ಬ್ರಿಡ್ಜ್ಟೌನ್(ಬಾರ್ಬಡೋಸ್): ಭಾರತ (Team India) ಎರಡನೇ ಟಿ20 ವಿಶ್ವಕಪ್ ಕ್ರಿಕೆಟ್ (T20 World Cup) ಗೆದ್ದ ಬೆನ್ನಲ್ಲೇ ವಿರಾಟ್ ಕೊಹ್ಲಿ (Virat Kohli) ಟಿ20 ಕ್ರಿಕೆಟ್ಗೆ ಗುಡ್ಬೈ ಹೇಳಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ನಲ್ಲಿ ವಿಕೆಟ್ ಉರುಳುತ್ತಿದ್ದಾಗ ಗಟ್ಟಿ ಬಂಡೆಯಂತೆ ನಿಂತು 76 ರನ್ (59 ಎಸೆತ, 6 ಬೌಂಡರಿ, 2 ಸಿಕ್ಸರ್) ಸಿಡಿಸಿದ ವಿರಟ್ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇದನ್ನೂ ಓದಿ: ವಿಶ್ವಕಪ್ ಜೊತೆ ವಿಶ್ವದಾಖಲೆ – ಟೀಂ ಇಂಡಿಯಾದ ಸಾಧನೆ ಮುರಿಯುವುದು ಬಲು ಕಷ್ಟ
Advertisement
Advertisement
ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಇದು ನನ್ನ ಕೊನೆಯ ಟಿ 20 ವಿಶ್ವಕಪ್. ಇಲ್ಲಿಯವರೆಗೆ ಇದನ್ನೇ ಸಾಧಿಸಲು ನಾವು ಬಯಸುತ್ತಿದ್ದೆವು ಎಂದು ಹೇಳಿದರು.
Advertisement
ಇದು ಭಾರತಕ್ಕಾಗಿ ಆಡುತ್ತಿರುವ ನನ್ನ ಕೊನೆಯ ಟಿ20 ಪಂದ್ಯ. ಮುಂದೆ ಯುವ ಪೀಳಿಗೆ ಕ್ರಿಕೆಟ್ ತಂಡದ ನೇತೃತ್ವ ವಹಿಸಿಕೊಳ್ಳಬೇಕು ಎಂದು ತಿಳಿಸಿ ಈ ಯಶಸ್ಸಿಗಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಗೆದ್ದ ಭಾರತ