ದುಬೈ: ಟೀಂ ಇಂಡಿಯಾದ ರನ್ ಮಿಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (Virat Kohli) ಬ್ಯಾಟ್ ಮತ್ತೆ ಘರ್ಜಿಸಿದೆ. ಏಷ್ಯಾಕಪ್‍ನ (Asia Cup 2022) ಸೂಪರ್ ಫೋರ್ ಹಂತದ ಅಘ್ಘಾನಿಸ್ತಾನ (Afghanistan) ವಿರುದ್ಧ ಪಂದ್ಯದಲ್ಲಿ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಟಿ20 ಕ್ರಿಕೆಟ್‍ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದರು.
Advertisement
ಟಿ20 ಕ್ರಿಕೆಟ್‍ನಲ್ಲಿ ಚೊಚ್ಚಲ ಶತಕ ಸಿಡಿಸಿದ ಕೊಹ್ಲಿ ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ 2 ವರ್ಷ, 9 ತಿಂಗಳು, 16 ದಿನಗಳ ಬಳಿಕ ಶತಕ ಸಿಡಿಸಿದರು. 1,021 ದಿನಗಳ ಬಳಿಕ ಕೊಹ್ಲಿ ಬ್ಯಾಟ್‍ನಿಂದ ಶತಕದ ವೈಭವ ಕಂಡುಬಂತು. ಈ ಶತಕ ಕೊಹ್ಲಿಯ 71ನೇ ಅಂತಾರಾಷ್ಟ್ರೀಯ ಶತಕವಾಗಿದೆ. ಇದನ್ನೂ ಓದಿ: ಬೌಲರ್‌ಗೆ ಬ್ಯಾಟ್‍ನಲ್ಲಿ ಹೊಡೆಯಲು ಮುಂದಾದ ಆಸಿಫ್ ಅಲಿ – ಜೋರಾದ #BanAsifAli ಕೂಗು
Advertisement
The milestone we'd all been waiting for and here it is!
71st International Century for @imVkohli ????????#AsiaCup2022 #INDvAFGpic.twitter.com/hnjA953zg9
— BCCI (@BCCI) September 8, 2022
Advertisement
ಪಂದ್ಯದಲ್ಲಿ ಕೊಹ್ಲಿ ಅಜೇಯ 122 ರನ್ (61 ಎಸೆತ, 12 ಬೌಂಡರಿ, 6 ಸಿಕ್ಸ್) ಚಚ್ಚಿ ಮಿಂಚಿದರು. ಈ ಮೂಲಕ ಭಾರತ ತಂಡ ಅಘ್ಘಾನಿಸ್ತಾನ ವಿರುದ್ಧ ಆಟಕ್ಕುಂಟು ಲೆಕ್ಕಕ್ಕಿಲ್ಲ ಪಂದ್ಯದಲ್ಲಿ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್‍ಗಳ ಬೃಹತ್ ಮೊತ್ತ ಪೇರಿಸಿದೆ. ಇದನ್ನೂ ಓದಿ: ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ