ಆಕ್ಲೆಂಡ್: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆ ಮೇಲೆ ದಾಖಲೆ ನಿರ್ಮಾಣ ಮಾಡುತ್ತಿದ್ದು, ಸದ್ಯ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ನ್ಯೂಜಿಲೆಂಡ್ ವಿರುದ್ಧ ನಿರ್ಮಿಸಿರುವ ದಾಖಲೆಯನ್ನು ಮುರಿಯುವ ಅವಕಾಶ ಸಿಕ್ಕಿದೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಮಾದರಿಯಲ್ಲಿ ವೀರೇಂದ್ರ ಸೆಹ್ವಾಗ್ ಅತೀ ಹೆಚ್ಚು ಶತಕಗಳನ್ನು ಸಿಡಿಸಿರುವ ದಾಖಲೆಯನ್ನು ಟೀಂ ಇಂಡಿಯಾ ಪರ ಹೊಂದಿದ್ದಾರೆ. ಕೊಹ್ಲಿ ಕಿವೀಸ್ ವಿರುದ್ಧ ಇದುವರೆಗೂ 5 ಶತಕಗಳನ್ನು ಗಳಿಸಿದ್ದು, ಸೆಹ್ವಾಗ್ 6 ಶತಕ ಸಿಡಿಸಿದ್ದಾರೆ. ಪಟ್ಟಿಯಲ್ಲಿ ಸಚಿನ್ ಕೂಡ 5 ಶತಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಸದ್ಯ ಕೊಹ್ಲಿ ವೀರೇಂದ್ರ ಸೆಹ್ವಾಗ್ ದಾಖಲೆ ಮುರಿಯಲು 2 ಶತಕಗಳ ಅಗತ್ಯವಿದೆ. ಇದನ್ನು ಓದಿ: ಐಸಿಸಿ ಪ್ರಶಸ್ತಿ ಪಡೆದು ವಿಶ್ವದಾಖಲೆ ನಿರ್ಮಿಸಿದ ಕೊಹ್ಲಿ
Advertisement
Advertisement
ಸಚಿನ್ ತೆಂಡೂಲ್ಕರ್ ನ್ಯೂಜಿಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‍ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರರಾಗಿದ್ದು, 1,750 ರನ್‍ಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಇದರಲ್ಲಿ 5 ಶತಕ ಹಾಗೂ 8 ಅರ್ಧ ಶತಕಗಳು ಸೇರಿದೆ. ಸದ್ಯ ಕೊಹ್ಲಿ ಈ ಪಟ್ಟಿಯಲ್ಲಿ 3ನೇ ಸ್ಥಾನ ಹೊಂದಿದ್ದು, 5 ಶತಕ ಹಾಗೂ 6 ಅರ್ಧ ಶತಕಗಳೊಂದಿಗೆ 1,154 ರನ್ ಸಿಡಿಸಿದ್ದಾರೆ. ಇದನ್ನು ಓದಿ: ಕಿವೀಸ್‍ನಲ್ಲಿ ಟೀಂ ಇಂಡಿಯಾಗೆ ಅಗ್ನಿ ಪರೀಕ್ಷೆ
Advertisement
ಆಸೀಸ್ ವಿರುದ್ಧದ ಟೂರ್ನಿಯನ್ನ ಯಶಸ್ವಿಯಾಗಿ ಪೂರ್ಣಗೊಳಿಸಿರುವ ವಿರಾಟ್ ಕೊಹ್ಲಿ, ಕಳೆದ ಮೂರು ಪಂದ್ಯಗಳಲ್ಲಿ 41 ಸರಾಸರಿಯಲ್ಲಿ 153 ರನ್ ಸಿಡಿಸಿದ್ದಾರೆ. ಈ ಹಿಂದಿನ ನ್ಯೂಜಿಲೆಂಡ್ ವಿರುದ್ಧದ 5 ಏಕದಿನ ಪಂದ್ಯಗಳಲ್ಲಿ 58.20 ಸರಾಸರಿಯಲ್ಲಿ 291 ರನ್ ಗಳಿಸಿದ್ದಾರೆ. ಅಲ್ಲದೇ ಆಸೀಸ್ ವಿರುದ್ಧ ಸರಣಿ ಗೆಲುವಿನ ಓಟವನ್ನ ಮುನ್ನಡೆಸುವ ವಿಶ್ವಾಸದಲ್ಲಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv