ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು (BS Lingadevaru) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ವಿರಾಟಪುರ ವಿರಾಗಿ’ (Viratpur Viragi) ಸಿನಿಮಾ ಆಗಸ್ಟ್ 20ರಂದು ಸಿಂಗಾಪುರದ ಕನ್ನಡ ಸಂಘ ಆಯೋಜನೆ ಮಾಡಿರುವ ‘ವಚನಾಂಜಲಿ 2023’ರ ಕಾರ್ಯಕ್ರಮದಲ್ಲಿ ಪ್ರದರ್ಶನ ಕಾಣಲಿದೆ. ಈ ಕಾರ್ಯಕ್ರಮದಲ್ಲಿ ನಿರ್ದೇಶಕ ಬಿ.ಎಸ್.ಲಿಂಗದೇವರು ಮತ್ತು ನಾಯಕ ನಟ ಸುಚೇಂದ್ರ ಪ್ರಸಾದ್ (Suchendra Prasad) ಅವರು ಭಾಗಿಯಾಗಲಿದ್ದಾರೆ.
Advertisement
ಆಗಸ್ಟ್ 20ರಂದು ಸಿಂಗಾಪುರದ (Singapore) ಸಿವಿಲ್ ಸರ್ವೀಸ್ ಕ್ಲಬ್ ನಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 9 ಗಂಟೆಯೊಳಗೆ ಈ ಕಾರ್ಯಕ್ರಮವನ್ನು ಸಿಂಗಪುರದ ಕನ್ನಡ ಸಂಘ ಆಯೋಜನೆ ಮಾಡಿದೆ. ಈ ಹಿಂದೆ ವಿರಾಟಪುರ ವಿರಾಗಿ ಸಿನಿಮಾ ಆಸ್ಟ್ರೇಲಿಯಾದ (Australia) ಸಿಡ್ನಿಯಲ್ಲಿ(Sydney) ಪ್ರದರ್ಶನ ಕಂಡಿತ್ತು. ಇವೆಂಟ್ ಸಿನಿಮಾಸ್ ಲೈವರ್ ಪೋಲ್ ಆಸ್ಟ್ರೇಲಿಯಾದಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನೂ ಓದಿ:‘ಬಾಹುಬಲಿ’ ಪ್ರಭಾಸ್- ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್
Advertisement
Advertisement
ಹಾನಗಲ್ಲ (Hanagalla) ಕುಮಾರಸ್ವಾಮಿಗಳ (Kumaraswamy) ಜೀವನವನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಭಾರೀ ಬಜೆಟ್ ಸಿನಿಮಾಗಳೇ ಸೋಲಿನ ಹಾದಿ ಹಿಡಿದಿರುವ ಸಂದರ್ಭದಲ್ಲಿ ವಿರಾಟಪುರ ವಿರಾಗಿ ಸಿನಿಮಾ ಭಾರೀ ಯಶಸ್ಸು ಕಂಡಿದೆ. ಸತತ ಮೂವತ್ತೈದು ದಿನಗಳಿಂದ ಹಲವು ಕಡೆ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕಲಬುರಗಿ ನಗರವೊಂದರಲ್ಲೇ ನೂರು ಪ್ರದರ್ಶನಗಳನ್ನು ಕಂಡು ದಾಖಲೆ ಬರೆದಿದೆ. ಕರ್ನಾಟಕದಾದ್ಯಂತ ಈವರೆಗೂ ಮೂರು ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ.
Advertisement
ಸಿನಿಮಾ ಬಿಡುಗಡೆಗೆ ಮುನ್ನವೇ 75 ಸಾವಿರಕ್ಕೂ ಅಧಿಕ ಟಿಕೆಟ್ ಮಾರಾಟವಾಗಿ ಹೊಸ ದಾಖಲೆ ಬರೆದಿದ್ದ ಈ ಸಿನಿಮಾ ಈವರೆಗೂ 750ಕ್ಕೂ ಹೆಚ್ಚು ಶೋಗಳು ಹೌಸ್ ಫುಲ್ ಆಗಿವೆ. 62ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದೆ. ಕಲಬುರಗಿಯಲ್ಲೇ 82 ಶೋಗಳು ಹೌಸ್ ಫುಲ್ ಪ್ರದರ್ಶನ ಕಂಡಿದೆ. ಈ ವರ್ಷದಲ್ಲಿ ಹೆಚ್ಚು ಸದ್ದು ಮಾಡಿದ ಸಿನಿಮಾಗಳ ಪಟ್ಟಿಯಲ್ಲಿ ಈ ಚಿತ್ರ ಕೂಡ ಕಾಣಿಸಿಕೊಂಡಿದೆ.
ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಕೂಡ ಕೇಳುಗರ ಗಮನ ಸೆಳೆದಿದ್ದು, ಈ ಸಿನಿಮಾವನ್ನು ಜನರಿಗೆ ತಲುಪಿಸುವುದಕ್ಕಾಗಿಯೇ ಹಾನಗಲ್ಲ ಕುಮಾರಸ್ವಾಮಿಗಳ ಭಕ್ತರು ರಥಯಾತ್ರೆ ಮತ್ತು ಗದಗ ಸೇರಿದಂತೆ ಹಲವು ಕಡೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದರು. ರಾಜ್ಯಾದ್ಯಂತ ರಥೆಯಾತ್ರೆ ಪ್ರವಾಸ ಮಾಡಿ, ಸಿನಿಮಾ ಮುಟ್ಟಿಸುವಲ್ಲಿ ಗೆದ್ದಿದೆ.
Web Stories