CricketLatestMain PostSports

ಇನ್‍ಸ್ಟಾಗ್ರಾಮ್‍ನಲ್ಲಿ ದಾಖಲೆ ಬರೆದ ವಿರಾಟ್ ಕೊಹ್ಲಿ

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಯು ಇನ್‍ಸ್ಟಾಗ್ರಾಮ್‍ನಲ್ಲಿ 200 ಮಿಲಿಯನ್ ಫಾಲೋವರ್ಸ್‍ಗಳನ್ನು ಗಳಿಸಿದ ಭಾರತದ ಮೊದಲ ಕ್ರೀಡಾಪಟುವಾಗಿ ಹೊರ ಹೊಮ್ಮಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್‍ಸ್ಟಾಗ್ರಾಮ್‍ನಲ್ಲಿ 200 ಮಿಲಿಯನ್ (20 ಕೋಟಿ) ಫಾಲೋವರ್ಸ್ ಹೊಂದಿದ ಭಾರತದ ಮೊದಲ ಹಾಗೂ ಜಗತ್ತಿನ ಒಟ್ಟಾರೆ 3ನೇ ಆಟಗಾರನೆನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಅಭಿಮಾನಿಗಳಿಗೆ ಅಪ್‍ಡೇಟ್ ನೀಡುತ್ತಿರುತ್ತಾರೆ.

 

View this post on Instagram

 

A post shared by Virat Kohli (@virat.kohli)

ಜೀವನದ ಕೆಲವು ಗುರಿಗಳು, ಪತ್ನಿ ಅನುಷ್ಕಾ ಶರ್ಮಾ ಜತೆಗಿನ ಸುಂದರ ಕ್ಷಣಗಳ ಫೋಟೋಗಳು, ತಮ್ಮ ವರ್ಕೌಟ್ ವೀಡಿಯೋಗಳನ್ನು ಹಂಚಿಕೊಳ್ಳುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ.

ಈ ಮೈಲಿಗಲ್ಲು ಸಾಧಿಸಿದ್ದಕ್ಕೆ, ಬಲಿಷ್ಠ 200 ಮಿಲಿಯನ್ ಇನ್‍ಸ್ಟಾಗ್ರಾಮ್ ಕುಟುಂಬಕ್ಕೆ ಅನಂತ ಧನ್ಯವಾದಗಳು ಎಂದು ತಮ್ಮ ಜೀವನದ ಅಮೂಲ್ಯ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ಪೋಸ್ಟ್ ಮಾಡಿದ್ದಾರೆ.

ಫುಟ್ಬಾಲ್ ದಿಗ್ಗಜರಾದ ಕ್ರಿಸ್ಟಿಯಾನೋ ರೊನಾಲ್ಡೋ ಹಾಗೂ ಲಿಯೋನೆಲ್ ಮೆಸ್ಸಿ ಅತಿಹೆಚ್ಚು ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಮೊದಲೆರಡು ಸ್ಥಾನ ಹಂಚಿಕೊಂಡಿದ್ದಾರೆ.

ಪೋರ್ಚುಗಲ್‍ನ ಕ್ರಿಸ್ಟಿಯಾನೋ ರೊನಾಲ್ಡೋ 450 ಮಿಲಿಯನ್ ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, 333 ಮಿಲಿಯನ್ ಇನ್‍ಸ್ಟಾಗ್ರಾಮ್ ಫಾಲೋವರ್ಸ್ ಹೊಂದಿರುವ ಲಿಯೋನೆಲ್ ಮೆಸ್ಸಿ ಅತಿಹೆಚ್ಚು ಫಾಲೋವರ್ಸ್ ಹೊಂದಿದ ಕ್ರೀಡಾಪಟುಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

Leave a Reply

Your email address will not be published.

Back to top button