ಚೆನ್ನೈ: ಟಿ20 ವಿಶ್ವಕಪ್ (T20 WorldCup) ನಲ್ಲಿ ಪಾಲ್ಗೊಳ್ಳಲು ಆಸ್ಟ್ರೇಲಿಯಾಕ್ಕೆ ಬಂದಿಳಿದಿರುವ ಟೀಂ ಇಂಡಿಯಾ (Team India) ಕಾಂಗರೂ ನಾಡಿನಲ್ಲಿ ಅಭ್ಯಾಸ ಆರಂಭಿಸಿದೆ. ಏಷ್ಯಾಕಪ್ -2022 (AisaCup) ಗ್ರೇಟ್ ಕಂಬ್ಯಾಕ್ ಆಗಿರುವ ವಿರಾಟ್ ಕೊಹ್ಲಿ ಅವರಿಂದ ಭರ್ಜರಿ ರನ್‌ಗಳನ್ನ ಅಭಿಮಾನಿಗಳು ಎದುರುನೋಡುತ್ತಿದ್ದಾರೆ. ಇಂತಹ ಹೊತ್ತಿನಲ್ಲಿ ಕೊಹ್ಲಿಯನ್ನು ಬಂಧಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
Virat is always abusive and aggressive towards the players.That's what his fans learn from him and his criminal fan literally took an innocent life,& shameless people are making this incident as meme material,Virat should be behind the bar asap.#ArrestKohli #JusticeForVignesh pic.twitter.com/Q6m3IVv1j8
— Jyran (@Jyran45) October 15, 2022
Advertisement
#ArrestKohli ಹ್ಯಾಶ್‌ಟ್ಯಾಗ್‌ನೊಂದಿಗೆ ಅಭಿಯಾನ ಶುರುವಾಗಿದ್ದು, ವಿರಾಟ್ ಕೊಹ್ಲಿ (Virat Kohli) ಅವರನ್ನ ಅರೆಸ್ಟ್ ಮಾಡುವಂತೆ ಒತ್ತಾಯಿಸಿದ್ದಾರೆ. ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳ ಗಲಾಟೆಯಲ್ಲಿ ಸಂಭವಿಸಿದ ದುರಂತದಿಂದ ಇದೀಗ ಸ್ಟಾರ್‌ಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಇದನ್ನೂ ಓದಿ: ಬಿಸಿಸಿಐಗೆ ಜಿಎಸ್‍ಟಿ ಬರೆ – 2023ರ ವಿಶ್ವಕಪ್‍ಗೂ ಮುನ್ನ 955 ಕೋಟಿ ರೂ. ನಷ್ಟದ ಭೀತಿ
Advertisement
Advertisement
ಘಟನೆಗೆ ಕಾರಣವೇನು?
ವಿರಾಟ್ ಕೊಹ್ಲಿ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬಗ್ಗೆ ಸ್ನೇಹಿತರಿಬ್ಬರ ನಡುವೆ ನಡೆದ ಚರ್ಚೆ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ತಮಿಳುನಾಡಿನ (Tamilnadu) ಅರಿಯಾಲೂರ್ ಜಿಲ್ಲೆಯಲ್ಲಿ ನಡೆದಿದೆ. ಆರ್‌ಸಿಬಿ ತಂಡವನ್ನು ಲೇವಡಿ ಮಾಡಿದ್ದ ಕಾರಣಕ್ಕಾಗಿ ಸ್ನೇಹಿತ ಮುಂಬೈ ಇಂಡಿಯನ್ಸ್ ಹಾಗೂ ರೋಹಿತ್ ಶರ್ಮಾ ಅಭಿಮಾನಿಯನ್ನು ಕೊಲೆ ಮಾಡಿದ್ದಾನೆ.
Advertisement
ಕೊಲೆ ಆರೋಪಿಯನ್ನು ಈಗಾಗಲೇ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಮದ್ಯ ಸೇವಿಸಿ ಇಬ್ಬರೂ ಸ್ನೇಹಿತರು ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಕುರಿತಾಗಿ ಅಭಿಮಾನದಿಂದ ವಾಗ್ವಾದ ಮಾಡುತ್ತಿದ್ದರು. ವಾಗ್ವಾದ ವಿಕೋಪಕ್ಕೆ ತಿರುಗಿ ಧರ್ಮರಾಜ್ ತನ್ನ ಸ್ನೇಹಿತನಾಗಿದ್ದ ವಿಘ್ನೇಶ್‌ನನ್ನು ಬಾಟಲಿಯಿಂದ ಹೊಡೆದು ಸಾಯಿಸಿದ್ದಾನೆ. ಇದನ್ನೂ ಓದಿ: ಲಂಕನ್ನರಿಗೆ ಲಗಾಮು ಹಾಕಿ 7ನೇ ಬಾರಿ ಏಷ್ಯಾಕಪ್ ಗೆದ್ದ ಭಾರತ
Everyone is quite just bcoz he was fan of Rohit Sharma
We Want Justice Modi Ji ????#ArrestKohli pic.twitter.com/seGvRlQka7
— MonK. (@EcclestoneEra) October 14, 2022
ಘಟನೆಯ ಬೆನ್ನಲ್ಲೇ ರೋಹಿತ್ ಶರ್ಮಾ ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ (Social Media) ವಿರಾಟ್ ಕೊಹ್ಲಿಯನ್ನು ಬಂಧಿಸಿ ಎನ್ನುವ ಅಭಿಯಾನ ಆರಂಭಿಸಿದ್ದಾರೆ. ಇದಕ್ಕೆ ಕೌಂಟರ್ ನೀಡುವ ಪ್ರಯತ್ನವನ್ನು ಕೊಹ್ಲಿ ಹಾಗೂ ಆರ್‌ಸಿಬಿ ಅಭಿಮಾನಿಗಳು ಮಾಡಿದ್ದಾರೆ.
ಐಪಿಎಲ್‌ನಲ್ಲಿ (IPL) ಕಾದಾಡುವ ಇದೇ ಆಟಗಾರರು, ಟೀಂ ಇಂಡಿಯಾ ಪರ ಒಟ್ಟಿಗೇ ಕಣಕ್ಕಿಳಿಯುವ ಮೂಲಕ ದೇಶವೇ ಗರ್ವ ಪಡುವಂತಹ ರೀತಿಯಲ್ಲಿ ಆಡುತ್ತಿದ್ದಾರೆ. ಆದರೆ ಹುಟ್ಟು ಅಭಿಮಾನದಿಂದ ಆಗಿರುವ ಘಟನೆ ಸ್ಟಾರ್ ಕ್ರಿಕೆಟಿಗರಿಗೆ ತಲೆನೋವುಂಟು ಮಾಡಿದೆ.