ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಳಿಕ ಕ್ರಿಕೆಟ್ ಲೋಕದ ಕಿಂಗ್ ವಿರಾಟ್ ಕೊಹ್ಲಿ (Virat Kohli) ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.
ಕಳೆದ ವರ್ಷ ಚಾಂಪಿಯನ್ ಪಟ್ಟ ಗೆಲ್ಲುತ್ತಿದ್ದಂತೆ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಕಿಂಗ್ ಕೊಹ್ಲಿ, ಇದೀಗ ಟೆಸ್ಟ್ ಕ್ರಿಕೆಟ್‌ಗೂ (Test Cricket) ವಿದಾಯ ಘೋಷಿಸಿದ್ದಾರೆ. ಎ+ ಶ್ರೇಣಿ ಆಟಗಾರನಾಗಿರುವ ಕೊಹ್ಲಿ ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯಲಿದ್ದಾರೆ.
2011ರಲ್ಲಿ ಕಿಂಗ್ ಸ್ಟನ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್‌ಗೆ ಕೊಹ್ಲಿ ಪದಾರ್ಪಣೆ ಮಾಡಿದ್ದರು. ಇದುವರೆಗೆ ಟೀಂ ಇಂಡಿಯಾ 123 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ 46.85 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕಗಳು, 31 ಅರ್ಧಶತಕಗಳೂ ಸೇರಿವೆ. ಇನ್ನೂ ನಾಯಕನಾಗಿ 68 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ 40 ಪಂದ್ಯಗಳಲ್ಲಿ ಜಯ ತಂದುಕೊಟ್ಟಿದ್ದಾರೆ. ಕಳೆದ 14 ವರ್ಷಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ದಿಗ್ಗಜರ ದಾಖಲೆಗಳನ್ನ ಮುರಿದು ಮೆರೆದಾಡಿದ ಕೊಹ್ಲಿ ಈಗ ನಿವೃತ್ತಿ ಹೇಳಿದ್ದಾರೆ.
Tests – 123.
Runs – 9,230.
Average – 46.85.
Hundreds – 30.
Fifties – 31.
Tests as captain – 68.
Wins as captain – 40.
ONE OF THE MOST DECORATED PLAYERS IN INDIAN TEST HISTORY – VIRAT KOHLI. 🐐 pic.twitter.com/ep8z6M1P5e
— Mufaddal Vohra (@mufaddal_vohra) May 12, 2025
ಈ ಕುರಿತು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಭಾವುಕ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಪ್ರಯಾಣವು ನನ್ನನ್ನು ಇಷ್ಟು ದೊಡ್ಡ ಮಟ್ಟಕ್ಕೆ ತಂದು ನಿಲ್ಲಿಸುತ್ತದೆ ಅಂತ ಎಂದಿಗೂ ಊಹಿಸಿರಲಿಲ್ಲ. ಅದು ನನ್ನನ್ನು ಪರೀಕ್ಷಿಸಿತು, ನನ್ನನ್ನು ರೂಪಿಸಿತು ಮತ್ತು ನನಗೆ ಪಾಠಗಳನ್ನು ಕಲಿಸಿತು. ನಾನು ಯಾವಾಗಲೂ ನನ್ನ ಟೆಸ್ಟ್ ವೃತ್ತಿಜೀವನವನ್ನು ಸಂತೋಷದಿಂದ ನೋಡುತ್ತೇನೆ.
THE LAST TEST CENTURY OF VIRAT KOHLI IN TEST CRICKET. 🥹pic.twitter.com/RLa7vEhdGp
— Mufaddal Vohra (@mufaddal_vohra) May 12, 2025
ನಾನು ಈ ಸ್ವರೂಪದ ದೂರ ಸರಿಯುವುದು ಸುಲಭದ ಮಾತಲ್ಲ, ಆದ್ರೆ ಇದು ಸೂಕ್ತ ಸಮಯ. ಟೆಸ್ಟ್ ಗಾಗಿ ನಾನು ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ. ಹಾಗಾಗಿ ನಿರೀಕ್ಷೆಗಿಂತ ಹೆಚ್ಚಿನದ್ದನ್ನು ಅದು ನನಗೆ ಹಿಂತಿರುಗಿಸಿದೆ. ನಾನು ಜನರಿಗಾಗಿ ಮೈದಾನಕ್ಕಿಳಿದಾಗ ದಾರಿಯುದ್ದಕ್ಕೂ ನನ್ನನ್ನು ನೋಡುವಂತೆ ಮಾಡಿದ ಪ್ರತಿಯೊಬ್ಬ ಅಭಿಮಾನಿಗಳು ಕೃತಜ್ಞತೆ ಸಲ್ಲಿಸುತ್ತೇನೆ… ನಾನು ಹೊರಡುತ್ತಿದ್ದೇನೆ ಎಂದು ಭಾವುಕರಾಗಿ ಬರೆದುಕೊಂಡಿದ್ದಾರೆ.