ಮುಂಬೈ: ಟೀಂ ಇಂಡಿಯಾ (Team India) ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಒಂದಿಲ್ಲೊಂದು ವಿಷಯಗಳಿಗೆ ಸದಾ ಸುದ್ದಿಯಲ್ಲಿರುತ್ತಾರೆ. ಆಗಾಗ್ಗೆ ಮೈದಾನದಲ್ಲಿ ನೃತ್ಯದ ಝಲಕ್ ನೀಡುತ್ತಾ ತಮ್ಮ ಅಭಿಮಾನಿಗಳನ್ನ ರಂಜಿಸುತ್ತಿರುತ್ತಾರೆ. ಹಾಗೆಯೇ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ಆರ್‌ಆರ್‌ಆರ್ (RRR) ಚಿತ್ರದ ನಾಟು ನಾಟು ಹಾಡಿಗೆ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳನ್ನ ರಂಜಿಸಿದ್ದಾರೆ.
Virat naatu naatu step vesthunadu ga @tarak9999 @AlwaysRamCharan @imVkohli#NaatuNaatu pic.twitter.com/3sLOIYiUMT
— AK???? (@Arun_2_) March 17, 2023
Advertisement
ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಆಸ್ಟ್ರೇಲಿಯಾ ತನ್ನ ಬ್ಯಾಟಿಂಗ್ ಆರಂಭಿಸುವುದಕ್ಕೂ ಮುನ್ನ ಫೀಲ್ಡಿಂಗ್ ಸೆಟ್ ಮಾಡುತ್ತಿದ್ದ ವೇಳೆ ನಾಟು ನಾಟು ಹಾಡಿಗೆ ಕೊಹ್ಲಿ ಸ್ಟೆಪ್ ಹಾಕಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರ ವೀಡಿಯೋ ತುಣುಕು ಜಾಲತಾಣದಲ್ಲಿ (Social Media) ಭಾರೀ ಸದ್ದು ಮಾಡುತ್ತಿದೆ. ಕೊಹ್ಲಿ ಡಾನ್ಸ್ (Kohli Dance) ಅಭಿಮಾನಿಗಳು ಫಿದಾ ಆಗಿದ್ದಾರೆ. ಇದನ್ನೂ ಓದಿ: Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?
Advertisement
Advertisement
ಈಗಾಗಲೇ 2-1 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದುಕೊಂಡಿರುವ ಟೀಂ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಆರಂಭಿಸಿದೆ. ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ನಾಯಕತ್ವ ವಹಿಸಿದ್ದು, ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ.ಎಲ್ ರಾಹುಲ್, ಜಡೇಜಾ, ಶಾರ್ದೂಲ್ ಠಾಕೂರ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ತಂಡದಲ್ಲಿದ್ದಾರೆ. ಇದನ್ನೂ ಓದಿ: Oscar Winner List:ಆಸ್ಕರ್ 2023 ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
Advertisement
`ನಾಟು ನಾಟು’ ಹಾಡು ಆಸ್ಕರ್ (Oscar) ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಸಖತ್ ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದಿರುವ ಆರ್‌ಆರ್‌ಆರ್ ಸಿನಿಮಾದ ಗೀತೆ ಇದಾಗಿದ್ದು, ಎಂ.ಎಂ ಕೀರವಾಣಿ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದು, ಆಸ್ಕರ್ ಪ್ರಶಸ್ತಿ ಪಡೆದ ನಂತರವೂ 50 ಲಕ್ಷಕ್ಕೂ ಅಧಿಕ ಮಂದಿ ವೀಡಿಯೋ ಸಾಂಗ್ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.