ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (B.S. Lingadevaru) ನಿರ್ದೇಶನದ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಮಾರ್ಚ್ 23 ರಿಂದ ನಡೆಯುವ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಏಷಿಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾಗಿದೆ. ಏಷಿಯನ್ ಸ್ಪರ್ಧೆಯಲ್ಲಿ ಇರಾನ್, ಇಸ್ರೆಲ್, ಜಪಾನ್, ಶ್ರೀಲಂಕಾ, ಬಾಂಗ್ಲಾದೇಶ, ಮರಾಠಿ ಸೇರಿದಂತೆ 14 ಸಿನಿಮಾಗಳನ್ನು ಆಯ್ಕೆ ಮಾಡಲಾಗಿದ್ದು, ಈ ಹದಿನಾಲ್ಕು ಸಿನಿಮಾಗಳಲ್ಲಿ ವಿರಾಟಪುರ ವಿರಾಗಿ ಸಿನಿಮಾ ಕೂಡ ಒಂದು. ಚಿತ್ರೋತ್ಸವದಲ್ಲಿ ಇದೊಂದು ಮಹತ್ವದ ವಿಭಾಗ ಆಗಿರುವುದು ವಿಶೇಷ.
Advertisement
ಹಾನಗಲ್ಲ ಕುಮಾರಸ್ವಾಮಿಗಳ (Hanagal Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಇದನ್ನೂ ಓದಿ: ಜಿನಿವಾದಲ್ಲಿ ನಾಳೆ ‘ಕಾಂತಾರ’ ಸಿನಿಮಾ ಪ್ರದರ್ಶನ : ರಿಷಬ್ ಶೆಟ್ಟಿ ಭಾಗಿ
Advertisement
Advertisement
ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.
Advertisement
ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.