CricketLatestLeading NewsMain PostSports

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ – ಕೊಹ್ಲಿಗಿಲ್ಲ ಸ್ಥಾನ, ರಾಹುಲ್‍ಗೆ ಷರತ್ತು!

Advertisements

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ ಟೀಂ ಇಂಡಿಯಾವನ್ನು ಆಯ್ಕೆ ಮಾಡಿದೆ. ತಂಡದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

TEAM INDIA

ಬಿಸಿಸಿಐ ಆಯ್ಕೆ ಮಾಡಿರುವ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಕೊಹ್ಲಿ ಜೊತೆಗೆ ಜಸ್ಪ್ರೀತ್ ಬುಮ್ರಾ ಮತ್ತು ಯಜುವೇಂದ್ರ ಚಹಲ್‌ಗೆ ವಿಶ್ರಾಂತಿ ನೀಡಿ ತಂಡದಿಂದ ಹೊರಗಿಡಲಾಗಿದೆ. ಗಾಯದಿಂದಾಗಿ ಇಂಗ್ಲೆಂಡ್ ಪ್ರವಾಸದಿಂದ ಹೊರಗುಳಿದಿರುವ ಕನ್ನಡಿಗ ಕೆ.ಎಲ್ ರಾಹುಲ್ ಹೆಸರು ತಂಡದಲ್ಲಿದ್ದರೂ ಕೂಡ ಫಿಟ್ನೆಸ್ ಸಾಬೀತು ಪಡಿಸಬೇಕೆಂಬ ಷರತ್ತು ವಿಧಿಸಿದೆ. ಇದನ್ನೂ ಓದಿ: ಇಂದು ಭಾರತ-ಇಂಗ್ಲೆಂಡ್ 2ನೇ ಏಕದಿನ – ಸರಣಿ ಗೆಲ್ಲುವ ತವಕದಲ್ಲಿ ಟೀಂ ಇಂಡಿಯಾ

ಟಿ20 ಸರಣಿಗೆ ಯುವ ಆಟಗಾರರಿಗೆ ಮಣೆ ಹಾಕಲಾಗಿದ್ದು, ಬಹುತೇಕ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿದ್ದ ಆಟಗಾರರು ಆಯ್ಕೆಯಾಗಿದ್ದಾರೆ.‌ ಕುಲ್‌ದೀಪ್ ಯಾದವ್ ಮತ್ತು ಅಶ್ವಿನ್‌ ತಂಡಕ್ಕೆ ವಾಪಸ್‌ ಆಗಿದ್ದಾರೆ.  ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಜುಲೈ 29 ರಿಂದ ಆರಂಭವಾಗಲಿದೆ. ಈ ಮೊದಲು ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಇದನ್ನೂ ಓದಿ: ಸ್ಫೋಟಕ ಶತಕ- ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಸೂರ್ಯ ಭಾರೀ ಹೈಜಂಪ್‌

ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ನಿವಾಸ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲ್‌ದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್. (ಕೆ.ಎಲ್ ರಾಹುಲ್ ಮತ್ತು ಕುಲದೀಪ್ ಯಾದವ್ ಸೇರ್ಪಡೆ ಫಿಟ್ನೆಸ್ ಸಾಬೀತು ಪಡಿಸದರೆ ಮಾತ್ರ)

Live Tv

Leave a Reply

Your email address will not be published.

Back to top button