ಮುಂಬೈ: ಭಾರತ ತಂಡದ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ (India-England 3rd Test) ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಯ್ಕೆದಾರರಿಗೆ ಕೊಹ್ಲಿ ಲಭ್ಯತೆಯ ಬಗ್ಗೆ ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ. ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಕೊಹ್ಲಿ ಹಿಂದೆ ಸರಿದಿದ್ದಾರೆ ಎಂದು ಬಿಸಿಸಿಐ ಈ ಹಿಂದೆ ಪ್ರಕಟಿಸಿತ್ತು. ಇದನ್ನೂ ಓದಿ: ಬೆಂಕಿ ದಾಳಿಗೆ ಆಂಗ್ಲರ ಪಡೆ ಛಿದ್ರ ಛಿದ್ರ – 6 ವಿಕೆಟ್ ಉರುಳಿಸಿ ಹಲವು ದಾಖಲೆ ಬರೆದ ಬುಮ್ರಾ
Advertisement
Advertisement
ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಟೆಸ್ಟ್ಗಳಿಂದ ಹಿಂತೆಗೆದುಕೊಳ್ಳುವಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ಮನವಿ ಮಾಡಿದ್ದರು.
Advertisement
ಈ ಸಮಯದಲ್ಲಿ ಕೊಹ್ಲಿಯ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮಗಳು ಮತ್ತು ಅಭಿಮಾನಿಗಳಿಗೆ ಬಿಸಿಸಿಐ ವಿನಂತಿಸಿತ್ತು. ಕೊಹ್ಲಿ ಅವರ ವೈಯಕ್ತಿಕ ಕಾರಣಗಳ ಬಗ್ಗೆ ಊಹಾಪೋಹ ಸುದ್ದಿ ಹರಡಬೇಡಿ. ಟೆಸ್ಟ್ ಸರಣಿಯಲ್ಲಿ ಸವಾಲುಗಳನ್ನು ಎದುರಿಸುತ್ತಿರುವ ಭಾರತ ಕ್ರಿಕೆಟ್ ತಂಡವನ್ನು ಎಂದು ಬಿಸಿಸಿಐ ವಿನಂತಿ ಮಾಡಿತ್ತು. ಇದನ್ನೂ ಓದಿ: 6 ತಿಂಗಳಿಂದ ಪಾಕ್ನ ಹಾಕಿ ಆಟಗಾರರಿಗಿಲ್ಲ ಸಂಬಳ – ಮ್ಯಾನೇಜ್ಮೆಂಟ್ನೊಂದಿಗೆ ಆಟಗಾರರ ಸಂಘರ್ಷ
Advertisement
ಇಂಗ್ಲೆಂಡ್ ವಿರುದ್ಧದ ಭಾರತದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಬಲಗೈ ಬ್ಯಾಟರ್ ರಜತ್ ಪಾಟಿದಾರ್ ಅವರನ್ನು ಕಣಕ್ಕಿಳಿಸಲಾಗಿತ್ತು. ಪಾಟಿದಾರ್ ಕಳೆದ ವರ್ಷ ಡಿಸೆಂಬರ್ 21 ರಂದು ದಕ್ಷಿಣ ಆಫ್ರಿಕಾ ವಿರುದ್ಧ 3 ನೇ ODI ಪಂದ್ಯದಲ್ಲಿ ತಮ್ಮ ಅಂತಾರಾಷ್ಟ್ರೀಯ ಚೊಚ್ಚಲ ಪಂದ್ಯ ಆಡಿದ್ದರು.
ಕೊಹ್ಲಿ ಇಲ್ಲದೆ ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 28 ರನ್ಗಳ ಸೋಲನುಭವಿಸಿತು. ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧದ ಟಿ20ಐ ಸರಣಿಯಲ್ಲಿ ವಿರಾಟ್ ಕೊನೆಯ ಬಾರಿಗೆ ಆಡಿದ್ದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ನಲ್ಲಿ ʻಯಶಸ್ವಿʼ ದ್ವಿಶತಕ – ಟೀಂ ಇಂಡಿಯಾ ಪರ ಜೈಸ್ವಾಲ್ ವಿಶೇಷ ಸಾಧನೆ