
ಮುಂಬೈ: ಟೀಂ ಇಂಡಿಯಾ ಮಾಜಿ ವೇಗಿ ಜಹೀರ್ ಖಾನ್ ಹಾಗೂ ಸಾಗರಿಕಾ ಘಾಟ್ಗೆ ಅವರ ಮದುವೆ ಆರತಕ್ಷತೆ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ನಾಯಕವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಡಾನ್ಸ್ ಮಾಡಿ ಸಂಭ್ರಮಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜಹೀರ್ ಖಾನ್ ಹಾಗೂ ನಟಿ ಸಾಗರಿಕಾ ಘಾಟ್ಗೆ ಜೋಡಿ ನ. 23 ರಂದು ಸರಳ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸರಳವಾಗಿ ನಡೆದ ಮದುವೆ ಸಮಾರಂಭದಲ್ಲಿ ಕೆಲ ಆಪ್ತ ಕುಟುಂಬ ಸದಸ್ಯರಷ್ಟೇ ಭಾಗವಹಿಸಿದ್ದರು.
https://www.youtube.com/watch?v=wt4E0UjUW0o
ಮದುವೆ ನಂತರ ಕುಟುಂಬದ ಗೆಳೆಯರು ಹಾಗೂ ಸ್ನೇಹಿತರಿಗಾಗಿ ಮುಂಬೈನಲ್ಲಿ ಆಯೋಜಿಸಿದ್ದ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಕ್ರಿಕೆಟ್ ಆಟಗಾರರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಈ ವೇಳೆ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಡಾನ್ಸ್ ಮಾಡಿ ಸಂಭ್ರಮಿಸಿದರು. ಅಲ್ಲದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜಹೀರ್ ಖಾನ್ ಕೊಹ್ಲಿ, ಅನುಷ್ಕಾ ಜೋಡಿಗೆ ಸಾತ್ ನೀಡಿ ಮಸ್ತ್ ಡ್ಯಾನ್ಸ್ ಮಾಡಿದ್ದಾರೆ.
ಇದೇ ಮೊದಲಲ್ಲ: ಕೊಹ್ಲಿ ಹಾಗೂ ಅನುಷ್ಕಾ ಜೋಡಿ ಈ ಹಿಂದೆ ಗೋವಾದಲ್ಲಿ ಯುವರಾಜ್ ಸಿಂಗ್ ಹಾಗೂ ನಟಿ ಹ್ಯಾಝೆಲ್ ಕೀಚ್ ಜೋಡಿಯ ಮದುವೆ ಸಮಾರಂಭದಲ್ಲೂ ತಮ್ಮ ಡಾನ್ಸ್ ಮೂಲಕ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡಿದ್ದರು. ಈ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕತ್ ವೈರಲ್ ಆಗಿತ್ತು.