Wednesday, 19th February 2020

Recent News

ಸಚಿನ್, ಲಾರಾ ವಿಶ್ವದಾಖಲೆ ಮುರಿಯುವ ಸನಿಹದಲ್ಲಿ ಕೊಹ್ಲಿ

ಲಂಡನ್: ಪಾಕಿಸ್ತಾನ ವಿರುದ್ಧ ಅರ್ಧ ಶತಕ ಸಿಡಿಸಿ ವೇಗವಾಗಿ ಏಕದಿನ ಕ್ರಿಕೆಟಿನಲ್ಲಿ 11 ಸಾವಿರ ರನ್ ಸಿಡಿಸಿ ಆಟಗಾರ ಎಂಬ ದಾಖಲೆ ನಿರ್ಮಿಸಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಶನಿವಾರ ನಡೆಲಿರುವ ಅಫ್ಘಾನಿಸ್ತಾನದ ವಿರುದ್ಧ ಪಂದ್ಯದಲ್ಲಿ ಮತ್ತೊಂದು ವಿಶ್ವದಾಖಲೆ ನಿರ್ಮಿಸುವ ಸನಿಹದಲ್ಲಿದ್ದಾರೆ.

2019 ರ ವಿಶ್ವಕಪ್ ಟೂರ್ನಿಯಲ್ಲಿ ಶತಕ ಸಿಡಿಸಬೇಕಿರುವ ಕೊಹ್ಲಿ, 104 ರನ್ ಗಳಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ವೇಗವಾಗಿ 20 ಸಾವಿರ ರನ್ ಸಿಡಿಸಿದ ವಿಶ್ವ ದಾಖಲೆ ಬರೆಯಲಿದ್ದಾರೆ.

ವಿರಾಟ್ ಕೊಹ್ಲಿ 415 ಇನ್ನಿಂಗ್ಸ್ ಅಂದರೆ 131 ಟೆಸ್ಟ್, 222 ಏಕದಿನ ಪಂದ್ಯ ಹಾಗೂ 62 ಟಿ20 ಪಂದ್ಯಗಳಿಂದ ಒಟ್ಟು 19,896 ರನ್ ಸಿಡಿಸಿದ್ದಾರೆ. ಸದ್ಯ ಕೊಹ್ಲಿ 20 ಸಾವಿರ ರನ್ ಸಾಧನೆ ಮಾಡಲು 104 ರನ್ ಮಾತ್ರ ಅಗತ್ಯವಿದ್ದು, ಅಫ್ಘಾನಿಸ್ತಾನ ವಿರುದ್ಧ ಪಂದ್ಯದಲ್ಲಿ ಈ ಸಾಧನೆ ನಿರ್ಮಿಸುವ ಅವಕಾಶ ಹೊಂದಿದ್ದಾರೆ.

ಈ ಹಿಂದೆ ಸಚಿನ್ ತೆಂಡೂಲ್ಕರ್ ಹಾಗೂ ಲಾರಾ 453 ಇನ್ನಿಂಗ್ಸ್ ಗಳಿಂದ 20 ಸಾವಿರ ರನ್ ಸಿಡಿಸಿದ್ದರು. ಉಳಿದಂತೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಟಿಂಗ್ 468 ಇನ್ನಿಂಗ್ಸ್ ಗಳಿಂದ ಈ ಸಾಧನೆ ಮಾಡಿದ್ದರು. ಮೂವರು ದಿಗ್ಗಜರನ್ನು ಹಿಂದಿಕ್ಕುವ ಅವಕಾಶವನ್ನು ಕೊಹ್ಲಿ ಹೊಂದಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ, ಸೌತ್ ಆಫ್ರಿಕಾ ವಿರುದ್ಧ 18 ರನ್, ಆಸ್ಟ್ರೇಲಿಯಾ ವಿರುದ್ಧ 82 ರನ್ ಹಾಗೂ ಪಾಕಿಸ್ತಾನದ ವಿರುದ್ಧ 77 ರನ್ ಸಿಡಿಸಿದ್ದಾರೆ. ಸದ್ಯ ಟೀಂ ಇಂಡಿಯಾ ವಿಶ್ವಕಪ್ ಅಂಕಪಟ್ಟಿಯಲ್ಲಿ 4 ಸ್ಥಾನದಲ್ಲಿದ್ದು, ಟೂರ್ನಿಯಲ್ಲಿ ನಾವು ಯಾವುದೇ ತಂಡವನ್ನು ಸುಲಭವಾಗಿ ಪರಿಗಣಿಸುವುದಿಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

[wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

Leave a Reply

Your email address will not be published. Required fields are marked *