ಪುಣೆ: ಚೇಸ್ ಮಾಸ್ಟರ್, ಸೂಪರ್ ಸ್ಟಾರ್ ಕ್ರಿಕೆಟಿಗ, ಕ್ರಿಕೆಟ್ ಲೋಕದ ಕಿಂಗ್ ಎಂದೇ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಸ್ಟಾರ್ ಪ್ಲೇಯರ್ ವಿರಾಟ್ ಕೊಹ್ಲಿ (Virat Kohli) ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.
2018ರ ಆಗಸ್ಟ್ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ವಿಶ್ವದಲ್ಲೇ ಅತಿಹೆಚ್ಚು ರನ್ ಗಳಿಸಿದ ಟಾಪ್-5 ಬ್ಯಾಟರ್ಸ್‌ಗಳ ಪಟ್ಟಿ ಸೇರಿ ಇತಿಹಾಸ ನಿರ್ಮಿಸಿದ್ದು, ಒಂದು ಸ್ಥಾನ ಮುಂದಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ಬಾಬರ್ ಆಜಂ ಬಳಿಕ ನವೀನ್ ಉಲ್ ಹಕ್‌ನನ್ನ ಹೊಗಳಿದ ಗಂಭೀರ್ – ಕಾಲೆಳೆದ ಕೊಹ್ಲಿ ಫ್ಯಾನ್ಸ್
Advertisement
Advertisement
ಬಾಂಗ್ಲಾದೇಶದ (Bangladesh) ವಿರುದ್ಧ ನಡೆದ ವಿಶ್ವಕಪ್ ಪಂದ್ಯದಲ್ಲಿ ಕೊಹ್ಲಿ 50ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ವೇಗವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 26,000 ರನ್ ಗಳಿಸಿದ ಭಾರತದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. 511 ಪಂದ್ಯ ಮತ್ತು 567 ಇನ್ನಿಂಗ್ಸ್‌ಗಳಲ್ಲಿ 26 ಸಾವಿರ ರನ್ ಬಾರಿಸಿರುವ ಕೊಹ್ಲಿ 600 ಇನ್ನಿಂಗ್ಸ್‌ಗಳಲ್ಲಿ 26,000 ರನ್ ಪೂರೈಸಿದ ಸಚಿನ್ ತೆಂಡೂಲ್ಕರ್ (Sachin Tendulkar) ದಾಖಲೆಯನ್ನ ಉಡೀಸ್ ಮಾಡಿದ್ದಾರೆ. ಅಲ್ಲದೇ ಈ ಪಂದ್ಯದಲ್ಲಿ 106.18 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ ಕೊಹ್ಲಿ ಒಟ್ಟು 97 ಎಸೆತಗಳಲ್ಲಿ ಅಜೇಯ 103 ರನ್ ಬಾರಿಸಿ ಮಿಂಚಿದ್ದಾರೆ. ಇದನ್ನೂ ಓದಿ: Asia Cup 2023ː ಕಿಂಗ್ ಕೊಹ್ಲಿ, ರಾಹುಲ್ ಆರ್ಭಟಕ್ಕೆ ಪಾಕ್ ಪಂಚರ್ – 357 ರನ್ ಗುರಿ ನೀಡಿದ ಭಾರತ
Advertisement
Advertisement
ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 78ನೇ ಶತಕ ಸಿಡಿಸಿರುವ ಕೊಹ್ಲಿ, ಏಕದಿನ ಕ್ರಿಕೆಟ್‌ನಲ್ಲಿ 48ನೇ ಶತಕ ಸಿಡಿಸಿದ್ದು, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯಲು 2 ಶತಕಗಳಷ್ಟೇ ಬಾಕಿಯಿವೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸಿದ ಟಾಪ್ 5 ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: Asia Cup 2023ː ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕಿಂಗ್ ಕೊಹ್ಲಿ ಮತ್ತೊಂದು ಮೈಲುಗಲ್ಲು
ವೃತ್ತಿ ಜೀವನದಲ್ಲಿ 34,357 ರನ್ ಗಳಿಸಿರುವ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, 28,016 ರನ್ ಗಳಿಸಿರುವ ಶ್ರೀಲಂಕಾ ತಂಡದ ಮಾಜಿ ಕ್ರಿಕೆಟಿಗ ಕುಮಾರ್ ಸಂಗಕ್ಕಾರ 2ನೇ ಸ್ಥಾನದಲ್ಲಿದ್ದಾರೆ. 27,483 ರನ್ ಗಳಿಸಿರುವ ರಿಕಿ ಪಾಟಿಂಗ್ 3ನೇ ಸ್ಥಾನದಲ್ಲಿದ್ದರೆ, 25,957 ರನ್ ಗಳಿಸಿದ್ದ ಮಹೇಲಾ ಜಯವರ್ಧನೆ ಅವರನ್ನು ಹಿಂದಿಕ್ಕಿ ಕೊಹ್ಲಿ 4ನೇ ಸ್ಥಾನಕ್ಕೆ ಜಿಗಿದಿದ್ದಾರೆ.
Web Stories