ಮುಂಬೈ: ಬ್ಯಾಟಿಂಗ್ ಲಯಕ್ಕೆ ಮರಳಿರುವ ಟೀಂ ಇಂಡಿಯಾದ ರನ್ ಮಷಿನ್ ಕೊಹ್ಲಿ (Virat Kohli)ಒಂದಿಲ್ಲೊಂದು ದಾಖಲೆ ಬರೆಯುತ್ತಲೇ ಇದ್ದಾರೆ. ಏಷ್ಯಾಕಪ್‌ನಲ್ಲಿ (Asia Cup) ಚೊಚ್ಚಲ ಶತಕ ಬಾರಿಸಿ ಅಬ್ಬರಿಸಿದ ಕೊಹ್ಲಿಗೆ ಈಗ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದ್ದು ದಾಖಲೆ ಬರೆದಿದ್ದಾರೆ.
ಏಷ್ಯಾಕಪ್ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನದ (Afghanistan) ವಿರುದ್ಧ ಭರ್ಜರಿ ಶತಕ ಸಿಡಿಸಿ ಮಿಂಚಿದ ಕಿಂಗ್ ಕೊಹ್ಲಿ ಇದೀಗ ಟ್ವಿಟರ್‌ನಲ್ಲಿ (Twitter) ಅತಿ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ ಮೊದಲ ಕ್ರಿಕೆಟಿಗ (Cricketer)ನಾಗಿದ್ದಾರೆ.
Advertisement
Thank you for all the love and support throughout the Asia Cup campaign. We will get better and come back stronger. Untill next time ❤️???????? pic.twitter.com/yASQ5SbsHl
— Virat Kohli (@imVkohli) September 9, 2022
Advertisement
ವಿರಾಟ್ ಕೊಹ್ಲಿ (Virat Kohli) ತಮ್ಮ ಅಧಿಕೃತ ಟ್ವಿಟರ್ (Twitter) ಖಾತೆಯಲ್ಲಿ 5 ಕೋಟಿ ಹಿಂಬಾಲಕರನ್ನು ತಲುಪಿದ್ದಾರೆ. ಆ ಮೂಲಕ ಟ್ವಿಟರ್‌ನಲ್ಲಿ 5 ಕೋಟಿ ಹಿಂಬಾಲಕರನ್ನು ಹೊಂದಿದ ವಿಶ್ವದ ಮೊದಲ ಕ್ರಿಕೆಟಿಗನಾಗಿ ಕೊಹ್ಲಿ ಹೊರಹೊಮ್ಮಿದ್ದಾರೆ. ಇದನ್ನೂ ಓದಿ: ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ
Advertisement
Advertisement
ಇನ್‌ಸ್ಟಾಗ್ರಾಂ ಖಾತೆಯಲ್ಲಿ ಈಗಾಗಲೇ 21.1 ಕೋಟಿ ಫಾಲೋವರ್ಸ್‌ಗಳನ್ನು ಹೊಂದಿರುವ ಕೊಹ್ಲಿ ವಿಶ್ವದ ಮೊದಲ ಕ್ರಿಕೆಟಿಗ ಹಾಗೂ ವಿಶ್ವದ 3ನೇ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ 4.9 ಕೋಟಿ ಫಾಲೋವರ್ಸ್ ಹೊಂದಿದ್ದಾರೆ. ಒಟ್ಟಾರೆಯಾಗಿ ಕಿಂಗ್ ಕೊಹ್ಲಿ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ 31 ಕೋಟಿ ಫಾಲೋವರ್ಸ್ಗಳನ್ನ ಹೊಂದಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಈ ಸಮಯ ಕಳೆದು ಹೋಗುತ್ತದೆ ಎಂದಿದ್ದ ಬಾಬರ್‌ಗೆ ಟಾಂಗ್ – ಈ ಸಮಯ ಕಳೆದು ಹೋಗಲ್ಲ ಎಂದ ಫ್ಯಾನ್ಸ್
ಲಯಕ್ಕೆ ಮರಳಿರುವ ಕೊಹ್ಲಿ ಏಷ್ಯಾಕಪ್ ಟೂರ್ನಿಯಲ್ಲಿ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಫಿಫ್ಟಿ ಸಿಡಿದರು. ಬಳಿಕ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿ ನಿರ್ಮಿಸಿದರು. ಅಫ್ಘಾನಿಸ್ತಾನದ ವಿರುದ್ಧ ನಡೆದ ಕೊನೆಯ ಪಂದ್ಯದಲ್ಲಿ ಕೇವಲ 61 ಎಸೆತಗಳಲ್ಲಿ 122 ರನ್‌ಗಳಿಸಿ ಅಜೇಯರಾಗುಳಿದರು.
ಮ್ಯಾಂಚೆಸ್ಟರ್ ಫುಟ್‌ಬಾಲ್ ಸ್ಟಾರ್ ಕ್ರಿಸ್ಟಿಯಾನೋ ರೊನಾಲ್ಡೋ ಟ್ವಿಟ್ಟರ್‌ನಲ್ಲಿ 10.3 ಕೋಟಿ ಫಾಲೋವರ್ಸ್ಗಳನ್ನು ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಲಾಸ್ ಏಂಜಲೀಸ್‌ನ ಬಾಸ್ಕೆಟ್ ಬಾಲ್ ತಾರೆ ಲೆಬ್ರಾನ್ ಜೇಮ್ಸ್ 5.2 ಕೋಟಿಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.