ಮುಂಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಈ ಬಾರಿಯ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ತಿಳಿಸಿದ್ದರು. ಇದೀಗ ಕೊಹ್ಲಿಗೆ ಟಿ20 ಜೊತೆಗೆ ಏಕದಿನ ತಂಡದ ನಾಯಕತ್ವದಿಂದಲು ಕೆಳಗಿಸಲು ಬಿಸಿಸಿಐ ಪ್ಲಾನ್ ಮಾಡಿದೆ ಎಂದು ಮೂಲಗಳಿಂದ ವರದಿಯಾಗಿದೆ.
Advertisement
ಟಿ20 ವಿಶ್ವಕಪ್‍ನಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಸೋಲಿನಿಂದಾಗಿ ಸೆಮಿಫೈನಲ್‍ನಿಂದ ಬಹುತೇಕ ಹೊರಬಿದ್ದರುವ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ ವಿರಾಟ್ ಕೊಹ್ಲಿ ನಡೆಯ ಬಗ್ಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ವಿರಾಟ್ ಕೊಹ್ಲಿ ನಾಯನಾಗಿ ತೆಗೆದುಕೊಂಡು ನಿರ್ಧಾರವನ್ನು ಹಲವರು ಪ್ರಶ್ನಿಸಿದ್ದರು. ಈ ಎಲ್ಲದರ ನಡುವೆ ಈವರೆಗೆ ನಾಯಕನಾಗಿ ಒಂದೇ ಒಂದು ಐಸಿಸಿ ಟ್ರೋಫಿ ಗೆಲ್ಲಲು ವಿಫಲವಾಗಿರುವ ಕೊಹ್ಲಿ ನಾಯಕತ್ವದ ಬಗ್ಗೆ ಬಿಸಿಸಿಐ ಕೂಡ ಯೋಚನೆ ಮಾಡುತ್ತಿದ್ದು, ಏಕದಿನ ನಾಯಕತ್ವದಿಂದಲೂ ಕೊಹ್ಲಿಯನ್ನು ಕೆಳಗಿಸಲು ನಿರ್ಧರಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಟೀಮ್ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ
Advertisement
Advertisement
ಒಬ್ಬ ಬ್ಯಾಟ್ಸ್‌ಮ್ಯಾನ್ ಆಗಿ ತಂಡವನ್ನು ಯಶಸ್ಸಿನ ಉತ್ತುಂಗಕ್ಕೆ ಏರಿಸಿದ್ದ ಕೊಹ್ಲಿ ನಾಯಕನಾಗಿ ತಂಡವನ್ನು ನಿರ್ವಹಿಸುತ್ತಿರುವುದನ್ನು ಬಿಸಿಸಿಐ ಗಮನಿಸಿ ಸೀಮಿತ ಓವರ್ ಗಳ ನಾಯಕತ್ವದಿಂದ ಕೆಳಗಿಳಿಸಿ ಟೆಸ್ಟ್ ನಾಯಕತ್ವದಲ್ಲಿ ಮಾತ್ರ ಮುಂದುವರಿಸಲು ಮಾತುಕತೆ ನಡೆದಿದೆ ಎಂದು ಮೂಲಗಳಿಂದ ಮಾಹಿತಿ ಹೊರಬಿದ್ದಿದೆ. ಇದನ್ನೂ ಓದಿ: 14 ವರ್ಷಗಳ ಹಿಂದಿನ ದಾಖಲೆ ಪುಡಿಗಟ್ಟಿದ ರೋಹಿತ್, ರಾಹುಲ್ ಜೋಡಿ
Advertisement
ವಿರಾಟ್ ಕೊಹ್ಲಿ ಸಿಮೀತ ಓವರ್ ಗಳ ಕ್ರಿಕೆಟ್ ನಾಯಕತ್ವದಿಂದ ಹೊರ ನಡೆದರೆ ನಾಯಕರಾಗಿ ರೋಹಿತ್ ಶರ್ಮಾ, ಕೆ.ಎಲ್ ರಾಹುಲ್ ಮತ್ತು ರಿಷಬ್ ಪಂತ್ ಹೆಸರು ಕೇಳಿ ಬರುತ್ತಿದೆ. ಜೊತೆಗೆ ಟಿ20 ವಿಶ್ವಕಪ್ ಮುಗಿದ ಬಳಿಕ ರಾಹುಲ್ ದ್ರಾವಿಡ್ ಕೋಚ್ ಆಗಿ ಟೀಂ ಇಂಡಿಯಾಗೆ ಸೇರ್ಪಡೆಗೊಳ್ಳುವುದರಿಂದಾಗಿ ಮಹತ್ವದ ಬದಲಾವಣೆ ಮುನ್ಸೂಚನೆ ಬಿಸಿಸಿಐ ಕೊಟ್ಟಿದೆ. ಇದೀಗ ನಾಯಕತ್ವದ ಬಗ್ಗೆ ಎದ್ದಿರುವ ಪ್ರಶ್ನೆಗೆ ಕೆಲದಿನಗಳಲ್ಲಿ ಸ್ಪಷ್ಟ ನಿರ್ಧಾರ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಇದನ್ನೂ ಓದಿ: ನೀರಜ್ ಚೋಪ್ರಾ ಸೇರಿದಂತೆ 12 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ