ವಿಷ್ಣು ಪುಣ್ಯಭೂಮಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಒತ್ತಾಯ

Public TV
1 Min Read
vishnuvardhan 2

ನ್ನಡದ ಅಭಿಜಾತ ಕಲಾವಿದ ಡಾ. ವಿಷ್ಣುವರ್ಧನ್ (Vishnuvardhan) ಅವರ ಅಂತ್ಯ ಸಂಸ್ಕಾರಗೊಂಡ ಸ್ಥಳ ಪುಣ್ಯಭೂಮಿ (Punyabhoomi) ಆಗಬೇಕೆಂಬ ವಿಷ್ಣು ಅಭಿಮಾನಿಗಳ ಬೇಡಿಕೆ ಕನ್ನಡಿಗರ ಅಪೇಕ್ಷೆಯ ಸಂಕೇತವಾಗಿದೆ. ಸರ್ಕಾರ ಸಕಾರತ್ಮಕವಾಗಿ ಮನಸ್ಸು ಮಾಡಿದರೆ ಈ ಬೇಡಿಕೆ ಈಡೇರಿಸುವುದು ದೊಡ್ಡ ವಿಷಯವೇನಲ್ಲ. ಈ ನಿಟ್ಟಿನಲ್ಲಿ ಕೂಡಲೇ ಗಮನ ಹರಿಸುವಂತೆ ಒತ್ತಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಒತ್ತಾಯ ಮಾಡಿದ್ದಾರೆ.

vishnuvardhan 1

ಬಿಜೆಪಿ ಸರ್ಕಾರದ ಅವಧಿಯಲ್ಲಿ 5 ಎಕರೆ ಜಾಗದಲ್ಲಿ 11 ಕೋಟಿ ವೆಚ್ಚದಲ್ಲಿ ವಿಷ್ಣುವರ್ಧನ್ ಅವರ ಇತಿಹಾಸ ಸಾರುವ ಸ್ಮಾರಕ ಲೋಕಾರ್ಪಣೆಗೊಳಿಸಿದ್ದನ್ನು (ಕಳೆದ ವರ್ಷ) ಈ ಸಂದರ್ಭದಲ್ಲಿ ಗೌರವ ಪೂರ್ವಕವಾಗಿ ಸ್ಮರಿಸಿರುವ ವಿಜಯೇಂದ್ರ, ಕೂಡಲೇ ಸರಕಾರ ಮಧ್ಯ ಪ್ರವೇಶಿಸಿ ಪುಣ್ಯಭೂಮಿಯ ಜಾಗವನ್ನು ಅಭಿಮಾನಿಗಳಿಗೆ ಹಸ್ತಾಂತರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

vishnuvardhan

ಪುಣ್ಯಭೂಮಿ ಕುರಿತಾದ ಹೋರಾಟ ಇಂದು ಬೆಳಗಿನಿಂದಲೇ ಆರಂಭವಾಗಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ವಿಷ್ಣು ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದರು. ಜೊತೆಗೆ 42ಕ್ಕೂ ಹೆಚ್ಚು ಸಂಘಟನೆಗಳು ಈ ಹೋರಾಟಕ್ಕೆ ಬೆಂಬಲ ನೀಡಿದ್ದವು. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಈ ಎಲ್ಲ ಸಂಘಟನೆಗಳನ್ನು ಒಗ್ಗೂಡಿಸಿಕೊಂಡು ಹೋರಾಟಕ್ಕೆ ಇಳಿದಿದ್ದರು.

ಈ ಹೋರಾಟಕ್ಕೆ ಕಿಚ್ಚ ಸುದೀಪ್, ಡಾಲಿ ಧನಂಜಯ್, ವಸಿಷ್ಠ ಸಿಂಹ, ನೀನಾಸಂ ಸತೀಶ್ ಸೇರಿದಂತೆ ಹಲವು ನಟರು ಮತ್ತು ನಟಿಯರು ಹಾಗೂ ತಂತ್ರಜ್ಞರು ಬೆಂಬಲಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಷಯವಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸುದೀಪ್ ಭೇಟಿ ಆಗಲಿದ್ದಾರೆ ಎನ್ನಲಾಗುತ್ತಿದೆ.

Share This Article