ಮುಂಬೈ: ಟೀಂ ಇಂಡಿಯಾ ಸೀಮಿತ ಓವರ್‌ಗಳ ತಂಡದ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿ, ರೋಹಿತ್ ಶರ್ಮಾರನ್ನು ನಾಯಕರನ್ನಾಗಿ ಬಿಸಿಸಿಐ ನೇಮಿಸಿದೆ. ಇದರ ಬೆನ್ನಲ್ಲೇ ದಕ್ಷಿಣ ಆಫಿಕಾ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾ ಮುಂಬೈನಲ್ಲಿ ತರಬೇತಿ ಶಿಬಿರ ಆರಂಭಿಸಿದೆ. ಈ ಶಿಬಿರಕ್ಕೆ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಗೈರಾಗಿದ್ದಾರೆ.
Advertisement
ಈಗಾಗಲೇ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ತಯಾರಿಯಲ್ಲಿದೆ. ಬಿಸಿಸಿಐ ಪ್ಲಾನ್ ಪ್ರಕಾರ ಆಟಗಾರರಿಗೆ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಮೂರು ದಿನದ ತರಬೇತಿ ಶಿಬಿರ ಜೊತೆಗೆ ಕ್ವಾರಂಟೈನ್ ಮಾಡಲು ತೀರ್ಮಾನಿಸಿದೆ. ಈ ಶಿಬಿರಕ್ಕೆ ಈಗಾಗಲೇ ಸೀಮಿತ ಓವರ್‌ಗಳ ತಂಡದ ನಾಯಕ ರೋಹಿತ್ ಶರ್ಮಾ, ಶಾರ್ದೂಲ್ ಠಾಕೂರ್, ರಿಷಬ್ ಪಂತ್ ಸೇರಿದಂತೆ ಬಹುತೇಕ ಮಂದಿ ಆಟಗಾರರು ಆಮಿಸಿದ್ದಾರೆ. ಆದರೆ ಕೊಹ್ಲಿ ಮಾತ್ರ ತರಬೇತಿ ಶಿಬಿರದಲ್ಲಿ ಸೇರಿಕೊಂಡಿಲ್ಲ. ಹಾಗಾಗಿ ಕೊಹ್ಲಿ ನಡೆ ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಏಕದಿನ ತಂಡದ ನಾಯಕತ್ವದಿಂದ ಕೊಹ್ಲಿಗೆ ಕೆಳಗಿಳಿಯಲು ಅಸಮಾಧಾನವಿತ್ತು. ಆದರೆ ಬಿಸಿಸಿಐ ಮಾತ್ರ ಕೊಹ್ಲಿಯನ್ನು ಕೆಳಗಿಳಿಸಿ ರೋಹಿತ್‍ಗೆ ಪಟ್ಟ ಕಟ್ಟಿದೆ. ಹಾಗಾಗಿ ಕೊಹ್ಲಿ ಮುನಿಸಿಕೊಂಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: ನಾನು ಬಿಜೆಪಿ ಸೇರುವುದು Fake News: ಹರ್ಭಜನ್ ಸಿಂಗ್
Advertisement
Advertisement
ಮೂಲಗಳ ಪ್ರಕಾರ, ಬಿಸಿಸಿಐ ಅಧಿಕಾರಿಗಳು ವಿರಾಟ್ ಕೊಹ್ಲಿಯನ್ನು ಸಂಪರ್ಕಿಸಲು ಪ್ರಯತ್ನ ಪಟ್ಟರು. ಕೊಹ್ಲಿ ಫೋನ್ ಕರೆ ಸ್ವೀಕರಿಸುತ್ತಿಲ್ಲ ಎಂದು ವರದಿಯಾಗಿದೆ. ಇದನ್ನೂ ಓದಿ: ಶತಕ ಸಿಡಿಸಿ ರಜನಿಕಾಂತ್ ಸ್ಟೈಲ್‍ನಲ್ಲಿ ಸಂಭ್ರಮಿಸಿದ ವೆಂಕಟೇಶ್ ಅಯ್ಯರ್
Advertisement
ವಿರಾಟ್ ಕೊಹ್ಲಿ ಶಿಬಿರಕ್ಕೆ ಗೈರಾಗುವ ಬಗ್ಗೆ ಮೊದಲೇ ತಿಳಿಸಿದ್ದರು. ಮೂರು ದಿನಗಳ ಶಿಬಿರಕ್ಕೆ ನಾಳೆ ಕೊಹ್ಲಿ ಆಗಮಿಸುತ್ತಾರೆ. ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದ ಮುನ್ನ ಮೂರು ದಿನಗಳ ಕಾಲ ಬಯೋ ಬಬಲ್‍ನಲ್ಲಿ ಇದ್ದು ಜೋಹನ್‍ಬರ್ಗ್ ಗೆ ಪ್ರಯಾಣ ಬೆಳೆಸಲಿದೆ ಹಾಗಾಗಿ ಮುಂಬೈನಲ್ಲಿ ಸೇರಿದೆ ಅಷ್ಟೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಡ್ಡನ ಅಡ್ಡಾದಲ್ಲಿ ಕಾಣಿಸಿಕೊಂಡ ವಾರ್ನರ್: ನೀನು ಚೆನ್ನಾಗಿದ್ದೀಯಾ ತಾನೇ ಎಂದು ಕಾಲೆಳೆದ ಕೊಹ್ಲಿ