ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಟೂರ್ನಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾರನ್ನು ಈ ಹಿಂದಿನ ಟೆಸ್ಟ್ ಸರಣಿಗಳಿಗೆ ಆಯ್ಕೆ ಮಾಡದ ಕುರಿತು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2013 ರಲ್ಲಿ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಟೂರ್ನಿಗೆ ಮೊದಲ ಬಾರಿಗೆ ಆಯ್ಕೆ ಮಾಡಲಾಗಿತ್ತು. ಆದರೆ ಟೆಸ್ಟ್ ಪಂದ್ಯಗಳಲ್ಲಿ ನಿರಂತರ ವೈಫಲ್ಯ ಕಂಡ ಅವರನ್ನು ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಅಲ್ಲದೇ ಇಂಗ್ಲೆಂಡ್ ವಿರುದ್ಧ ನಡೆದ ಅಂತಿಮ ಟೆಸ್ಟ್ ಪಂದ್ಯದಲ್ಲಿ ರೋಹಿತ್‍ಗೆ ಸ್ಥಾನ ನೀಡಿರಲಿಲ್ಲ. ಮುಂದಿನ ಆಸೀಸ್ ಟೂರ್ನಿಗೆ ರೋಹಿತ್ ಆಯ್ಕೆ ಆಗಿದ್ದು, ಭರವಸೆಯ ಪ್ರದರ್ಶನ ನಿರೀಕ್ಷೆ ಮಾಡಲಾಗುತ್ತಿದೆ.
Advertisement
Advertisement
ಈ ಕುರಿತು ಮಾತನಾಡಿರುವ ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ ಟೂರ್ನಿಯಲ್ಲಿ ಒಂದು ಶತಕ ಹಾಗೂ ಅರ್ಧಶತಕ ಗಳಿಸಿದ್ದರು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿರಲಿಲ್ಲ. ಮುಂದಿನ ಇಂಗ್ಲೆಂಡ್ ಸರಣಿಗೂ ಅವರನ್ನು ಪರಿಗಣಿಸಿರಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ತಂಡದ ಎಷ್ಟು ಮಂದಿ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದರು ಎಂದು ಆಯ್ಕೆ ಸಮಿತಿ ಉತ್ತರಿಸಬೇಕಿದೆ ಎಂದು ಪ್ರಶ್ನಿಸಿದ್ದಾರೆ. ಇದನ್ನು ಓದಿ: ಆಸೀಸ್ ಟೂರ್ನಿ- ಟೀಂ ಇಂಡಿಯಾ ಬೆನ್ನಿಗೆ ನಿಂತ ಎಬಿಡಿ
Advertisement
ಏಕದಿನ ಮಾದರಿ ಕ್ರಿಕೆಟ್‍ನಲ್ಲಿ ರೋಹಿತ್ ಶರ್ಮಾ 3 ದ್ವಿಶತಕ ಸಿಡಿಸಿದ್ದಾರೆ. ಇಂತಹ ಆಟಗಾರ ಟೆಸ್ಟ್ ಕ್ರಿಕೆಟ್‍ನಲ್ಲಿ ಸ್ಥಾನ ಪಡೆಯಲಿಲ್ಲ ಎಂದರೆ ಹೇಗೆ? ಏಕದಿನ ಕ್ರಿಕೆಟ್ ಮಾದರಿಯಲ್ಲಿ ರನ್ ಗಳಿಸುವ ಆಟಗಾರರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡದಿರುವ ಉದಾಹರಣೆ ವಿಶ್ವ ಕ್ರಿಕೆಟ್‍ನಲ್ಲಿ ಇಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews