ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ತವರಿನಲ್ಲಿ 100 ಏಕದಿನ ಪಂದ್ಯವನ್ನು ಆಡುವ ಮೂಲಕ ನೂತನ ಮೈಲಿಗಲ್ಲು ನೆಟ್ಟಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್‍ನಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಆಡುವ ಮೂಲಕ ವಿರಾಟ್ ಕೊಹ್ಲಿ ಈ ನೂತನ ಮೈಲಿಗಲ್ಲಿಗೆ ಪಾತ್ರರಾಗಿದ್ದಾರೆ. ಈ ಮೂಲಕ ಭಾರತ ಕಂಡ ಶ್ರೇಷ್ಠ ಆಟಗಾರರಾದ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ, ಯುವರಾಜ್ ಸಿಂಗ್ ಅವರೊನ್ನೊಳಗೊಂಡ ಎಲೈಟ್ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಇದನ್ನೂ ಓದಿ: ನೆಟ್ಟಿಗರಿಂದ ಟ್ರೋಲ್ ಆಯ್ತು ಎಸ್‍ಆರ್‌ಹೆಚ್ ಹೊಸ ಜೆರ್ಸಿ
ತವರಿನಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನಾಡಿರುವ ಭಾರತೀಯ ಆಟಗಾರರ ಪೈಕಿ ಸಚಿನ್ ತೆಂಡೂಲ್ಕರ್ 164 ಏಕದಿನ ಪಂದ್ಯಗಳನ್ನು ಆಡಿ 20 ಶತಕ ಸಹಿತ 6,976 ರನ್ ಸಿಡಿಸಿದ್ದಾರೆ. ನಂತರ ಧೋನಿ 127 ಪಂದ್ಯಗಳಿಂದ 7 ಶತಕ ಸಹಿತ 4,351 ರನ್ ಕಳೆಹಾಕಿದ್ದಾರೆ. ಮೊಹಮ್ಮದ್ ಅಜರುದ್ದೀನ್ 113 ಪಂದ್ಯಗಳಿಂದ 3 ಶತಕ ಸಹಿತ 3,163 ರನ್ ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ಯುವರಾಜ್ ಸಿಂಗ್ ಇದ್ದು, ಯುವಿ 108 ಪಂದ್ಯಗಳಿಂದ 7 ಶತಕ ಸಹಿತ 3,415 ರನ್ ಬಾರಿಸಿದ್ದಾರೆ. ಇದೀಗ ವಿರಾಟ್ ಕೊಹ್ಲಿ 100 ಪಂದ್ಯಗಳಿಂದ 19 ಶತಕ ಸಹಿತ 5,002 ರನ್ ಬಾರಿಸಿ 5ನೇ ಆಟಗಾರರಾಗಿ ಈ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. ಇದನ್ನೂ ಓದಿ: ಭಾರತ vs ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡ ವಿಶೇಷ ಅತಿಥಿಗಳು
ಕೊಹ್ಲಿ ಈ ಪಟ್ಟಿಯಲ್ಲಿ ಸಚಿನ್ ಬಳಿಕ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ಸಾಧನೆ ಮಾಡಿದ್ದು, ಈ ಪಟ್ಟಿಯಲ್ಲಿ ಅಗ್ರ 5 ಕ್ರಮಾಂಕದಲ್ಲಿರುವವರ ಪೈಕಿ ಕೊಹ್ಲಿ ಮಾತ್ರ ಟೀಂ ಇಂಡಿಯಾದಲ್ಲಿ ಆಡುತ್ತಿದ್ದು, ಉಳಿದವರು ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ ಎಂಬುದು ಗಮನಾರ್ಹವಾಗಿದೆ.