ಹೈದರಾಬಾದ್: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಅಭಿಮಾನಿಯ ಎದೆ ಮೇಲೆ ತನ್ನ ಚೆಹೆರೆಯ ಹಾಗೂ ಅವಾರ್ಡ್ ಗಳ ಟ್ಯಾಟೂ ನೋಡಿ ತಬ್ಬಿಕೊಂಡಿದ್ದಾರೆ.
ಒಡಿಶಾ ಮೂಲದ ಪಿಂಟು ಬೆಹೆರಾ ತನ್ನ ಎದೆ ಮೇಲೆ ವಿರಾಟ್ ಕೊಹ್ಲಿ ಮುಖದ ಹಾಗೂ ಬೆನ್ನಿನ ಮೇಲೆ ಅವರ ಜೆರ್ಸಿ ನಂಬರ್ ಟ್ಯಾಟೂ ಹಾಕಿಸಿಕೊಂಡಿದ್ದಾರೆ. ಬುಧವಾರ ವಿಶಾಖಪಟ್ಟಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದ ನಂತರ ವಿರಾಟ್ ಪಿಂಟು ಅವರನ್ನು ಭೇಟಿ ಮಾಡಿದ್ದಾರೆ.
Advertisement
Advertisement
ವಿರಾಟ್ 2008ರಲ್ಲಿ ಅಂಡರ್-19 ವಿಶ್ವಕಪ್ ಗೆದ್ದಿದ್ದರು. ಅಲ್ಲದೆ 2013 ಅರ್ಜುನ ಅವಾರ್ಡ್ ಹಾಗೂ 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದಿದ್ದರು. ಹಾಗಾಗಿ ಪಿಂಟು ತಮ್ಮ ಬೆನ್ನಿನ ಮೇಲೆ ಇದನ್ನೆಲ್ಲಾ ಸೇರಿಸಿ ಒಟ್ಟು 15 ಟ್ಯಾಟೂಗಳನ್ನು ಹಾಕಿಸಿಕೊಂಡಿದ್ದು, ಇದನ್ನು ನೋಡಿದ ವಿರಾಟ್ ಅಭಿಮಾನಿಯನ್ನು ತಬ್ಬಿಕೊಳ್ಳುವ ಮೂಲಕ ಪ್ರೀತಿ ವ್ಯಕ್ತಪಡಿಸಿದ್ದಾರೆ.
Advertisement
Advertisement
ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡ್ಯೂಲ್ಕರ್, ಮಾಜಿ ನಾಯಕ ಎಂ.ಎಸ್ ಧೋನಿ ನಂತರ ವಿರಾಟ್ ಕೊಹ್ಲಿ ಅವರು ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ಅಲ್ಲದೆ ಇತ್ತೀಚೆಗೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‍ನಲ್ಲಿ ಭಾರತದ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ವೈಝಾಗ್ ಟೆಸ್ಟ್‌ನ ಮೊದಲ ದಿನದಲ್ಲಿ ಸೌತ್ ಅಫ್ರಿಕಾ ಬೌಲರ್‌ಗಳ ಬೆವರಿಳಿಸಿದ ಭಾರತದ ಆರಂಭಿಕ ಜೋಡಿ ಔಟ್ ಆಗದೆ ದ್ವಿಶತಕದ ಜೊತೆಯಾಟವಾಡಿದರು. ಇದರಲ್ಲಿ ಶತಕ ಸಿಡಿಸಿ ಮಿಂಚಿದ ರೋಹಿತ್ ಶರ್ಮಾ 174 ಎಸೆತದಲ್ಲಿ 12 ಬೌಂಡರಿ ಮತ್ತು 5 ಸಿಕ್ಸರ್‌ನೊಂದಿಗೆ 115 ರನ್ ಗಳಿಸಿದರೆ ಇವರಿಗೆ ಉತ್ತಮ ಸಾಥ್ ಕೊಟ್ಟ ಕನ್ನಡಿಗ ಮಯಾಂಕ್ ಆಗರವಾಲ್ 183 ಎಸೆತದಲ್ಲಿ 11 ಬೌಂಡರಿ ಮತ್ತು 2 ಸಿಕ್ಸರ್‌ನೊಂದಿಗೆ84 ರನ್ ಸಿಡಿಸಿ ಔಟಾಗದೆ ಉಳಿದಿದ್ದಾರೆ.