ಲಕ್ನೋ: ರಕ್ತದ ಬದಲಿಗೆ ಡ್ರಿಪ್‍ನಲ್ಲಿ ಮೊಸಂಬಿ ಜ್ಯೂಸ್ (Mosambi Juice) ಹಾಕಿದ್ದರಿಂದ ಡೆಂಗ್ಯೂ ಹೊಂದಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ ಹಿನ್ನೆಲೆ ಇದೀಗ ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
प्रयागराज में मानवता शर्मसार हो गयी।
एक परिवार ने आरोप लगाया है कि झलवा स्थित ग्लोबल हॉस्पिटल ने डेंगू के मरीज प्रदीप पांडेय को प्लेटलेट्स की जगह मोसम्मी का जूस चढ़ा दिया।
मरीज की मौत हो गयी है।
इस प्रकरण की जाँच कर त्वरित कार्यवाही करें। @prayagraj_pol @igrangealld pic.twitter.com/nOcnF3JcgP
— Vedank Singh (@VedankSingh) October 19, 2022
Advertisement
ವೈರಲ್ ಆಗುತ್ತಿರುವ ವೀಡಿಯೋದಲ್ಲಿ ರಕ್ತದ ಡ್ರಿಪ್ ಬದಲಿಗೆ ಮೊಸಂಬಿ ರಸ ಹಾಕಿರುವುದನ್ನು ಕಾಣಬಹುದಾಗಿದೆ. ಪ್ರಯಾಗ್‍ರಾಜ್‍ನ (Prayagraj) ಝಲ್ವಾ (Jhalwa) ಪ್ರದೇಶದಲ್ಲಿ ಡೆಂಗ್ಯೂ ರೋಗಿಗಳಿಗೆ ನಕಲಿ ಪ್ಲಾಸ್ಮಾ ಸರಬರಾಜು ಮಾಡಲಾಗುತ್ತಿದೆ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಲು ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಜನರಲ್ ರಾಕೇಶ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಅಧಿಕಾರಕ್ಕೆ ಬಂದ ಕೆಲವೇ ವಾರಗಳಲ್ಲಿ ಬ್ರಿಟನ್ ಪ್ರಧಾನಿ ಸ್ಥಾನಕ್ಕೆ ಲಿಜ್ ಟ್ರಸ್ ರಾಜೀನಾಮೆ
Advertisement
UP | We’ve formed a team with CMO & sent to the spot. Report to be submitted within a few hours. Strict action will be taken: Dy CM Brajesh Pathak on fake plasma being supplied to a dengue patient in UP https://t.co/D7IAkMy1dw pic.twitter.com/fbp3aSh3Wm
— ANI UP/Uttarakhand (@ANINewsUP) October 20, 2022
Advertisement
ಪ್ರಯಾಗ್‍ರಾಜ್‍ನ (ಹಿಂದೆ ಅಲಹಾಬಾದ್) ಝಲ್ವಾ ಪ್ರದೇಶದ ಗ್ಲೋಬಲ್ ಆಸ್ಪತ್ರೆಯಲ್ಲಿ ಆಗುತ್ತಿರುವ ವಂಚನೆ ಕುರಿತಂತೆ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದು, ವೈದ್ಯರು ರಕ್ತದ ಪ್ಲಾಸ್ಮಾ ಅಗತ್ಯವಿರುವ ರೋಗಿಗಳಿಗೆ ಮೊಸಂಬಿ ರಸವನ್ನು ಡ್ರಿಪ್‍ನಲ್ಲಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವೀಡಿಯೊದಲ್ಲಿ ವ್ಯಕ್ತಿ ರಕ್ತದ ಪ್ಯಾಕ್ ಅನ್ನು ಹಿಡಿದುಕೊಂಡಿದ್ದು, ಅದನ್ನು ಹಿಂತಿರುಗಿಸಿದಾಗ ಮೊಸಂಬಿ ರಸ ಇರುವುದನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಬೊಮ್ಮಾಯಿ ಕುಂಟಿಕೊಂಡು ಏನ್ ಮಾಡ್ತಾರೆ, ಬಿಎಸ್‍ವೈಗೆ ನೆನಪಿನ ಶಕ್ತಿಯೇ ಇಲ್ಲ: ಮೊಯ್ಲಿ ಲೇವಡಿ
Advertisement
ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ (Deputy Chief Minister Brajesh Pathak) ಈ ಬಗ್ಗೆ ತನಿಖೆ ನಡೆಸಲು ನಾವು ಸಿಎಂಒ ಜೊತೆ ತಂಡವನ್ನು ರಚಿಸಿದ್ದೇವೆ ಮತ್ತು ಅವರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ಕೆಲವೇ ಗಂಟೆಗಳಲ್ಲಿ ವರದಿ ಸಲ್ಲಿಸಲಾಗುವುದು. ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.