Cricket

ಟಿ20 ವಿಶ್ವಕಪ್ ಬಳಿಕ ಟಿ20 ನಾಯಕತ್ವ ತ್ಯಜಿಸುತ್ತೇನೆಂದ ವಿರಾಟ್ ಕೊಹ್ಲಿ

Published

on

Share this

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವವನ್ನು ತ್ಯಜಿಸುತ್ತೇನೆ ಎಂದು ಅಧಿಕೃತವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕೊಹ್ಲಿ, ನಾನು ಕಳೆದ 8-9 ವರ್ಷಗಳಿಂದ ಭಾರತ ತಂಡಕ್ಕಾಗಿ ಆಡುತ್ತಿದ್ದೇನೆ. ನನಗೆ ತಂಡದ ನಾಯಕತ್ವ ನೀಡಿ 5-6 ವರ್ಷಗಳು ಕಳೆದಿದೆ. ಈಗಾಗಲೇ ಸಾಕಷ್ಟು ಯಶಸ್ಸನ್ನು ಕಂಡಿದ್ದೇನೆ. ಇದೀಗ ನಾನು ನನ್ನ ಬ್ಯಾಟಿಂಗ್ ಸಾಮರ್ಥ್ಯದ ಕಡೆಗೆ ಹೆಚ್ಚು ಆಸಕ್ತಿ ವಹಿಸುವ ಉದ್ದೇಶದಿಂದ ಟಿ20 ವಿಶ್ವಕಪ್ ಬಳಿಕ ಟಿ20 ತಂಡದ ನಾಯಕತ್ವ ತ್ಯಜಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ನಾನು ನಾಯಕತ್ವ ಮಾತ್ರ ಬಿಟ್ಟುಕೊಡುತ್ತಿದ್ದು, ಟಿ20 ಕ್ರಿಕೆಟ್‍ನಲ್ಲಿ ಓರ್ವ ಬ್ಯಾಟ್ಸ್‌ಮ್ಯಾನ್‌ ಆಗಿ ಭಾರತ ತಂಡದಲ್ಲಿ ಮುಂದುವರಿಯುತ್ತೇನೆ. ನಾನು ನಾಯಕನಾಗಿದ್ದಾಗ ನನಗೆ ತಂಡದ ಆಟಗಾರರಿಂದ ಹಿಡಿದು ತಂಡದ ಸಹಾಯಕ ಸಿಬ್ಬಂದಿ, ಆಯ್ಕೆ ಸಮಿತಿ, ಬಿಸಿಸಿಐ ಹೀಗೆ ಎಲ್ಲರೂ ಕೂಡ ಸಹಕಾರ ನೀಡಿದ್ದಾರೆ ಅವರೆಲ್ಲರಿಗೂ ಧನ್ಯವಾದಗಳು. ಇದನ್ನೂ ಓದಿ: ಕ್ಯಾಪ್ಟನ್ ಪಟ್ಟದಿಂದ ಇಳಿಯಲಿದ್ದಾರೆ ಕೊಹ್ಲಿ, ರೋಹಿತ್‍ಗೆ ನಾಯಕತ್ವ

ನಾನು ನನ್ನ ಆಪ್ತವಲಯದಲ್ಲಿ ಚರ್ಚಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ದುಬೈನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಬಳಿಕ ನಾಯಕತ್ವ ತ್ಯಜಿಸಿ ತಂಡದಲ್ಲಿ ಆಟಗಾರನಾಗಿ ಆಡಲು ಬಯಸುತ್ತೇನೆ. ನಾನು ಭಾರತ ತಂಡಕ್ಕಾಗಿ ನನ್ನ ಸಾಮರ್ಥ್ಯಕ್ಕೆ ಅನುಗುಣವಾಗಿ ಉತ್ತಮ ಸೇವೆಯನ್ನು ಸಲ್ಲಿಸುತ್ತೇನೆ ಎಂದು ಬರೆದಿದ್ದಾರೆ.

32 ವರ್ಷದ ವಿರಾಟ್ ಕೊಹ್ಲಿ ಏಕದಿನ ಮತ್ತು ಟಿ20 ನಾಯಕ ಪಟ್ಟದಿಂದ ಕೆಳಗೆ ಇಳಿಯಲು ನಿರ್ಧರಿಸಿದ್ದು, 34 ವರ್ಷದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಟೀಂ ಇಂಡಿಯವನ್ನು ಮುನ್ನಡೆಸಲಿದ್ದಾರೆ ಎಂದು ಕೆಲದಿನಗಳ ಹಿಂದೆ ಸುದ್ದಿಯಾಗಿದ್ದು, ಈ ಸುದ್ದಿ ಇದೀಗ ನಿಜವಾಗಿದೆ. ಮುಂದಿನ ನಾಯಕ ಯಾರು ಎಂಬುದನ್ನು ಬಿಸಿಸಿಐ ನಿರ್ಧರಿಸಲಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‍ಗೆ ಅಚ್ಚರಿಯಾಗಿ ಆಯ್ಕೆಗೊಂಡ ಆಟಗಾರರಿವರು

Click to comment

Leave a Reply

Your email address will not be published. Required fields are marked *

Advertisement
Advertisement