ವಿಷ್ಣು ಸ್ಮಾರಕ ವಿಚಾರ – ನಾಳೆ ಸಿಎಂ ಭೇಟಿಯಾಗಲಿರುವ ಭಾರತಿ ವಿಷ್ಣುವರ್ಧನ್

Public TV
1 Min Read
Bharathi vishnuvardhan

-ವಿಷ್ಣುವರ್ಧನ್ ಅವ್ರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಸಿನಿಗಣ್ಯರಿಂದ ಮನವಿ

ಬೆಂಗಳೂರು: ಡಾ.ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಬುಧವಾರ (ಸೆ.3) ಹಿರಿಯ ನಟಿ ಭಾರತಿ ವಿಷ್ಣುವರ್ಧನ್ (Bharati Vishnuvardhan) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾಗಲಿದ್ದಾರೆ.

ಸಿಎಂ ಕಾವೇರಿ ನಿವಾಸದಲ್ಲಿ ನಾಳೆ (ಸೆ.3) 10:30ಕ್ಕೆ ಸಿಎಂ ಸಿದ್ದರಾಮಯ್ಯ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ ಭೇಟಿಯಾಗಲಿದ್ದಾರೆ. ಈ ವೇಳೆ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕಾಗಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಕನಿಷ್ಠ 10 ಗುಂಟೆ ಜಮೀನನ್ನು ಮೀಸಲಿಡಬೇಕು ಹಾಗೂ ಅಭಿಮಾನಿಗಳು ಗೌರವ ಸಮರ್ಪಿಸಲು ಮೀಸಲಿಡುವಂತೆ ಮನವಿ ಮಾಡಲಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಠಿಣ ಶಿಕ್ಷೆ ಅವಶ್ಯಕ, ಕೇಂದ್ರದ ತನಿಖೆ ಆಗಲಿ: ಡಾ.ಮಂಜುನಾಥ್

Kannada Actress

ಇನ್ನೂ ಮಂಗಳವಾರ (ಸೆ.2) ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಜೊತೆಗೆ ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ಮನೆಗೂ ನಾಮಕರಣ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.

Share This Article