CrimeLatestMain PostNational

ಮದುವೆ ಮನೆಯಲ್ಲೇ ವಧು ನಿಗೂಢ ಸಾವು

ಹೈದರಾಬಾದ್: ಮದುವೆ ಸಮಾರಂಭದ ವೇಳೆ ವಧು ಕುಸಿದು ಬಿದ್ದಿದ್ದು, ನಂತರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.

ವಿಶಾಖಪಟ್ಟಣಂನಲ್ಲಿರುವ ಮಧುರವಾಡದ ಫಂಕ್ಷನ್ ಹಾಲ್‍ನಲ್ಲಿ ಬುಧವಾರ ಸಂಜೆ ಮದುವೆ ಸಮಾರಂಭದ ವಿಧಿ, ವಿಧಾನಗಳು ನಡೆಯುತ್ತಿತ್ತು. ಈ ವೇಳೆ ವಧು ಪ್ರಜ್ಞೆತಪ್ಪಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಕುಟುಂಬಸ್ಥರು ಹಾಗೂ ಸಂಬಂಧಿಕರು ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಧು ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್

ಮೃತ ದುರ್ದೈವಿಯನ್ನು ಸೃಜನಾ ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ವಿಷ ಸೇವಿಸಿ ಸಾವನ್ನಪ್ಪಿರುವಂತೆ ಕಾಣಿಸುತ್ತದೆ. ಆದರೆ ಈ ಸಂಬಂಧ ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದು, ಆಕೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

Leave a Reply

Your email address will not be published.

Back to top button