ಉಡುಪಿ: ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ವರದಿಯಾದ ವಿಶಾಲ ಗಾಣಿಗ ಕೊಲೆ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗೆ ನಗದು ಪುರಸ್ಕಾರವನ್ನು ನೀಡಿ ಅಭಿನಂದಿಸಲಾಯಿತು.
ಪ್ರಕರಣವನ್ನು ಭೇದಿಸಿದ ಅಧಿಕಾರಿ, ಸಿಬ್ಬಂದಿ ತಂಡಕ್ಕೆ ರಾಜ್ಯದ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು 50 ಸಾವಿರ ನಗದು ಪುರಸ್ಕಾರ ಘೋಷಿಸಿದ್ದರು. ಅದರಂತೆ ಇಂದು ಪಶ್ಚಿಮ ವಲಯದ ಐಜಿಪಿ ದೇವಜ್ಯೋತಿ ರೇ ತಂಡದ ಸದಸ್ಯರಿಗೆ ನಗದು ಪುರಸ್ಕಾರ ನೀಡಲಾಯಿತು.
Advertisement
Advertisement
ಎಸ್‍ಪಿ ವಿಷ್ಣುವರ್ಧನ್, ಎಎಸ್‍ಪಿ ಕುಮಾರ ಚಂದ್ರ, ಡಿವೈಎಸ್‍ಪಿ ಸುಧಾಕರ ನಾಯಕ್, ಬ್ರಹ್ಮಾವರ ಸಿಪಿಐ ಅನಂತ ಪದ್ಮನಾಭ, ಮಣಿಪಾಲ ಪಿಐ ಮಂಜುನಾಥ ಗೌಡ, ಮಲ್ಪೆ ಸಿಪಿಐ ಶರಣ್ ಗೌಡ, ಕಾರ್ಕಳ ಸಿಪಿಐ ಸಂಪತ್ ಕುಮಾರ್, ಪಿಎಸ್‍ಐ ಗಳಾದ ರಾಜಶೇಖರ ವಂದಲಿ, ಗುರುನಾಥ ಹಾದಿಮನಿ, ಮಧು, ಶ್ರೀಧರ ನಾಯಕ್, ರಾಘವೇಂದ್ರ, ಸಿ.ಡಿ.ಅರ್ ವಿಭಾಗದ ಸಿಬ್ಬಂದಿ ಶಿವಾನಂದ, ದಿನೇಶ್, ನಿತಿನ್ ಅವರನ್ನು ಅಭಿನಂದಿಸಲಾಯಿತು. ಇದನ್ನೂ ಓದಿ: ಯತ್ನಾಳ್, ಬೆಲ್ಲದ್‍ಗೆ ಅಭಿನಂದನೆ ಸಲ್ಲಿಸಿದ ಜಯಮೃತ್ಯುಂಜಯ ಸ್ವಾಮೀಜಿ
Advertisement
Advertisement
ಏನಿದು ಪ್ರಕರಣ?
ಜುಲೈ 12ರಂದು ವಿಶಾಲ ಗಾಣಿಗ ಅವರನ್ನು ಉಪ್ಪಿನಕೋಟೆಯ ಮಿಲನ್ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ವಾಸವಿದ್ದ ಫ್ಲ್ಯಾಟ್‍ನಲ್ಲಿಯೇ ಸುಪಾರಿ ಕಿಲ್ಲರ್ ಗಳು ಹತ್ಯೆ ಮಾಡಿದ್ದರು. ಪ್ರಕರಣದ ಆರೋಪಿಗಳು ತುಂಬಾ ಚಾಕಚತ್ಯೆಯನ್ನು ಉಪಯೋಗಿಸಿ ಕೊಲೆ ಮಾಡಿದ್ದರಿಂದ ಪ್ರಕರಣವನ್ನು ಭೇದಿಸುವುದು ಕ್ಲಿಷ್ಟಕರವಾಗಿತ್ತು. ಘಟನೆ ಸಾರ್ವಜನಿಕರ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಇದನ್ನೂ ಓದಿ: ಕೊರೊನಾಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಕ್ಕೂ ಪರಿಹಾರ -ಕೇಂದ್ರ ಸರ್ಕಾರ
ಉಡುಪಿ ಜಿಲ್ಲಾ ಎಸ್.ಪಿ ವಿಷ್ಣುವರ್ಧನ್ ಪ್ರಕರಣದ ತನಿಖೆಗೆ ನಾಲ್ಕು ತಂಡ ರಚಿಸಿದ್ದರು. ತನಿಖಾ ತಂಡದ ಸದಸ್ಯರು ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ಸ್ವಾಮಿನಾಥನ್ ನಿಶಾದ್ ನನ್ನು ಬಂಧಿಸಿದ ನಂತರ ವಿಶಾಲ ಗಾಣಿಗ ಅವರ ಪತಿ ರಾಮಕೃಷ್ಣ ಗಾಣಿಗ ಅವರೇ ಈ ಕೊಲೆ ಮಾಡಲು ಸುಪಾರಿ ನೀಡಿದ್ದರೆಂದು ತಿಳಿದು ಬಂತು.