ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (BS Lingadevaru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಮಾರ್ಚ್ 19ರಂದು ಆಸ್ಟ್ರೇಲಿಯಾದ (Australia) ಸಿಡ್ನಿಯಲ್ಲಿ(Sydney) ಪ್ರದರ್ಶನ ಕಾಣುತ್ತಿದೆ. ಅಂದು ಮಧ್ಯಾಹ್ನ 3.30ಕ್ಕೆ ಇವೆಂಟ್ ಸಿನಿಮಾಸ್ ಲೈವರ್ ಪೋಲ್ ಆಸ್ಟ್ರೇಲಿಯಾದಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿರುವುದಾಗಿ ಬಿ.ಎಸ್.ಲಿಂಗದೇವರು ತಿಳಿಸಿದ್ದಾರೆ.
Advertisement
ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಇದನ್ನೂ ಓದಿ: 800 ವರ್ಷದ ಹಳೆಯ ಮನೆಯಲ್ಲಿ ಶುಭಾ ಪೂಂಜಾ ದಿಢೀರ್ ಮದುವೆ
Advertisement
Advertisement
ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.
Advertisement
ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k