ಕೋಲ್ಕತ್ತಾ: ಕ್ರಿಕೆಟ್ ಲೋಕದ ಕಿಂಗ್ ಎಂದೇ ಖ್ಯಾತಿ ಗಳಿಸಿರುವ ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಸದ್ಯ ನಿನ್ನೆಯಿಂದ (ನ.5) ಸುದ್ದಿಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಈಡನ್ ಗಾರ್ಡನ್ ಮೈದಾನದಲ್ಲಿ ಶತಕ ಸಿಡಿಸುವ ಜೊತೆಗೆ ಸಚಿನ್ ತೆಂಡೂಲ್ಕರ್ (Sachin Tendulkar) ದಾಖಲೆ ಸರಿಗಟ್ಟಿದ್ದಾರೆ. ಕೊಹ್ಲಿಯ ಈ ಮಹತ್ವದ ಸಾಧನೆಯನ್ನು ದೇಶಾದ್ಯಂತ ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.
We’ve witnessed the entire spectrum, from lows to highs. Happy Birthday Idolo @imVkohli ❤️#HappyBirthdayViratKohli || #HappyBirthdayKingKohli#ವಿರಾಟೋತ್ಸವ೨೦೨೩ pic.twitter.com/SsZ1HTDPod
— Prashant ✨ (@PrashantWarad) November 5, 2023
Advertisement
ಜಾಲತಾಣಗಳಲ್ಲಿ ವಿರಾಟ್ ಕೊಹ್ಲಿ ಅವರ ಕ್ರಿಕೆಟ್ ವೃತ್ತಿಜೀವನದಿಂದ ಈವರೆಗೆ ಕ್ರಿಕೆಟ್‌ನಲ್ಲಿ ಲೋಕದಲ್ಲಿ ಮಾಡಿದ ಸಾಧನೆಗಳ ವಿಶೇಷ ವೀಡಿಯೋ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ. #ವಿರಾಟೋತ್ಸವ2023 ಟ್ರೆಂಡ್ ಅಲೆಯೂ ಧೂಳೆಬ್ಬಿಸಿದೆ. ಇದನ್ನೂ ಓದಿ: ಕಾಲಿಗೆ ಬೀಳಬೇಡಪ್ಪ..: ಪಾದ ಮುಟ್ಟಲು ಬಂದ ಯುವ ಅಭಿಮಾನಿಗೆ ಕೊಹ್ಲಿ ಪ್ರೀತಿಯ ಮಾತು: Viral Video
Advertisement
KING ???? #ವಿರಾಟೋತ್ಸವ೨೦೨೩
— Chèrrybòy ???? (@Cherryboy_1711) November 5, 2023
Advertisement
2021ರ ಐಪಿಎಲ್ ಸಂದರ್ಭದಲ್ಲಿ ಕೊಹ್ಲಿ ಸಂಪೂರ್ಣ ಫಾರ್ಮ್ ಕಳೆದುಕೊಂಡಿದ್ದರು. ಸುಮಾರು 2 ವರ್ಷಗಳ ಕಾಲ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ಅಭಿಮಾನಿಗಳಿಂದಲೂ ಟೀಕೆಗೆ ಗುರಿಯಾಗಿದ್ದರು. ಈ ವೇಳೆ ಕ್ರಿಕೆಟ್ ಲೋಕದಿಂದಲೇ ದೂರ ಉಳಿಯುತ್ತಾರೆ, ನಿವೃತ್ತಿ ಘೋಷಿಸುವುದು ಸರಿ ಎಂದು ಹೇಳಲಾಗಿತ್ತು. ಇನ್ನೂ ಕೆಲವರು ಸ್ವಲ್ಪ ಬ್ರೇಕ್ ತಗೊಳ್ಳಿ ಎಂದು ಟ್ರೋಲ್ ಮಾಡಿದ್ದರು. ಆದ್ರೆ 2022ರ ಟಿ20 ಏಷ್ಯಾಕಪ್ ಟೂರ್ನಿಯ ಮೂಲಕ ಮತ್ತೆ ಕೊಹ್ಲಿ ಭರ್ಜರಿ ಕಮ್ಯಾಂಬ್ ಮಾಡಿದ್ರು. ಇಂದು ದೇಶದ ಅಭಿಮಾನಿಗಳು ಮಾತ್ರವಲ್ಲದೇ ವಿವಿಧ ದೇಶಗಳ ಹಿರಿಯ ಕ್ರಿಕೆಟಿಗರು ಕೊಹ್ಲಿಯ ಗುಣಗಾನ ಮಾಡುತ್ತಿದ್ದಾರೆ. #ವಿರಾಟೋತ್ಸವ2023 ಹ್ಯಾಟ್‌ಟ್ಯಾಗ್‌ನೊಂದಿಗೆ ಟ್ರೆಂಡ್ ಕ್ರಿಯೇಟ್ ಮಾಡಿದ್ದು, ಕೊಹ್ಲಿಯ ಕ್ರಿಕೆಟ್ ವೃತ್ತಿಜೀವನವನ್ನೇ ಜಾಲತಾಣದಲ್ಲಿ ಅನಾವರಣಗೊಳಿಸಿದ್ದಾರೆ.
Advertisement
THE Greatest knock Ever played by a Greatest Batsman????
Use Headphones ????#HappyBirthdayKingKohli#ವಿರಾಟೋತ್ಸವ೨೦೨೩ @imVkohli pic.twitter.com/osFjtaFFJc
— ಹೆಸರಲ್ಲೇನಿದೆ ಬಿಡಿ (@Naneyidupakka) November 5, 2023
ದಕ್ಷಿಣ ಆಫ್ರಿಕಾ ವಿರುದ್ಧ ಭಾನುವಾರ ಕೊಹ್ಲಿ ಶತಕ ಸಿಡಿಸುತ್ತಿದ್ದಂತೆ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳು ಎದ್ದು ನಿಂತು ತಮ್ಮ ಮೊಬೈಲ್ ಟಾರ್ಚ್ ಆನ್ ಮಾಡಿ ಗೌರವ ಸೂಚಿಸಿದರು. ಕೊಹ್ಲಿಯೂ ಸಹ ಪೋಸ್ಟ್ ಪ್ರೆಸೆಂಟೇಷನ್‌ನಲ್ಲಿ ತಮ್ಮನ್ನು ಹುರಿದುಂಬಿಸಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದರು. ಇದನ್ನೂ ಓದಿ: ಕೊಹ್ಲಿ 49ನೇ ಶತಕವನ್ನು ಚಪ್ಪಾಳೆಯೊಂದಿಗೆ ಸಂಭ್ರಮಿಸಿದ ರೋಹಿತ್ ಶರ್ಮಾ ಪತ್ನಿ ರಿತಿಕಾ
ಕೊಹ್ಲಿ ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸುವ ಮೂಲಕ ಫ್ಯಾನ್ಸ್ಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. 2018ರ ಆಗಸ್ಟ್ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ.
The man,The myth,The legend#HappyBirthdayKingKohli #ವಿರಾಟೋತ್ಸವ೨೦೨೩ pic.twitter.com/2qQXS1fpDo
— Smiling Assassin???? (@ChanduGowdru07) November 5, 2023
ಇದೀಗ ಏಕದಿನ ಕ್ರಿಕೆಟ್‌ನಲ್ಲಿ 277 ಇನ್ನಿಂಗ್ಸ್‌ನಲ್ಲಿ 49 ಶತಕ ಸಿಡಿಸಿದ ಕೊಹ್ಲಿಯೇ ನಂ.1 ಶತಕ ವೀರನಾಗಿದ್ದು, 452 ಇನ್ನಿಂಗ್ಸ್‌ಲ್ಲಿ ಈ ಸಾಧನೆ ಮಾಡಿದ ಸಚಿನ್ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. 251 ಇನ್ನಿಂಗ್ಸ್‌ನಲ್ಲಿ 31 ಶತಕ ಬಾರಿಸಿರುವ ರೋಹಿತ್ ಶರ್ಮಾ, 365 ಇನ್ನಿಂಗ್ಸ್‌ನಲ್ಲಿ 30 ಶತಕ ಬಾರಿಸಿರುವ ಆಸ್ಟ್ರೇಲಿಯಾದ ರಿಕಿ ಪಾಟಿಂಗ್, 433 ಇನ್ನಿಂಗ್ಸ್‌ನಲ್ಲಿ 28 ಶತಕ ಬಾರಿಸಿರುವ ಶ್ರೀಲಂಕಾದ ಸನತ್ ಜಯಸೂರ್ಯ ಕ್ರಮವಾಗಿ 3, 4 ಮತ್ತು 5ನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ನಮ್ಮ ಕ್ರಿಕೆಟ್ ತಂಡ ಮತ್ತೊಮ್ಮೆ ವಿಜಯಶಾಲಿಯಾಗಿದೆ: ಭಾರತದ ಗೆಲುವಿಗೆ ಮೋದಿ ಅಭಿನಂದನೆ
ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ವೃತ್ತಿ ಜೀವನದಲ್ಲಿ 79 ಶತಕಗಳನ್ನ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 49 ಶತಕ ಸಿಡಿಸಿದ್ದಾರೆ. ಸಚಿನ್ ದಾಖಲೆ ಮುರಿಯಲು ಇನ್ನು ಒಂದೇ ಒಂದು ಶತಕವಷ್ಟೇ ಬಾಕಿಯಿದೆ ಎಂಬುದು ವಿಶೇಷ.