ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯಿಂದ ಇಂಗ್ಲೆಂಡ್ ನ ಕೌಂಟಿ ಕ್ರಿಕೆಟ್ ಆಡುತ್ತಿಲ್ಲ ಎಂದು ಬಿಸಿಸಿಐ ಸ್ಪಷ್ಟನೆ ನೀಡಿದೆ.
ನಾಯಕ ವಿರಾಟ್ ಕೊಹ್ಲಿ ಕುತ್ತಿಗೆ ಉಳುಕು ಹಾಗೂ ಬೆನ್ನು ಹುರಿ (ಹರ್ನಿಯೇಟೆಡ್ ಡಿಸ್ಕ್) ಸಮಸ್ಯೆಯಿಂದ ಬಳಲುತ್ತಿದ್ದು, ಶಸ್ತ್ರ ಚಿಕಿತ್ಸೆ ಹಂತಕ್ಕೆ ತಲುಪಿದ್ದಾರೆ. ಹೀಗಾಗಿ ಅವರು ಇಂಗ್ಲೆಂಡ್‍ನ ಕೌಂಟಿ ಕ್ರಿಕೆಟ್ ಪಂದ್ಯಗಳಿಗೆ ಲಭ್ಯವಾಗುತ್ತಿಲ್ಲ ಎಂದು ಬಿಸಿಸಿಐ ಗುರುವಾರ ಸ್ಪಷ್ಟನೆ ನೀಡಿದೆ.
Advertisement
ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಮಹತ್ವದ ಸರಣಿ ನಿಗದಿಯಾಗಿದ್ದು, ಈ ಹಿನ್ನೆಲೆಯಲ್ಲಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಕೊಹ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂದು ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
Advertisement
Advertisement
ಶಸ್ತ್ರ ಚಿಕಿತ್ಸೆಗೆ ಒಳಗಾದ ಬಳಿಕ ಕೆಲ ದಿನಗಳು ವಿಶ್ರಾಂತಿ ಪಡೆಯಲಿದ್ದು, ಜೂನ್ 15 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಆಕಾಡೆಮಿಯಿಂದ ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬಿಸಿಸಿಐ ವೈದ್ಯಕೀಯ ವಿಭಾಗ, ಮುಂದಿನ ಐರ್ಲೆಂಡ್ ಹಾಗೂ ಇಂಗ್ಲೆಂಡ್ ನಡುವಿನ ಸರಣಿಯ ವೇಳೆಗೆ ಗಾಯದ ಸಮಸ್ಯೆಯಿಂದ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದೆ.
Advertisement
ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಹೆಚ್ಚಿನ ಹಿಡಿತ ಸಾಧಿಸುವ ಉದ್ದೇಶದಿಂದ ಕೊಹ್ಲಿ ಕೌಂಟಿ ಕ್ರಿಕೆಟ್ ಆಡಲಿ ನಿರ್ಧರಿಸಿದ್ದರು. ಈ ಹಿಂದೆ 2014 ರಲ್ಲಿ ಇಂಗ್ಲೆಂಡ್ ಸರಣಿಯಲ್ಲಿ ಆಡಿದ್ದ ಕೊಹ್ಲಿ ಕಳಪೆ ಆಟ ಪ್ರದರ್ಶಿಸಿದ್ದರು. ಕೆಲ ದಿನಗಳ ಹಿಂದೆ ಕೌಂಟಿ ಕ್ರಿಕೆಟ್ ಆಡಲು ಒಪ್ಪಂದಕ್ಕೆ ಸಹಿ ಹಾಕಿದ್ದ ಕೊಹ್ಲಿ 3 ಚಾಂಪಿಯನ್ ಗೇಮ್ಸ್, ಐದು ದೇಶಿಯ ಏಕದಿನ ಪಂದ್ಯಗಳಲ್ಲಿ ಸರ್ರೆ ತಂಡದ ಪರ ಆಡಲಿದ್ದರು.