– ಗಾಯಾಳುಗಳಿಗೆ 10 ಲಕ್ಷ ರೂ. ಪರಿಹಾರ ಘೋಷಣೆ
– ಮೃತ ಕುಟುಂಬಕ್ಕೆ ಕೆಲಸ ನೀಡುವ ಭರವಸೆ
ವಿಶಾಖಪಟ್ಟಣ: ಇಲ್ಲಿನ ಉಕ್ಕು ಸ್ಥಾವರದಲ್ಲಿ (RINL) ಭಾರೀ ಪ್ರಮಾಣದ ಕರಗಿದ ಲೋಹ ಹರಿದು ಸಾವನ್ನಪ್ಪಿದ್ದ 8 ಮಂದಿ ಕಾರ್ಮಿಕರ ಕುಟುಂಬಸ್ಥರಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಸೋಮವಾರ (ಜೂ.8) ರಾತ್ರಿ ವಿಶಾಖಪಟ್ಟಣದ (Visakhapatnam) ಉಕ್ಕು ಸ್ಥಾವರದಲ್ಲಿ ಟನ್‌ಗಳಷ್ಟು ಕರಗಿದ ಲೋಹವಿದ್ದ ದೊಡ್ಡ ಗಾತ್ರದ ಬಕೆಟ್ ಉರುಳಿ ಬಿದ್ದಿದೆ. ಇದರಿಂದ ಸ್ಥಾವರದ ಉಕ್ಕಿನ ಕರಗುವ ಕೇಂದ್ರ ಸಂಖ್ಯೆ 1ರಲ್ಲಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದು, ಪರಿಣಾಮ ಕಾರ್ಮಿಕರು ಸಾವನಪ್ಪಿದ್ದಾರೆ. ತಡರಾತ್ರಿ 1:30ರ ಸುಮಾರಿಗೆ ದುರಂತ ಸಂಭವಿಸಿದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಸ್ಥಾವರಕ್ಕೆ ಧಾವಿಸಿದ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ವಿಸ್ತೃತವಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ವಿಶಾಖಪಟ್ಟಣದ ಉಕ್ಕು ಸ್ಥಾವರದಲ್ಲಿ ದುರಂತ – 8 ಮಂದಿ ಸಜೀವ ದಹನ
ದುರಂತ ಸಂಭವಿಸಿದ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಸ್ಥಾವರಕ್ಕೆ (RINL) ಧಾವಿಸಿ ಬಂದು ಅವಘಡ ಸಂಭವಿಸಿದ ಸ್ಥಳವನ್ನು ವಿಸ್ತೃತವಾಗಿ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಮಂಡಳಿಯಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.
ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ₹25 ಲಕ್ಷ ಹಾಗೂ ಗಾಯಾಳುಗಳಿಗೆ ₹10 ಲಕ್ಷ ಪರಿಹಾರ… pic.twitter.com/1CV5H4TWDD
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 8, 2026
ಇದೇ ವೇಳೆ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ 25 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 10 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಅಲ್ಲದೆ, ಮೃತ ಕಾರ್ಮಿಕರ ಪ್ರತಿ ಕುಟುಂಬದ ಅರ್ಹ ಸದಸ್ಯರಿಗೆ ಕಾರ್ಖಾನೆಯಲ್ಲಿ ಉದ್ಯೋಗವನ್ನು ನೀಡಲಾಗುವುದು. ಗಾಯಗೊಂಡವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕಾರ್ಖಾನೆ ಭರಿಸುತ್ತದೆ ಹಾಗೂ ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವನ್ನು ನೀಡಲಾಗುವುದು. ಈ ದುರ್ಘಟನೆಯಿಂದಾಗಿ ನನಗೆ ತೀವ್ರ ಆಘಾತ ಉಂಟಾಗಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸುತ್ತೇನೆ. ಈಗಾಗಲೇ ದುರಂತದ ಕಾರಣವನ್ನು ಪತ್ತೆ ಹಚ್ಚಲು ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈಗಾಗಲೇ ಪ್ರಧಾನ ಮಂತ್ರಿ ಮೋದಿಯವರು ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
Saddened by the mishap at the Visakhapatnam Steel Plant. Condolences to those who have lost their loved ones. Praying that the injured recover at the earliest. The local authorities are providing all possible assistance to those affected.
An ex-gratia of Rs. 2 lakh from PMNRF…
— PMO India (@PMOIndia) June 8, 2026
ಆಗಿದ್ದೇನು?
ಟನ್‌ಗಳಷ್ಟು ಕರಗಿದ ಲೋಹವಿದ್ದ ದೊಡ್ಡ ಗಾತ್ರದ ಬಕೆಟ್ ಉರುಳಿ ಬಿದ್ದಿದೆ. ಕರಗಿದ ಉಕ್ಕು ಕೆಳಗೆ ಬೀಳುವ ಕೆಲವೇ ಕ್ಷಣಗಳ ಮೊದಲು ಸ್ಫೋಟ ಸಂಭವಿಸಿದೆ. ಇದರಿಂದ ಸ್ಥಾವರದ ಉಕ್ಕಿನ ಕರಗುವ ಕೇಂದ್ರ ಸಂಖ್ಯೆ 1 ರಲ್ಲಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ರಕ್ಷಿಸಲ್ಪಟ್ಟ ಕಾರ್ಮಿಕರು ಪೊಲೀಸರಿಗೆ ತಿಳಿಸಿದ್ದಾರೆ.
ಘಟನೆಯಲ್ಲಿ ಹಲವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ. ಕನಿಷ್ಠ ಆರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ವಿಶಾಖಪಟ್ಟಣ ರಾಷ್ಟ್ರೀಯ ಉಕ್ಕು ಸ್ಥಾವರದಲ್ಲಿ (RINL) ಸಂಭವಿಸಿದ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಭೇಟಿಯಾಗಿ ಅವರ ಯೋಗಕ್ಷೇಮ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಲಾಯಿತು. ಗಾಯಾಳು ಕಾರ್ಮಿಕರ ಚಿಕಿತ್ಸೆಯ ವೆಚ್ಚವನ್ನು ಸಂಪೂರ್ಣವಾಗಿ ಕಾರ್ಖಾನೆಯೇ ಭರಿಸಲಿದೆ ಹಾಗೂ ಗಾಯಾಳುಗಳಿಗೆ ₹10… pic.twitter.com/rvyyc1GPEO
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) June 8, 2026
ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಈ ಅವಘಡದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ, ಸಂತ್ರಸ್ತರ ಕುಟುಂಬಗಳಿಗೆ ಸಹಾಯ ಮಾಡುವಂತೆ ನಿರ್ದೇಶಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್‌ಸಿಪಿ ಅಧ್ಯಕ್ಷ ವೈ.ಎಸ್ ಜಗನ್ ಮೋಹನ್ ರೆಡ್ಡಿಯವರು ಕೂಡ ಘಟನೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸಮಗ್ರ ತನಿಖೆಗೆ ಒತ್ತಾಯಿಸಿದ್ದು, ಹೊಣೆಗಾರರಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಎಲ್ಲಾ ಕೈಗಾರಿಕಾ ಸಂಸ್ಥೆಗಳಲ್ಲಿ ಕಾರ್ಮಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಪ್ಪಿಸಲು ಸುರಕ್ಷತಾ ಮಾನದಂಡಗಳು ಮತ್ತು ತಡೆಗಟ್ಟುವ ಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಒತ್ತಿ ಹೇಳಿದರು. ಈ ಘಟನೆಯಲ್ಲಿ ನೊಂದವರ ಪರವಾಗಿ ಬೆಂಬಲಕ್ಕೆ ನಿಲ್ಲುವಂತೆ ಪಕ್ಷದ ನಾಯಕರಿಗೆ ಅವರು ಕರೆ ನೀಡಿದ್ದಾರೆ.
2012ರ ಜೂನ್‌ನಲ್ಲಿ ಸಹ ಉಕ್ಕು ಕರಗಿಸುವ ಘಟಕ ಸಂಖ್ಯೆ 3ರಲ್ಲಿ ಹೊಸದಾದ ಆಮ್ಲಜನಕ ಸ್ಥಾವರ ಸ್ಫೋಟಗೊಂಡು 16 ಕಾರ್ಮಿಕರು ಸಾವನ್ನಪ್ಪಿದ್ದರು. ಅಧಿಕಾರಿಗಳು ಆಮ್ಲಜನಕ ಸ್ಥಾವರದ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದ್ದಾಗ ಸ್ಫೋಟ ಸಂಭವಿಸಿತ್ತು.
