– ಮತ್ತೊಮ್ಮೆ ಹೃದಯ ವೈಶಾಲ್ಯತೆ ಮೆರೆದ ತಮಿಳು ನಟ
ಹೈದರಾಬಾದ್: ಗ್ರೀನ್ ಇಂಡಿಯಾ ಚಾಲೆಂಜ್ನಲ್ಲಿ ತಾನು ನೆಟ್ಟ ಗಿಡಕ್ಕೆ ತನ್ನ ಗೆಳೆಯ ಸ್ಯಾಂಡಲ್ವುಡ್ನ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಹೆಸರನ್ನಿಟ್ಟು ತಮಿಳು ನಟ ವಿಶಾಲ್ ಮತ್ತೊಮ್ಮೆ ಕನ್ನಡಿಗರ ಮನಗೆದ್ದಿದ್ದಾರೆ.
Advertisement
ಪುನೀತ್ ರಾಜ್ ಕುಮಾರ್ ಅವರು ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎದ್ದಿತ್ತು. ಈ ವೇಳೆ ವಿಶಾಲ್ ಅಷ್ಟು ಮಕ್ಕಳ ಜವಾಬ್ದಾರಿಯನ್ನು ತಾವು ಹೊತ್ತುಕೊಳ್ಳುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ಪುನೀತ್ ಸಾವಿಗೂ 46 ಸಂಖ್ಯೆಗೂ ಸಂಬಂಧವೇನು?
Advertisement
Advertisement
ಇದೀಗ ವಿಶಾಲ್ ಹೈದರಾಬಾದ್ನಲ್ಲಿ ನಡೆದ ಗ್ರೀನ್ ಇಂಡಿಯಾ ಚಾಲೆಂಚ್ನಲ್ಲಿ ತಾನು ನೆಟ್ಟ ಗಿಡಕ್ಕೆ ತನ್ನ ಗೆಳೆಯ ಪುನೀತ್ ರಾಜ್ಕುಮಾರ್ ಅವರ ಹೆಸರನ್ನಿಟ್ಟು ಮತ್ತೊಮ್ಮೆ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್
Advertisement
ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪುನೀತ್ ಒಳ್ಳೆಯ ನಟ ಮಾತ್ರ ಅಲ್ಲ, ಒಳ್ಳೆಯ ಸ್ನೇಹಿತ, ಒಳ್ಳೆಯ ವ್ಯಕ್ತಿ. ಇಂದು ನಮ್ಮ ನಡುವೆ ಅವರಿಲ್ಲ ಅನ್ನೋದನ್ನು ಇನ್ನೂ ಊಹಿಸಿಕೊಳ್ಳಲು ಆಗುತ್ತಿಲ್ಲ. ಅವರ ಅಗಲಿಕೆಯನ್ನು ಜೀರ್ಣಿಸಿಕೊಳ್ಳಲು ಆಗಿಲ್ಲ. ಅವರ ಸಾವು ಚಿತ್ರರಂಗಕ್ಕಷ್ಟೇ ಅಲ್ಲ ಸಮಾಜಕ್ಕೆ, ಕುಟುಂಬಕ್ಕೆ ಹಾಗೂ ಅವರ ಜೊತೆ ಇದ್ದವರಿಗೆ ದೊಡ್ಡ ನಷ್ಟ ಎಂದಿದ್ದರು. ಇದನ್ನೂ ಓದಿ: ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ
ಪುನೀತ್ 1,800 ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥಶ್ರಮ, ವೃದ್ಧಾಶ್ರಮ ನಡೆಸುವುದರ ಜೊತೆಗೆ ತಮ್ಮ ಸಾವಿನ ಬಳಿಕವೂ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದನ್ನೆಲ್ಲ ನೆನಪಿಸಿಕೊಳ್ಳುವಾಗ, ಪುನೀತ್ ಇಲ್ಲ ಅನ್ನೋದನ್ನು ನಂಬಲು ಆಗುತ್ತಿಲ್ಲ. ಪುನೀತ್ ಅಂತಹ ಬಹುಮುಖ ನಟನನ್ನು ನಾವು ಕಳೆದುಕೊಂಡಿದ್ದೇವೆ. ಪುನೀತ್ನನ್ನು ನೋಡಿದಾಗ, ಪುನೀತ್ನನ್ನು ನೆನಪಿಸಿಕೊಂಡಾಗ ನನ್ನ ಮನಸ್ಸಿಗೆ ಒಂದು ವಿಷಯ ಬಂತು. ನಿಮ್ಮ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ. ಮುಂದಿನ ವರ್ಷದಿಂದ ನಿಮ್ಮ ಫೌಂಡೇಷನ್, ನಿಮ್ಮ ಸಮಾಜಸೇವೆಯನ್ನು ನಾನು ಮುಂದುವರೆಸುತ್ತೇನೆ ಅಂತ ಭರವಸೆ ನೀಡಿದ್ದರು.