Connect with us

Cinema

ನಟ ವಿಶಾಲ್ ಮದ್ವೆ ಬ್ರೇಕಪ್ ಬಗ್ಗೆ ತಂದೆ ಸ್ಪಷ್ಟನೆ

Published

on

ಚೆನ್ನೈ: ತಮಿಳು ನಟ ವಿಶಾಲ್ ಹಾಗೂ ತೆಲುಗಿನ `ಅರ್ಜುನ್ ರೆಡ್ಡಿ’ ಖ್ಯಾತಿಯ ಅನಿಶಾ ಅಲ್ಲ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ದಕ್ಷಿಣ ಚಿತ್ರರಂಗದಲ್ಲಿ ಹರಿದಾಡುತ್ತಿತ್ತು. ಆದರೆ ಇದೀಗ ಈ ಬಗ್ಗೆ ಸ್ವತಃ ವಿಶಾಲ್ ತಂದೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ವಿಶಾಲ್ ತಂದೆ, “ನನ್ನ ಮಗನ ನಿಶ್ಚಿತಾರ್ಥ ಮುರಿದು ಬಿದ್ದಿಲ್ಲ. ಸದ್ಯದಲ್ಲೇ ಮದುವೆ ದಿನಾಂಕ ನಿಗದಿ ಪಡಿಸುತ್ತೇವೆ. ನಾವು ನಾಡಿಗರ್ ಸಂಘದ ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಇದು ಕೋರ್ಟಿನಲ್ಲಿರುವ ಕಾರಣ ಮದುವೆ ತಡವಾಗುವ ಸಾಧ್ಯತೆ ಇದೆ. ಜೊತೆಗೆ ನಾಡಿಗರ್ ಸಂಘದ ಬಿಲ್ಡಿಂಗ್ ಕೆಲಸ ಕೂಡ ನಡೆಯುತ್ತಿದೆ. ಈ ಎಲ್ಲಾ ಕೆಲಸಗಳು ಮುಗಿದ ಬಳಿಕ ವಿಶಾಲ್ ಮದುವೆ ದಿನಾಂಕ ನಿಗದಿ ಮಾಡುಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಹಿಂದೆ ವಿಶಾಲ್ ಹಾಗೂ ಅನಿಶಾ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದರ ಮೂಲಕ ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದರು. ಬಳಿಕ ಅನಿಶಾ ನಟ ವಿಶಾಲ್ ಜೊತೆಗಿರುವ ಫೋಟೋಗಳನ್ನು ಡಿಲೀಟ್ ಮಾಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಇವರ ಮದುವೆ ಕ್ಯಾನ್ಸಲ್ ಆಗಿದೆ ಎಂದು ಮಾತನಾಡಿಕೊಳ್ಳುತ್ತಿದ್ದರು. ಹೀಗೆ ಈ ಸುದ್ದಿ ದಕ್ಷಿಣ ಚಿತ್ರರಂಗದಲ್ಲಿ ಹರಿದಾಡಲು ಶುರು ಮಾಡಿತ್ತು.

ವಿಶಾಲ್ ಹಾಗೂ ಅನಿಶಾ ಪರಸ್ಪರ ಪ್ರೀತಿಸಿ ಮನೆಯವರ ಒಪ್ಪಿಗೆ ಮೆರಿಗೆ ಮಾರ್ಚ್ ತಿಂಗಳಿನಲ್ಲಿ ಹೈದರಾಬಾದ್‍ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಅಲ್ಲದೆ ಆಗಸ್ಟ್ ತಿಂಗಳಿನಲ್ಲಿ ಚೆನ್ನೈನ ನದಿಗರ್ ಸಂಗಮ್‍ನಲ್ಲಿ ಮದುವೆ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಷ್ಟರಲ್ಲೇ ಇಬ್ಬರ ಮದುವೆ ಮುರಿದು ಬಿದ್ದಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಗಾಸಿಪ್‍ಗಳ ಬಗ್ಗೆ ವಿಶಾಲ್ ಎಲ್ಲಿಯೂ ಮಾತನಾಡಿರಲಿಲ್ಲ. ಈಗ ಅವರ ತಂದೆ ಜಿ.ಕೆ ರೆಡ್ಡಿ ಮೊದಲ ಬಾರಿಗೆ ಮಾತನಾಡಿ ನಿಶ್ಚಿತಾರ್ಥ ಮುರಿದು ಬಿದ್ದಿದೆ ಎನ್ನುವ ಸುದ್ದಿಯನ್ನು ತಳ್ಳಿ ಹಾಕಿದ್ದಾರೆ.