ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಪುತ್ರಿ ಮೇಲೆ ಆನ್‍ಲೈನ್‍ಲ್ಲಿ ಬಂದಿರುವ ಅತ್ಯಾಚಾರದ ಬೆದರಿಕೆಗಳ ಕುರಿತು ದೆಹಲಿ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.
Advertisement
ದುಬೈನಲ್ಲಿ ನಡೆದ ಟಿ20 ವಿಶ್ವಕಪ್‍ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ವಿರಾಟ್ ಕೊಹ್ಲಿ ಮಗಳ ವಿರುದ್ಧ ದ್ವೇಷಪೂರಿತ ಕಾಮೆಂಟ್‍ಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಈ ಪಂದ್ಯದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದರು. ಈ ಬಗ್ಗೆ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ ಶಮಿ ಪರವಾಗಿ ನಿಂತಿದ್ದರು. ಇದನ್ನೂ ಓದಿ: ಗೂಗಲ್ ಸರ್ಚ್‍ನಲ್ಲಿ ಸಿಕ್ಕ ಫ್ಲಿಪ್ಕಾರ್ಟ್ ನಂಬರ್ – ಕರೆ ಮಾಡಿ 2 ಲಕ್ಷ ಕಳ್ಕೊಂಡ
Advertisement
Advertisement
ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿದ್ದರು. ಶಮಿ ವಿರುದ್ದದ ಕೋಮು ನಿಂದನೆಯನ್ನು ಖಂಡಿಸಿದ ಕೊಹ್ಲಿ, ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ
Advertisement
ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವ ಬಾಂದವ್ಯವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಖಾರವಾಗಿ ಹೇಳಿದ್ದರು. ಇದನ್ನೂ ಓದಿ: ಪಂಜಾಬ್ ಲೋಕ್ ಕಾಂಗ್ರೆಸ್ -ಅಮರಿಂದರ್ ಸಿಂಗ್ ಹೊಸ ಪಕ್ಷ
ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ವಿಕೃತರು ಟೀಮ್ ಇಂಡಿಯಾ ನಾಯಕನ ವಿರುದ್ದ ತಿರುಗಿದ್ದಾರೆ. ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕೊಹ್ಲಿಯ 9 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸೆಗುವುದಾಗಿ ಬೆದರಿಕೆಗಳ ಕಮೆಂಟ್ ಮಾಡುತ್ತಿದ್ದಾರೆ. ಈ ಕಮೆಂಟ್‍ಗಳು ಈಗ ವೈರಲ್ ಆಗುತ್ತಿದ್ದು, ಪಾಕ್ ಆಟಗಾರ ಮೊಹಮ್ಮದ್ ಅಮೀರ್ ಸೇರಿದಂತೆ ಅನೇಕರು ಇಂತಹ ನೀಚ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಪ್ಪು ಕೊನೆ ಕ್ಷಣದ ವಿಡಿಯೋ ಲಭ್ಯ
ವಿರಾಟ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ ಏಕೆಂದರೆ ಯಾರೂ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ. ತಂಡವನ್ನು ರಕ್ಷಿಸಿ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.