ ಕೆಲ ಸಮಯದಲ್ಲೇ ಅಳಿಲು ಹಾವನ್ನು ಇಡಿಯಾಗಿ ತಿಂದು, ಕೊನೆಯದಾಗಿ ಎರಡು ಇಂಚಷ್ಟೇ ಉಳಿಸಿತ್ತು ಎಂದು ಫೋಟೋಗೆ ಕ್ಯಾಪ್ಷನ್ ಕೂಡ ಬರೆಯಲಾಗಿದೆ.
Advertisement
https://www.facebook.com/nationalparkservice/photos/a.10151984491216389/10156047373616389
Advertisement
ಹಫಿಂಗ್ಟನ್ ಪೋಸ್ಟ್ ಪ್ರಕಾರ, ಈ ಫೋಟೋ ಹತ್ತು ವರ್ಷದಷ್ಟು ಹಳೆಯದು. ಉದ್ಯಾನದ ರೇಂಜರ್ ವಿಲಿಯಂ ಲೆಗೆಟ್ 2009ರಲ್ಲಿ ಈ ಸೆರೆ ಹಿಡಿದ ಫೋಟೋವನ್ನು ಸೆರೆಹಿಡಿದಿದ್ದರು. ಆದರೆ ಮೇ 10ರಂದು ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಹಾವನ್ನು ನೋಡಿದ ಮೇಲೆ ಸ್ವರಕ್ಷಣೆಗೆ ಹೀಗೆ ಮಾಡಿದೆ ಎಂದು ಅಮೆರಿಕದ ನ್ಯಾಷನಲ್ ಪಾರ್ಕ್ ಸರ್ವೀಸ್ ಹೇಳಿದೆ.
Advertisement
Advertisement
ಇಲ್ಲಿಯರೆಗೆ ಈ ಫೋಟೋವನ್ನು ಸುಮಾರು 3 ಸಾವಿರಕ್ಕೂ ಅಧಿಕ ಬಾರಿ ಷೇರ್ ಮಾಡಿದ್ದು, 7 ಸಾವಿರಕ್ಕೂ ಅಧೀಕ ಮಂದಿ ರಿಯಾಕ್ಟ್ ಮಾಡಿದ್ದಾರೆ. ತುಂಬಾ ಹಳೆಯ ಫೋಟೋವಾಗಿದ್ದರೂ ಈಗ ಇದು ನೆಟ್ಟಿಗರನ್ನು ಅಚ್ಚರಿಗೊಳಿಸುತ್ತಿದೆ.