ನವದೆಹಲಿ: ಫೋರ್ಟ್ ಆಫ್ ಸ್ಪೇನ್‍ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ (Virat Kohli) ಗುರುವಾರ 500ನೇ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಲಿದ್ದಾರೆ.
ಸಚಿನ್ ತೆಂಡೂಲ್ಕರ್ (Sachin Tendulkar) (664), ರಾಹುಲ್ ದ್ರಾವಿಡ್ (509) ಮತ್ತು ಎಂಎಸ್ ಧೋನಿ (538) ನಂತರ ಕೊಹ್ಲಿ 500ನೇ ಅಂತರಾಷ್ಟ್ರೀಯ ಪಂದ್ಯ ಆಡುತ್ತಿರುವ ಟೀಂ ಇಂಡಿಯಾದ ನಾಲ್ಕನೇ ಆಟಗಾರರಾಗಿದ್ದಾರೆ. ಅಲ್ಲದೇ ಒಟ್ಟಾರೆ ಕ್ರಿಕೆಟ್ ಇತಿಹಾಸದಲ್ಲಿ 500ನೇ ಪಂದ್ಯ ಆಡುತ್ತಿರುವ 10ನೇ ಆಟಗಾರರಾಗಿದ್ದಾರೆ. ಇದನ್ನೂ ಓದಿ: ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್
Advertisement
499 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 558 ಇನ್ನಿಂಗ್ಸ್‌ಗಳಲ್ಲಿ 53.48 ಸರಾಸರಿಯಲ್ಲಿ 25,461 ರನ್ ಗಳಿಸಿದ್ದಾರೆ. ಮೂರು ಮಾದರಿಯಲ್ಲಿ 75 ಶತಕ ಮತ್ತು 131 ಅರ್ಧಶತಕಗಳನ್ನು ಗಳಿಸಿದ್ದಾರೆ.
Advertisement
Advertisement
274 ಏಕದಿನ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 57.32 ಸರಾಸರಿಯಲ್ಲಿ 12,898 ರನ್ ಗಳಿಸಿದ್ದಾರೆ. 46 ಶತಕ ಮತ್ತು 65 ಅರ್ಧ ಶತಕಗಳನ್ನು ಹೊಡೆದಿರುವ ಕೊಹ್ಲಿ ಏಕದಿನ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ರನ್‍ಗಳಿಸಿದ ಎರಡನೇ ಭಾರತೀಯ (Team India) ಬ್ಯಾಟ್ಸ್‌ಮನ್ ಆಗಿದ್ದಾರೆ.
Advertisement
8,000 ರನ್ (175 ಇನ್ನಿಂಗ್ಸ್), 9,000 ರನ್ (194 ಇನ್ನಿಂಗ್ಸ್), 10,000 ರನ್ (205 ಇನ್ನಿಂಗ್ಸ್), 11,000 ರನ್ (222 ಇನ್ನಿಂಗ್ಸ್) ಮತ್ತು 242 ಇನ್ನಿಂಗ್ಸ್‌ನಲ್ಲಿ 12,000 ರನ್ ಹೊಡೆದಿದ್ದಾರೆ. ಇದನ್ನೂ ಓದಿ: RCB ಏಕೆ ಐಪಿಎಲ್ ಟ್ರೋಫಿ ಗೆದ್ದಿಲ್ಲ – ತಂಡದಿಂದ ಕೈಬಿಟ್ಟ ಮೇಲೆ ಪ್ರಾಮಾಣಿಕ ಉತ್ತರ ಕೊಟ್ಟ ಚಾಹಲ್
Web Stories