ಚುಟುಕು ಪಂದ್ಯದಲ್ಲಿ ರೋಹಿತ್‍ನನ್ನು ಹಿಂದಿಕ್ಕಿದ ವಿರಾಟ್

Public TV
3 Min Read
collage virat rohith

ನವದೆಹಲಿ: ಟಿ-20 ಮಾದರಿಯ ಪಂದ್ಯದಲ್ಲಿ ಭಾರತದ ತಂಡದ ನಾಯಕ ವಿರಾಟ್ ಕೊಹ್ಲಿ ಉಪನಾಯಕ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದ್ದಾರೆ.

ಬುಧವಾರ ಮೊಹಾಲಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧ ಟಿ-20 ಪಂದ್ಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿಗೆ ಕಾರಣವಾದ ವಿರಾಟ್ ಕೊಹ್ಲಿ ಔಟಾಗದೆ 52 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸೇರಿ 72 ರನ್ ಸಿಡಿಸಿದರು. ಈ ಮೂಲಕ ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ.

EEwuE2NUUAA9EH8 900x600 1

ಇದಕ್ಕೂ ಮೊದಲು 96 ಪಂದ್ಯಗಳನ್ನು ಆಡಿ 32.71 ರ ಸರಾಸರಿಯಲ್ಲಿ 2,422 ರನ್ ಗಳಿಸಿದ್ದ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದರು. ನಂತರದ ಸ್ಥಾನದಲ್ಲಿ 70 ಪಂದ್ಯಗಳನ್ನಾಡಿ 49.35 ರ ಸರಾಸರಿಯಲ್ಲಿ 2,369 ರನ್ ಗಳಿಸಿದ್ದ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದರು. ಆದರೆ ಬುಧವಾರ ನಡೆದ ಪಂದ್ಯದಲ್ಲಿ ಅರ್ಧ ಶತಕ ಸಿಡಿಸಿದ ಕೊಹ್ಲಿ ರೋಹಿತ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ್ದಾರೆ.

ಸೌತ್ ಆಫ್ರಿಕಾ ನಡುವಿನ ಎರಡನೇ ಟಿ-10 ಪಂದ್ಯದಲ್ಲಿ ಕೇವಲ 12 ರನ್ ಗಳಿಸಿ ನಿರಾಶೆ ಮೂಡಿಸಿದ ರೋಹಿತ್ ಶರ್ಮಾ ಒಟ್ಟು 2,434 ರನ್ ಗಳಿಸಿ ಎರಡನೇ ಸ್ಥಾನಕ್ಕೆ ಜಾರಿದರು. ಆದರೆ ಇದೇ ಪಂದ್ಯದಲ್ಲಿ 72 ರನ್ ಗಳಿಸಿ ಭಾರತವನ್ನು ಗೆಲುವಿನತ್ತ ಕರೆದುಕೊಂಡು ಹೋದ ಕೊಹ್ಲಿ 71 ಪಂದ್ಯಗಳಲ್ಲಿ 2,441 ರನ್ ಗಳಿಸುವ ಮೂಲಕ ಮೊದಲ ಸ್ಥಾನಕ್ಕೇರಿದರು. ಈ ಸಾಧನೆ ಜೊತೆಗೆ ಕ್ರಿಕೆಟ್ ಮೂರು ಮಾದರಿಯ ಪಂದ್ಯಗಳಲ್ಲಿ 50.01 ಸರಾಸರಿ ಹೊಂದಿರುವ ಏಕೈಕ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಹರಿಣರು ನೀಡಿದ್ದ 150 ರನ್‍ಗಳ ಮೊತ್ತವನ್ನು ಬೆನ್ನಟ್ಟಿದ ಟೀಂ ಇಂಡಿಯಾ ಒಂದು ಓವರ್ ಬಾಕಿ ಇರುವಾಗಲೇ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು. ಆರಂಭಿಕ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಕೇವಲ 12 ರನ್ ಗಳಿಸಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ತೆರಳಿದರು. ಶಿಖರ್ ಧವನ್‍ಗೆ ಸಾಥ್ ನೀಡುತ್ತ ವಿರಾಟ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. 31 ಎಸೆತಗಳನ್ನು ಎದುರಿಸಿದ ಶಿಖರ್ ಧವನ್ 1 ಸಿಕ್ಸ್, 4 ಬೌಂಡರಿ ಸೇರಿ 40 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ರಿಷಭ್ ಪಂತ್ ಕೇವಲ 4 ಗಳಿಸಲು ಶಕ್ತರಾದರು. ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಗೆಲುವಿಗೆ ಕಾರಣವಾದ ವಿರಾಟ್ ಕೊಹ್ಲಿ ಔಟಾಗದೆ 52 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸೇರಿ 72 ರನ್ ಸಿಡಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ದಕ್ಷಿಣ ಆಫ್ರಿಕಾ ತಂಡದ ಆರಂಭಿಕ ಬ್ಯಾಟ್ಸ್ ಮನ್ ರೀಝಾ ಹೆಂಡ್ರಿಕ್ಸ್ ಕೇವಲ 6 ರನ್‍ಗಳಿಗೆ ವಿಕೆಟ್ ಒಪ್ಪಿಸಿದರು. ಇತ್ತ ಕ್ವಿಂಟನ್ ಡಿಕಾಕ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಕ್ವಿಂಟನ್ ಡಿಕಾಕ್ 37 ಎಸೆತಗಳಲ್ಲಿ 8 ಬೌಂಡರಿ ಸೇರಿದಂತೆ 52 ರನ್ ಕಲೆಹಾಕಿದರು. ಡಿಕಾಕ್‍ಗೆ ಸಾಥ್ ನೀಡಿದ ತೆಂಬಾ ಬವೂಮಾ ಕೂಡ ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚಿದರು. ದುರಾದೃಷ್ಟವಶಾತ್ 50 ರನ್‍ಗಳಿಗೆ ಒಂದು ರನ್ ಬಾಕಿ ಇರುವಂತೆ ವಿಕೆಟ್ ಒಪ್ಪಿಸಿ ಅರ್ಧ ಶತಕ ವಂಚಿತರಾದರು. 43 ಎಸೆತಗಳನ್ನು ಎದುರಿಸಿದ ತೆಂಬಾ ಬವೂಮಾ 1 ಸಿಕ್ಸ್, 3 ಬೌಂಡರಿ ಸೇರಿದಂತೆ 49 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಈ ಮೂಲಕ ದಕ್ಷಿಣ ಆಫ್ರಿಕಾ ತಂಡವು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 149 ಕಲೆ ಹಾಕಿತ್ತು.

ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೊಹ್ಲಿ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

Share This Article
Leave a Comment

Leave a Reply

Your email address will not be published. Required fields are marked *