ಮುಂಬೈ: ಟೆಸ್ಟ್ ಹಾಗೂ ಟಿ20 ಮಾದರಿ ಕ್ರಿಕೆಟ್ನಿಂದ ನಿವೃತ್ತಿಯಾಗಿರುವ ಟೀಂ ಇಂಡಿಯಾ (Team India) ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ (Virat Kohli) ಅವರು ಇದೀಗ ಮುಂದಿನ ವರ್ಷ ಏಕದಿನ ಕ್ರಿಕೆಟ್ನಿಂದಲೂ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, 2027ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಯು ಭಾರತದ ಪರ ತಮ್ಮ ಅಂತಿಮ ಏಕದಿನ ವಿಶ್ವಕಪ್ (2027 World Cup) ಆಗಿರಲಿದೆ ಎಂದು ಒಪ್ಪಿಕೊಂಡಿದ್ದಾರೆ. ನನ್ನ ಪಾಲಿಗೆ, ಭಾರತಕ್ಕಾಗಿ ನಾನು ಆಡಲಿರುವ ಕೊನೆಯ ವಿಶ್ವಕಪ್ ಇದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಲಿಷ್ಠ ಪನಾಮಾಗೆ ಭಾರತ ಶಾಕ್
ನನ್ನ ಕೊನೆಯ ವಿಶ್ವಕಪ್ ಎಂಬುದೇ ನನ್ನ ಪ್ರೇರಣೆ, ವಿಶ್ವಕಪ್ ಗೆಲ್ಲುವುದೇ ನನ್ನ ಗುರಿ. ಅದಕ್ಕಾಗಿ ಎಲ್ಲಾ ಪ್ರಯತ್ನ ಮಾಡಲೂ ನಾನು ಸಂಪೂರ್ಣವಾಗಿ ಸಿದ್ಧನಿದ್ದೇನೆ ಎಂದಿದ್ದಾರೆ.
ಏಕದಿನ ಪಂದ್ಯಗಳಲ್ಲಿ (ODI) 54 ಶತಕಗಳೊಂದಿಗೆ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರನಾಗಿರುವ ವಿರಾಟ್ ಕೊಹ್ಲಿ, ಈಗಾಗಲೇ ಟಿ20 ಅಂತಾರಾಷ್ಟ್ರೀಯ ಮತ್ತು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗಿದ್ದು, ಪ್ರಸ್ತುತ ಭಾರತದ ಪರವಾಗಿ ಕೇವಲ 50 ಓವರ್ಗಳ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಇದನ್ನೂ ಓದಿ: ಭಾರತಕ್ಕೆ 2 ರನ್ ರೋಚಕ ಜಯ – 16 ರನ್ ಹೊಡೆದ ಅಯ್ಯರ್ಗೆ ಪಂದ್ಯಶ್ರೇಷ್ಠ

