RCB | ಪಾಟಿದಾರ್‌ ಕ್ಯಾಪ್ಟನ್ಸಿ ಬಗ್ಗೆ ಅಸಮಾಧಾನ – ಡಿಕೆಗೆ ಕೊಹ್ಲಿ ದೂರು?

Public TV
3 Min Read
Rajat Patidar 1

ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೂರು ಐತಿಹಾಸಿಕ ಗೆಲುವು ಕಂಡಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡ ತವರಿನಲ್ಲಿ ನಡೆದ ಎರಡೂ ಪಂದ್ಯಗಳಲ್ಲೂ ಹೀನಾಯ ಸೋಲು ಕಂಡಿದೆ. ಆದ್ರೆ ಗುರುವಾರ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋತಿದೆ ಎನ್ನುವುದಕ್ಕಿಂತ ಹೆಚ್ಚಾಗಿ ತಂಡದಲ್ಲೇ ಆಂತರಿಕ ಕಲಹ ಉಂಟಾಗಿದೆ ಅನ್ನೋ ವದಂತಿ ಹೆಚ್ಚು ಸದ್ದು ಮಾಡುತ್ತಿದೆ.

ಹೌದು. ಚೇಸಿಂಗ್‌ ವೇಳೆ ಸ್ಫೋಟಕ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಆರ್‌ಸಿಬಿ ಆರಂಭದಲ್ಲಿ ಪ್ರಬಲ ಪೈಪೋಟಿ ನೀಡಿತ್ತು. 4.3 ಓವರ್‌ಗಳಲ್ಲಿ 30 ರನ್‌ಗಳಿಗೆ 3 ವಿಕೆಟ್‌, 58 ರನ್‌ಗಳಿಗೆ 4 ಪ್ರಮುಖ ವಿಕೆಟ್‌ಗಳನ್ನು ಆರ್‌ಸಿಬಿ ಪಡೆದುಕೊಂಡಿತ್ತು. ಆ ಬಳಿಕ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಕೆ.ಎಲ್‌ ರಾಹುಲ್‌ (KL Rahul_ ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಮುರಿಯದ 5ನೇ ವಿಕೆಟ್‌ಗೆ 55 ಎಸೆತಗಳಲ್ಲಿ ಸ್ಫೋಟಕ 111 ರನ್‌ಗಳ ಜೊತೆಯಾಟ ನೀಡುವ ಮೂಲಕ ಡೆಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಪಂದ್ಯ ಕೊನೆಯ ಹಂತದಲ್ಲಿರುವಾಗ ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್‌ ಕೋಚ್‌ ದಿನೇಶ್ ಕಾರ್ತಿಕ್ (Dinesh Karthik) ಅವರೊಂದಿಗೆ ಕೋಪ ಮತ್ತು ಬೇಸರಿಂದ ಗಾಢ ಚರ್ಚೆಯಲ್ಲಿ ತೊಡಗಿದ್ರು, ಫೀಲ್ಡ್‌ ಸೆಟ್‌ನತ್ತ ಕೈತೋರಿಸುತ್ತಾ ಮಾತನಾಡುತ್ತಿದ್ದರು. ಈ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಸ್ಟಾರ್ಕ್‌ಗೆ ಒಂದೇ ಓವರ್‌ನಲ್ಲಿ 30 ರನ್‌ ಚಚ್ಚಿದ ಸಾಲ್ಟ್‌ – ಹುಚ್ಚೆದ್ದು ಕುಣಿದ RCB ಫ್ಯಾನ್ಸ್‌

kl rahul

ಅಲ್ಲದೇ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆದ ಬೆನ್ನಲ್ಲೇ ರಜತ್‌ ಪಾಟಿದಾರ್‌ (Rajat Patidar) ನಾಯಕತ್ವದ ಬಗ್ಗೆ ಕೊಹ್ಲಿ ಅತೃಪ್ತರಾಗಿದ್ದಾರೆ ಎಂಬ ವದಂತಿಗಳು ಸದ್ದು ಮಾಡತೊಡಗಿದೆ. ವಿಡಿಯೋದಲ್ಲಿ, ಕೊಹ್ಲಿ, ನಾಯಕನ ಕೆಲವು ನಿರ್ಧಾರಗಳ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿರುವುದನ್ನು ಕಾಣಬಹುದು. ಈ ಬಗ್ಗೆ ಕಾಮೆಂಟೇಟರ್ ಆಕಾಶ್ ಚೋಪ್ರಾ ಮತ್ತು ವೀರೇಂದ್ರ ಸೆಹ್ವಾಗ್ ಕೂಡ ಮಾತನಾಡಿದರು. ಕೊಹ್ಲಿಗೆ ಯಾವುದೇ ಸಮಸ್ಯೆ ಇದ್ದರೂ ಅದನ್ನು ನಾಯಕ ಪಾಟಿದಾರ್ ಅವರಿಗೆ ಹೇಳಬೇಕು, ಏಕೆಂದರೆ ಈಗ ಕೊಹ್ಲಿ ತಂಡದ ನಾಯಕನಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: RCBvsDC | ಪಂದ್ಯದ ಟಿಕೆಟ್ ಕಾಳಸಂತೆಯಲ್ಲಿ ಮಾರಾಟ – 8 ಮಂದಿ ಸಿಸಿಬಿ ಬಲೆಗೆ

Virat

ಅಲ್ಲದೇ ಈ ಬಗ್ಗೆ ಕ್ರಿಕೆಟ್‌ ತಜ್ಞರು ಹಾಗೂ ಕ್ರಿಕೆಟ್‌ ಅಭಿಮಾನಿಗಳು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚಿಸುತ್ತಾ, ಕೊಹ್ಲಿ ನಾಯಕನ ನಿರ್ಧಾರಗಳಿಂದ ಕೋಪಗೊಂಡಿದ್ದಾರೆ. ದಿನೇಶ್‌ ಕಾರ್ತಿಕ್‌ ಅವರೊಂದಿಗೆ ಬೌಲಿಂಗ್ ಬದಲಾವಣೆಗಳ ಬಗ್ಗೆ ಚರ್ಚಿಸಿದ್ದಾರೆ. ಅಲ್ಲದೇ ಸ್ಟೆಟರ್ಜಿಕ್‌ ಟೈಮ್‌ ವೇಳೆ ಕೊಹ್ಲಿ ಕೆಲವು ನಿರ್ಧಾರಗಳ ಬಗ್ಗೆ ಕಾರ್ತಿಕ್, ಅನುಭವಿ ಬೌಲರ್ ಭುವನೇಶ್ವರ್ ಕುಮಾರ್, ಟಿಮ್‌ ಡೇವಿಡ್‌ ಅವರೊಂದಿಗೂ ಮಾತನಾಡಿದ್ದಾರೆ. ಆದ್ರೆ ಕೊಹ್ಲಿ, ದಿನೇಶ್‌ ಕಾರ್ತಿಕ್‌ ನಡುವಿನ ಸಂಭಾಷಣೆ ಕುರಿತು ನಿಖರ ಕಾರಣ ತಿಳಿದುಬಂದಿಲ್ಲ. ಆರ್‌ಸಿಬಿ ಫ್ರಾಂಚೈಸಿ ಕೂಡ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

RCB vs DC

ಪ್ರತಿ ಬಾರಿಯೂ ಆರ್‌ಸಿಬಿ ಒಂದಿಲ್ಲೊಂದು ವಿವಾದಗಳಿಗೆ ಹೆಸರಾಗುತ್ತಲೇ ಇರುತ್ತದೆ. ಕಳೆದ ಬಾರಿ ಪಂಜಾಬ್‌ ಕಿಂಗ್ಸ್‌ ಆಟಗಾರನಿಗೆ ಟಾಂಗ್‌ ಕೊಡುವ ಮೂಲಕ ಕೊಹ್ಲಿ ಅವರ ನಡೆ ಸದ್ದು ಮಾಡಿತ್ತು. ಇದಕ್ಕೂ ಮುನ್ನ 2023ರಲ್ಲಿ ಗೌತಮ್‌ ಗಂಭೀರ್‌ ಅವರೊಂದಿಗಿನ ಕಲಹ ದೊಡ್ಡ ಸದ್ದು ಮಾಡಿತ್ತು. ಆದ್ರೆ ಇದೇ ಮೊದಲಬಾರಿಗೆ ತಂಡದಲ್ಲೇ ಆಂತರಿಕ ಕಲಹ ಬಿರುಗಾಳಿ ಎಬ್ಬಿಸಿರುವುದು ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ತವರಲ್ಲಿ ಮತ್ತೆ ಸೋತ ಆರ್‌ಸಿಬಿ – ಕೆ.ಎಲ್‌.ರಾಹುಲ್‌ ಮಿಂಚು; ಡೆಲ್ಲಿಗೆ 6 ವಿಕೆಟ್‌ಗಳ ಜಯ

Share This Article