ನವದೆಹಲಿ: ವೀಸಾ ನೀಡಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
Advertisement
ಪಿ. ಚಿದಂಬರಂ ಕೇಂದ್ರ ಗೃಹ ಮಂತ್ರಿಯಾಗಿದ್ದಾಗ 2011ರಲ್ಲಿ 263 ಚೀನಾ ಪ್ರಜೆಗಳಿಗೆ ವೀಸಾ ನೀಡಿದ ಆರೋಪದಲ್ಲಿ ಕಾರ್ತಿ ಚಿದಂಬರಂ ಮತ್ತು ಸಿಎ ಎಸ್.ಭಾಸ್ಕರ್ ರಾಮನ್ ಸೇರಿದಂತೆ ಮತ್ತಿತರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಆ ಬಳಿಕ ಮೇ 30 ರಂದು ಕಾರ್ತಿ ಚಿದಂಬರಂ ನಿರೀಕ್ಷಣಾ ಜಾಮೀನು ಆದೇಶವನ್ನು ದೆಹಲಿಯ ವಿಶೇಷ ನ್ಯಾಯಾಲಯ ಕಾಯ್ದಿರಿಸಿತ್ತು. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ಆಗ್ರಹ
Advertisement
Advertisement
ಈ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ ವಿಶೇಷ ನ್ಯಾಯಾಧೀಶ ಎಂ.ಕೆ ನಾಗಪಾಲ್, ಈ ಅರ್ಜಿಯನ್ನು ಪರಿಗಣಿಸಲು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಕಾರ್ತಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದರು. ಇದನ್ನೂ ಓದಿ: ಉಡುಪಿಯ ಯುಪಿಸಿಎಲ್‍ಗೆ ಹಸಿರುಪೀಠ ಚಾಟಿ – ಅವಾಂತರಕ್ಕೆ 52 ಕೋಟಿ ರೂ. ದಂಡ
Advertisement
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‍ಐಆರ್‌ನ್ನು ಪರಿಗಣಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾರ್ತಿ ನಂ.1 ಆರೋಪಿ ಎಂದು ಪ್ರಕರಣ ದಾಖಲಿಸಿಕೊಂಡಿದೆ.