ಫ್ಲೋರಿಡಾ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಬಿಕಿನಿ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಅವರ ಪತಿ, ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಹೃದಯದ ಎಮೋಜಿ ಹಾಕಿ ಕಮೆಂಟ್ ಮಾಡಿದ್ದಾರೆ.
ಅನುಷ್ಕಾ ಶರ್ಮಾ ಅವರು ತಮ್ಮ ಪತಿ ವಿರಾಟ್ ಕೊಹ್ಲಿ ಅವರ ಜೊತೆ ಮಿಯಾಮಿಯಲ್ಲಿ ರಜೆ ದಿನಗಳನ್ನು ಕಳೆಯುತ್ತಿದ್ದಾರೆ. ಈ ವೇಳೆ ಅವರು ಬಿಕಿನಿ ಧರಿಸಿರುವ ಹಾಟ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅನುಷ್ಕಾ ಕಿತ್ತಳೆ ಬಣ್ಣದ ಸ್ಟ್ರೈಪ್ ಪ್ರಿಂಟ್ ಬಿಕಿನಿ ಧರಿಸಿ ಬೀಚ್ ಬಳಿ ಕುಳಿತು ಫೋಟೋಗೆ ಪೋಸ್ ನೀಡಿದ್ದಾರೆ.
ಈ ಫೋಟೋ ಅನುಷ್ಕಾ ಅಭಿಮಾನಿಗಳಿಗೆ ಇಷ್ಟವಾಗಿ ಸನ್‍ಶೈನ್, ಲವ್ಲಿ, ನೈಸ್ ಎಂದು ಕಮೆಂಟ್ ಮಾಡಿದ್ದಾರೆ. ಅಭಿಮಾನಿಗಳು ಅಲ್ಲದೆ ವಿರಾಟ್ ಕೊಹ್ಲಿ ಅವರು ಕೂಡ ಅನುಷ್ಕಾ ಬಿಕಿನಿ ಫೋಟೋಗೆ ಫಿದಾ ಆಗಿ ಹೃದಯದ ಎಮೋಜಿಯನ್ನು ಕಮೆಂಟ್ ಮಾಡಿದ್ದಾರೆ.
ಅನುಷ್ಕಾ ಶರ್ಮಾ ಕೊನೆಯದಾಗಿ ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನಟಿಸಿದ `ಝೀರೋ’ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದ ನಂತರ ಅವರು ಬೇರೆ ಯಾವ ಚಿತ್ರ ಕೂಡ ಒಪ್ಪಿಕೊಂಡಿಲ್ಲ. ಈ ಚಿತ್ರದಲ್ಲಿ ನಟಿ ಕತ್ರಿನಾ ಕೈಫ್ ಕೂಡ ಅಭಿನಯಿಸಿದ್ದು, ಬಾಕ್ಸ್ ಆಫೀಸ್‍ನಲ್ಲಿ ಹೆಚ್ಚು ಸದ್ದು ಮಾಡಿರಲಿಲ್ಲ. ಸದ್ಯ ಅನುಷ್ಕಾ ಈಗ ಡಿಜಿಟಲ್ ವೇದಿಕೆಯಲ್ಲಿ ಯಾವುದಾದರೂ ಶೋ ಮಾಡಬೇಕು ಎಂದುಕೊಂಡಿದ್ದಾರೆ.