ರಿಯಾದ್: ವೀಸಾ ನಿಯಮ ಉಲ್ಲಂಘಿಸಿ ಅಕ್ರಮವಾಗಿ ನೆಲೆಸಿದ್ದಕ್ಕೆ ಸೌದಿ ಅರೇಬಿಯಾ 39 ಸಾವಿರ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಿದೆ.
ವೀಸಾ ಉಲ್ಲಂಘಿಸಿದ್ದಕ್ಕೆ ಕಳೆದ ನಾಲ್ಕು ತಿಂಗಳಿನಲ್ಲಿ ಸುಮಾರು 39 ಸಾವಿರ ಪಾಕಿಸ್ತಾನ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ ಎಂದು ಸೌದಿ ಅರೇಬಿಯಾದ ಭದ್ರತಾ ಮೂಲಗಳನ್ನು ಆಧಾರಿಸಿ ‘ಸೌದಿ ಗ್ಯಾಜೆಟ್’ ವರದಿ ಮಾಡಿದೆ.
Advertisement
ಕೆಲ ಪಾಕಿಸ್ತಾನ ಪ್ರಜೆಗಳು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ ಜೊತೆ ತೊಡಗಿದ್ದ ಹಿನ್ನೆಲೆಯಲ್ಲಿ ಅವರ ದಾಖಲೆ ಪರಿಶೀಲಿಸುವಂತೆ ಭದ್ರತಾ ಅಧಿಕಾರಿಗಳು ಆದೇಶಿಸಿದ್ದಾರೆಂದು ಪತ್ರಿಕೆ ತಿಳಿಸಿದೆ. ಕಳ್ಳತನ, ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ, ನಕಲು ಮತ್ತು ಹಲ್ಲೆಯಂತಹ ಪ್ರಕರಣದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಇನ್ನುಳಿದವರನ್ನು ಸ್ವದೇಶಕ್ಕೆ ಕಳುಹಿಸಲಾಗಿದೆ ಎಂದು ಹೇಳಿದೆ.
Advertisement
ಫೆಬ್ರವರ ಮೊದಲ ವಾರದಲ್ಲಿ ಪಾಕಿಸ್ತಾನದ ಪ್ರಜೆಗಳಿಗೆ ವೀಸಾ ನೀಡದೇ ಇರಲು ಕುವೈತ್ ನಿರ್ಧರಿಸಿದೆ. ಪಾಕಿಸ್ತಾನ, ಸಿರಿಯಾ, ಇರಾಕ್, ಆಫ್ಘಾನಿಸ್ಥಾನ ಮತ್ತು ಇರಾನ್ ರಾಷ್ಟ್ರಗಳ ಇಸ್ಲಾಮಿಕ್ ಉಗ್ರಗಾಮಿಗಳ ವಲಸೆ ತಡೆಯಲು ಕುವೈತ್ ವೀಸಾ ನೀಡದೇ ಇರುವ ನಿರ್ಧಾರಕ್ಕೆ ಬಂದಿದೆ ಎನ್ನುವ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. ಆದರೆ ಈ ವರದಿಯನ್ನು ಪಾಕಿಸ್ತಾನ ನಿರಾಕರಿಸಿತ್ತು.