T20 ವಿಶ್ವಕಪ್‍ನಲ್ಲಿ ಕೊಹ್ಲಿ ಕಿಂಗ್ – ನೂತನ ವಿಶ್ವದಾಖಲೆ

Public TV
2 Min Read
VIRAT KOHLI 4

ಪರ್ತ್: ಟೀಂ ಇಂಡಿಯಾದ ಬ್ಯಾಟ್ಸ್‌ಮ್ಯಾನ್‌ ವಿರಾಟ್ ಕೊಹ್ಲಿ (Virat Kohli) ಟಿ20 ವಿಶ್ವಕಪ್‍ನಲ್ಲಿ (T20 World Cup) ಅತೀ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ನೂತನ ದಾಖಲೆ ಬರೆದಿದ್ದಾರೆ.

VIRAT KOHLI 3

ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‍ನಲ್ಲಿ ಭಾರತದ ಪರ 1,000 ರನ್ ಸಿಡಿಸಿದ ಮೊದಲ ಬ್ಯಾಟ್ಸ್‌ಮ್ಯಾನ್‌ ಎಂಬ ದಾಖಲೆಯ ಒಡೆಯನಾಗಿದ್ದ ಕೊಹ್ಲಿ, ಬಾಂಗ್ಲಾದೇಶ (Bangladesh) ವಿರುದ್ಧದ ಪಂದ್ಯದಲ್ಲಿ 15 ರನ್ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್‍ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ಬರೆದರು. ಈ ಮೂಲಕ ಟಿ20 ವಿಶ್ವಕಪ್‍ನಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ (Mahela Jayawardene) 1,016 ರನ್ ಬಾರಿಸಿ ಬರೆದಿದ್ದ ದಾಖಲೆಯನ್ನು ಕೊಹ್ಲಿ ಮುರಿದು ನೂತನ ದಾಖಲೆಯ ಒಡೆಯನಾಗಿದ್ದಾರೆ. ಇದನ್ನೂ ಓದಿ: ಬಾಂಗ್ಲಾಗೆ 185 ರನ್‍ಗಳ ಬೃಹತ್ ಟಾರ್ಗೆಟ್ ನೀಡಿದ ಭಾರತ

VIRAT KOHLI 2

ಟಿ20 ವಿಶ್ವಕಪ್‍ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಬರೆದಿದ್ದ ಮಹೇಲ ಜಯವರ್ಧನೆ 31 ಇನ್ನಿಂಗ್ಸ್‌ಗಳಿಂದ 1,016 ರನ್ ಬಾರಿಸಿದ್ದರು. ಈ ದಾಖಲೆಯನ್ನು ಕೊಹ್ಲಿ 23 ಇನ್ನಿಂಗ್ಸ್‌ಗಳಿಂದ 1,017 ರನ್ ಬಾರಿಸಿ ಮುರಿದರು. ಇದಲ್ಲದೆ ಈ ಬಾರಿಯ ಟಿ20 ವಿಶ್ವಕಪ್‍ನಲ್ಲಿ ಕ್ರಮವಾಗಿ 84, 62, 12, 64 ರನ್ ಬಾರಿಸಿ ಒಟ್ಟು 220 ರನ್ ಚಚ್ಚಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‍ನಲ್ಲಿ ಒಟ್ಟು 3,932 ರನ್ ಬಾರಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಅರ್ಧ ಶತಕದ ಅಬ್ಬರ – ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರಕೊಟ್ಟ ಕನ್ನಡಿಗ

Mahela Jayawardene

ಕೊಹ್ಲಿ ಈವರೆಗೆ ಆಡಿರುವ 25 ಟಿ20 ವಿಶ್ವಕಪ್ ಪಂದ್ಯದಲ್ಲಿ ಒಟ್ಟು 1,065 ರನ್ ಕಲೆಹಾಕಿದ್ದಾರೆ. ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಕೇವಲ 12 ರನ್ ಗಳಿಸಿ ಔಟ್ ಆದರೂ ಕೊಹ್ಲಿ 11 ರನ್ ಸಿಡಿಸಿದ ವೇಳೆ ಟಿ20 ವಿಶ್ವಕಪ್‍ನಲ್ಲಿ ಸಾವಿರ ರನ್ ಬಾರಿಸಿದ ಭಾರತದ ಮೊದಲ ಬ್ಯಾಟ್ಸ್‌ಮ್ಯಾನ್‌, ವಿಶ್ವದ ಎರಡನೇ ಬ್ಯಾಟ್ಸ್‌ಮ್ಯಾನ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಮರು ಪಂದ್ಯದಲ್ಲೇ ವಿಶ್ವದ ಮೊದಲ ಬ್ಯಾಟ್ಸ್‌ಮ್ಯಾನ್‌ ಎನಿಸಿಕೊಂಡಿದ್ದಾರೆ.

VIRAT KOHLI AND KL RAHUL

ಪಂದ್ಯದಲ್ಲಿ ಕೊಹ್ಲಿ ಅಜೇಯ 64 ರನ್ (44 ಎಸೆತ, 8 ಬೌಂಡರಿ, 1 ಸಿಕ್ಸ್) ಸಿಡಿಸಿ ಮಿಂಚಿದರು. ಕೆ.ಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 184 ರನ್ ಪೇರಿಸಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *