ದುಬೈ: 15ನೇ ಆವೃತ್ತಿಯ ಐಪಿಎಲ್‌ನಿಂದ ಸತತವಾಗಿ ಬ್ಯಾಟಿಂಗ್ ವೈಫಲ್ಯ ಎದುರಿಸುತ್ತಿದ್ದ ರನ್ ಮಿಷಿನ್ ವಿರಾಟ್ ಕೊಹ್ಲಿ ಲಯಕ್ಕೆ ಮರಳಿದ್ದಾರೆ. ದೀರ್ಘಕಾಲದ ವಿರಾಮದ ನಂತರ ಏಷ್ಯಾಕಪ್ ಟೂರ್ನಿ-2022ಗೆ ಎಂಟ್ರಿ ಆಗಿರುವ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಮತ್ತೆ ಅಭಿಮಾನಿಗಳನ್ನ ಮೆಚ್ಚಿಸಿದ್ದಾರೆ.
Advertisement
ಏಷ್ಯಾಕಪ್ ಟೂರ್ನಿ-2022 ಇಂಡೋ-ಪಾಕ್ ಕದನದಲ್ಲಿ 34 ರನ್‌ಗಳಿಸುವ ಫಾರ್ಮ್‌ಗೆ ಮರಳಿದ್ದ ಕೊಹ್ಲಿ ನಿನ್ನೆ ಹಾಂಕಾಂಗ್ ವಿರುದ್ಧ ನಡೆದ ಪಂದ್ಯದಲ್ಲಿ ಅಜೇಯ 59ರನ್ ಗಳಿಸುವ ಮೂಲಕ ಮತ್ತೆ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಇದೇ ವೇಳೆ ಅವರು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಸಾಧನೆಯನ್ನು ಸರಿದೂಗಿಸಿದ ಖ್ಯಾತಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ಕೊಹ್ಲಿ – 1 ಓವರ್ 6 ರನ್
Advertisement
Advertisement
ಸತತ ಬ್ಯಾಟಿಂಗ್ ವೈಫಲ್ಯದಿಂದ ಸಾಕಷ್ಟು ಟ್ರೋಲ್‌ಗೆ ಗುರಿಯಾಗಿದ್ದ ವಿರಾಟ್ ಕೊಹ್ಲಿ ತಮ್ಮ ಬ್ಯಾಟ್ ಮೂಲಕವೇ ಟೀಕಾಕಾರರಿಗೆ ಉತ್ತರ ಕೊಟ್ಟಿದ್ದಾರೆ. 11 ಇನ್ನಿಂಗಸ್‌ಗಳ ಬಳಿಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಇದನ್ನೂ ಓದಿ: ಕೊಹ್ಲಿ, ಸೂರ್ಯ ಬ್ಯಾಟಿಂಗ್ ಬಿರುಗಾಳಿಗೆ ಕ್ರಿಕೆಟ್ ಶಿಶುಗಳು ಕಂಗಾಲು – ಸೂಪರ್ ಫೋರ್‌ಗೆ ಎಂಟ್ರಿ
Advertisement
31ನೇ ಅರ್ಧಶತಕ ಬಾರಿಸಿದ ಕಿಂಗ್ ಕೊಹ್ಲಿ:
ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಬಹುಸಮಯದ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅರ್ಧಶತಕ ಬಾರಿಸಿದ್ದಾರೆ. ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ 44 ಎಸೆತಗಳಲ್ಲಿ 59 ರನ್ ಸಿಡಿಸುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ವೃತ್ತಿಬದುಕಿನ 31ನೇ ಅರ್ಧಶತಕ ಸಿಡಿಸಿದ ದಾಖಲೆ ಮಾಡಿದ್ದಾರೆ.
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 50ಕ್ಕಿಂತ ಅಧಿಕ ರನ್ ಹೊಡೆದ ಬ್ಯಾಟರ್ ಎಂಬ ಗೌರವಕ್ಕೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ರೋಹಿತ್ ಶರ್ಮಾ 27 ಅರ್ಧಶತಕ ಹಾಗೂ 4 ಶತಕಗಳನ್ನು ಬಾರಿಸಿದ್ದಾರೆ. 118 ರನ್ ಅವರ ವೈಯಕ್ತಿಕ ಶ್ರೇಷ್ಠ ಬ್ಯಾಟಿಂಗ್ ಪ್ರದರ್ಶನವಾಗಿದೆ. ಈಗ 59 ರನ್ ಹೊಡೆಯುವ ಮೂಲಕ 50ಕ್ಕಿಂತ ಅಧಿಕ ರನ್ ಹೊಡೆದ ಆಟಗಾರರ ಪಟ್ಟಿಯಲ್ಲಿ ರೋಹಿತ್ ಜೊತೆ ವಿರಾಟ್‌ಗೂ ಸ್ಥಾನ ಸಿಕ್ಕಿದೆ.
ಟೀಂ ಇಂಡಿಯಾ ಸ್ಟಾರ್ ವಿರಾಟ್ ಕೊಹ್ಲಿ, ತಮ್ಮ ಟಿ20-ವೃತ್ತಿಬದುಕಿನಲ್ಲಿ ಒಮ್ಮೆಯೂ ಶತಕ ಬಾರಿಸಿಲ್ಲ. ಆದರೆ 31 ಬಾರಿ 50+ ಸ್ಕೋರ್ ಮಾಡಿದ್ದಾರೆ. 94 ರನ್ ಅವರ ವೈಯಕ್ತಿಕ ಗರಿಷ್ಠ ಸ್ಕೋರ್ ಆಗಿದೆ.
ವಿರಾಟ್ ಕೊಹ್ಲಿ ಒಟ್ಟಾರೆ 101 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದು, 3,402 ರನ್‌ಗಳನ್ನು ಬಾರಿಸಿದ್ದರೆ, ರೋಹಿತ್ ಶರ್ಮಾ 134 ಪಂದ್ಯಗಳಿAದ 3,520 ರನ್‌ಗಳನ್ನು ಚಚ್ಚಿದ್ದಾರೆ. ಟಿ20-ಐನಲ್ಲಿ 3,500 ರನ್‌ಗಳ ಗಡಿ ದಾಟಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆ ರೋಹಿತ್ ಶರ್ಮಾ ಅವರದ್ದಾದರೇ, ಏಕದಿನ, ಟಿ20 ಹಾಗೂ ಟೆಸ್ಟ್ ಮೂರು ಮಾದರಿಯ ಪಂದ್ಯಗಳಲ್ಲಿ 100 ಪಂದ್ಯಗಳನ್ನು ಪೂರೈಸಿದ ಮೊದಲ ಭಾರತೀಯನ ಸಾಧನೆ ವಿರಾಟ್ ಕೊಹ್ಲಿ ಅವರಿಗಿದೆ.