ನಾಳೆ ಮಧ್ಯಾಹ್ನ ವಿಶೇಷ ಪ್ರಕಟಣೆಯನ್ನು ಪ್ರಕಟಿಸಲಿದ್ದಾರೆ ಕೊಹ್ಲಿ!

Public TV
1 Min Read
virat kohli

ಬೆಂಗಳೂರು: ಶುಕ್ರವಾರ ಮಧ್ಯಾಹ್ನ 1.30ಕ್ಕೆ ನಾನು ವಿಶೇಷ ಪ್ರಕಟಣೆಯನ್ನು ಪ್ರಕಟಿಸುವುದಾಗಿ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಈ ಕುರಿತು ವಿರಾಟ್ ಸ್ವತಃ ತಮ್ಮ ಟ್ವಿಟ್ಟರ್ ಹಾಗೂ ಇನ್‍ ಸ್ಟಾಗ್ರಾಂನಲ್ಲಿ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ. ನಾನು ನಿಮ್ಮ ಜೊತೆ ಮುಖ್ಯವಾಗಿ ಮಾತನಾಡಬೇಕು. ನಾಳೆ ನಾನು 1.30ಕ್ಕೆ ಲೈವ್ ಬರುತ್ತಿದ್ದೇನೆ. ಯಾರೂ ಈ ಲೈವ್ ಮರೆಯಬೇಡಿ. ಏಕೆಂದರೆ ಇದು ಬಹಳ ಮುಖ್ಯವಾದದ್ದು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ವಿರಾಟ್ ನಾಳೆ ಲೈವ್ ಬರುತ್ತಿರುವುದರಿಂದ ಅಭಿಮಾನಿಗಳಿಗೆ ಸಾಕಷ್ಟು ಕುತೂಹಲ ಮೂಡಿದೆ. ಐಪಿಎಲ್‍ನಲ್ಲಿ ಆರ್‌ಸಿಬಿ ಕಳಪೆ ಪ್ರದರ್ಶನದ ಬಗ್ಗೆ ಮಾತನಾಡಲಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

ಐಪಿಎಲ್ 2018 ರ 11ನೇ ಆವೃತ್ತಿಯಲ್ಲಿ ಸತತ ನೀರಸ ಪ್ರದರ್ಶನ ತೋರಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವ ಸ್ಥಾನದಿಂದ ಗೌತಮ್ ಗಂಭೀರ್ ಕೆಳಗಿಳಿದಿದ್ದರು. ಹಾಗೆಯೇ ವಿರಾಟ್ ಕೊಹ್ಲಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನ ಸ್ಥಾನದಿಂದ ಕೆಳಗಿಳಿಯುತ್ತಾರಾ? ಈ ಕಾರಣಕ್ಕೆ ದಿನಾಂಕ ಫಿಕ್ಸ್ ಮಾಡಿದ್ದಾರಾ ಎನ್ನುವ ಪ್ರಶ್ನೆಯನ್ನು ಈಗ ಅಭಿಮಾನಿಗಳು ಕೇಳುತ್ತಿದ್ದಾರೆ.

ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಡೆಲ್ಲಿ ತಂಡದ ನಾಯಕ ಪಟ್ಟದಿಂದ ಗೌತಮ್ ಗಂಭೀರ್ ಇಳಿದಿದ್ದರು. ಬಳಿಕ ಶ್ರೇಯಸ್ ಅಯ್ಯರ್ ತಂಡವನ್ನು ಮುನ್ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *