ನವದೆಹಲಿ: ಕೆಲವೊಂದು ಬಾರಿ ನಾವು ಜಯಗಳಿಸುತ್ತೇವೆ, ಕೆಲವೊಮ್ಮೆ ಪಾಠ ಕಲಿಯುತ್ತೇವೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ 2ನೇ ಪಂದ್ಯದಲ್ಲಿ ಸೋಲುಂಡ ಬಳಿಕ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಈ ಕುರಿತು ಬರೆದುಕೊಂಡಿರುವ ಕೊಹ್ಲಿ, ಕೆಲವೊಂದು ಬಾರಿ ನಾವು ಜಯಗಳಿಸುತ್ತೇವೆ, ಕೆಲವೊಮ್ಮೆ ಪಾಠ ಕಲಿಯುತ್ತೇವೆ. ಆದರೆ ನಾವು ಎಂದು ಪ್ರಯತ್ನವನ್ನು ನಿಲ್ಲಿಸುವುದಿಲ್ಲ. ನೀವು ನಮ್ಮನ್ನು ಬಿಟ್ಟುಕೊಡಬಾರದು, ನಾವು ನಿಮ್ಮನ್ನು ಬಿಟ್ಟುಕೊಡುವುದಿಲ್ಲ ಎಂದು ಭರವಸೆ ನೀಡುತ್ತೇವೆ ಎಂದು ಬರೆದುಕೊಂಡಿದ್ದಾರೆ.
Advertisement
https://www.facebook.com/virat.kohli/posts/1882345588519202
Advertisement
ಲಾರ್ಡ್ಸ್ ಪಂದ್ಯದ ಬಳಿಕ ಮಾತನಾಡಿದ್ದ ಕೊಹ್ಲಿ, ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದರೆ ಇಲ್ಲಿ ಮಾಡಿದ ತಪ್ಪುಗಳಿಂದ ಹಲವು ವಿಚಾರಗಳನ್ನು ಕಲಿತಿದ್ದೇವೆ. ಮುಂದಿನ ಪಂದ್ಯದಲ್ಲಿ ಗೆಲುವು ಪಡೆಯುವ ಮೂಲಕ ಸರಣಿಯನ್ನು 2-1 ಅಂತರಕ್ಕೆ ತರುವ ವಿಶ್ವಾಸವಿದೆ. ತಂಡದ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲೂ ಸ್ಥಿರ ಪ್ರದರ್ಶನ ನೀಡಬೇಕಿದೆ ಎಂದು ಹೇಳಿದ್ದರು.
Advertisement
ಐಸಿಸಿ ಶ್ರೇಯಾಂಕ ಹಿಂಬಡ್ತಿ: ಒಂದು ವಾರದ ಹಿಂದೆಯಷ್ಟೇ ಐಸಿಸಿ ಬ್ಯಾಟಿಂಗ್ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನ ಪಡೆದಿದ್ದ ವಿರಾಟ್ ಕೊಹ್ಲಿ, ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ 23 ಹಾಗೂ 17 ರನ್ ಗಳನ್ನು ಮಾತ್ರ ಗಳಿಸಿ 2ನೇ ಸ್ಥಾನಕ್ಕೆ ಹಿಂಬಡ್ತಿಯಾಗಿದ್ದಾರೆ. 2011 ರಲ್ಲಿ ಸಚಿನ್ ತೆಂಡೂಲ್ಕರ್ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ಬಳಿಕ ಕೊಹ್ಲಿ ನಂ.1 ಸ್ಥಾನ ಪಡೆದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದರು. ಸದ್ಯ ಪಟ್ಟಿಯಲ್ಲಿ ಆಸೀಸ್ ಆಟಗಾರ ಸ್ಟೀವ್ ಸ್ಮಿತ್ ಮೊದಲ ಸ್ಥಾನ ಪಡೆದಿದ್ದಾರೆ.
Advertisement
ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯ ಟ್ರೆಂಟ್ ಬ್ರಿಜ್ ನಲ್ಲಿ ಆಗಸ್ಟ್ 18 ರಿಂದ ಆರಂಭಗೊಳ್ಳಲಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv