ತಿರುವನಂತಪುರಂ: ಟೀಂ ಇಂಡಿಯಾ (Team India) ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ವರ್ಷದ ಮೊದಲ ಏಕದಿನ ಸರಣಿಯಲ್ಲಿ 2 ಶತಕ ಸಿಡಿಸುವ ಮೂಲಕ ಸಚಿನ್ ತೆಂಡೂಲ್ಕರ್ (Sachin Tendulkar) ದಾಖಲೆಯನ್ನ ಉಡೀಸ್ ಮಾಡಿದ್ದಾರೆ.
ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಸಿಡಿಸಿದ ಕೊಹ್ಲಿ, ಸ್ವದೇಶದಲ್ಲಿ 21 ಶತಕ ಸಿಡಿಸಿದ ದಾಖಲೆ ಮಾಡಿದ್ದಾರೆ. ಮುಖ್ಯವಾಗಿ ಏಕದಿನ ಪಂದ್ಯದಲ್ಲೀ ಶ್ರೀಲಂಕಾ (SriLanka) ವಿರುದ್ಧವೇ 10 ಶತಕ ಸಿಡಿಸಿ ತೆಂಡೂಲ್ಕರ್ ದಾಖಲೆಯನ್ನ ಮುರಿದಿದ್ದಾರೆ.
Advertisement
Innings Break!
A stupendous knock of 166* from @imVkohli & a fine 116 by @ShubmanGill guides #TeamIndia to a formidable total of 390/5.
Scorecard – https://t.co/muZgJH3f0i #INDvSL @mastercardindia pic.twitter.com/aGHQU7PQVw
— BCCI (@BCCI) January 15, 2023
Advertisement
ಸಚಿನ್ ತೆಂಡೂಲ್ಕರ್ 164 ಪಂದ್ಯಗಳ 102 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದರೆ ಕೊಹ್ಲಿ 104 ಪಂದ್ಯಗಳ 101 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿರುವುದು ವಿಶೇಷ. ಏಕದಿನದಲ್ಲಿ ಕೊಹ್ಲಿ ಒಟ್ಟು 46 ಶತಕ ಹೊಡೆದಿದ್ದು, ಲಂಕಾ ವಿರುದ್ಧವೇ 10 ಶತಕ ಬಾರಿಸಿದ್ದಾರೆ. ಈ ಹಿಂದೆ ಸಚಿನ್ ಲಂಕಾ ವಿರುದ್ಧ 9 ಶತಕ ಹೊಡೆದಿದ್ದರು. ಇದನ್ನೂ ಓದಿ: ಶತಕ ಹೊಡೆದು ಸಚಿನ್ ದಾಖಲೆ ಸರಿಗಟ್ಟಿದ ಕಿಂಗ್ ಕೊಹ್ಲಿ
Advertisement
Advertisement
16ನೇ ಓವರ್‌ನಲ್ಲಿ ಕ್ರೀಸ್‌ಗೆ ಬಂದ ಕೊಹ್ಲಿ ಅಂತಿಮವಾಗಿ 50 ಓವರ್ ತನಕ ಔಟಾಗದೇ 166 ರನ್ ಚಚ್ಚಿದ್ದಾರೆ. 14 ಬೌಂಡರಿ, 8 ಸಿಕ್ಸರ್‌ಗಳೂ ಇದರಲ್ಲಿ ಸೇರಿವೆ. ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದ ಕೊಹ್ಲಿ ಮೊದಲ 48 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ ಅರ್ಧ ಶತಕ ಸಿಡಿಸಿದ್ದರು. ಬಳಿಕ 85 ಎಸೆತಗಳಲ್ಲಿ 100 ರನ್ ಚಚ್ಚಿದರು. ಶತಕದ ಬಳಿಕ 150.90 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಕೊಹ್ಲಿ ಮುಂದಿನ 25 ಎಸೆತಗಳಲ್ಲಿ 66 ರನ್ ಬಾರಿಸಿದರು. ಪರಿಣಾಮ ಲಂಕಾಗೆ ಟೀಂ ಇಂಡಿಯಾ ಬೃಹತ್ ಮೊತ್ತದ ಗುರಿ ನೀಡಲು ಸಾಧ್ಯವಾಯಿತು.
ಈವರೆಗೆ ಒಟ್ಟಾರೆಯಾಗಿ 74 ಶತಕ ಸಿಡಿಸಿರುವ ವಿರಾಟ್ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ (ODI Cricket) 46 ಶತಕ ಸಿಡಿಸಿದ್ದಾರೆ. ಇನ್ನೂ 3 ಶತಕ ಸಿಡಿಸಿದರೆ ಏಕದಿನ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಶತಕ ಸಿಡಿಸಿದ ವಿಶ್ವದ ನಂ.1 ಆಟಗಾರ ಅಗಲಿದ್ದಾರೆ. ಜೊತೆಗೆ ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಸರಿಗಟ್ಟಲಿದ್ದಾರೆ. ಒಟ್ಟು 100 ಶತಕ ಬಾರಿಸಿರುವ ಸಚಿನ್ ಟೆಸ್ಟ್ನಲ್ಲಿ 51 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ 49 ಶತಕಗಳನ್ನ ಸಿಡಿಸಿದ್ದಾರೆ.
???? Mighty Maximum – a 97m SIX from Virat Kohli ????????
Live – https://t.co/q4nA9Ff9Q2 #INDvSL @mastercardindia pic.twitter.com/R3CzXTWBT5
— BCCI (@BCCI) January 15, 2023
2012 ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ 183 ರನ್ ಗಳಿಸಿದ್ದು, ವಿರಾಟ್ ಕೊಹ್ಲಿ ಅವರ ಈವರೆಗಿನ ಅತಿಹೆಚ್ಚು ರನ್ ಆಗಿತ್ತು. ಇದೀಗ 162 ರನ್ ಕೊಹ್ಲಿಯ 2ನೇ ಅತ್ಯಧಿಕ ಸ್ಕೋರ್ ಆಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 50 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿತು. ರೋಹಿತ್ ಶರ್ಮಾ 42, ಶುಭಮನ್ ಗಿಲ್ 116, ವಿರಾಟ್ ಕೊಹ್ಲಿ 166, ಶ್ರೇಯಸ್ ಅಯ್ಯರ್ 38, ಕೆ.ಎಲ್ ರಾಹುಲ್ 7, ಸೂರ್ಯಕುಮಾರ್ ಯಾದವ್ 4 ಹಾಗೂ ಅಕ್ಷರ್ ಪಟೇಲ್ 2 ರನ್ ಗಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k