ಡಿಸಿ ಕಚೇರಿ ಎದುರು ಆಜಾನ್ ಕೂಗಿದ ಪ್ರಕರಣ; ಗೋಮೂತ್ರ ಹಾಕಿ ಆವರಣ ಶುದ್ಧೀಕರಿಸಿದ ಹಿಂದೂಪರ ಕಾರ್ಯಕರ್ತರು

Public TV
1 Min Read
shivamogga dc office

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಬಳಿ ಮುಸ್ಲಿಂ ಯುವಕನೋರ್ವ ಆಜಾನ್ (Azan) ಕೂಗಿದ್ದ ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ (VHP) ಹಾಗೂ ಬಜರಂಗದಳ (Bajrang Dal) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಅಲ್ಲದೇ ಆಜಾನ್ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧೀಕರಣಗೊಳಿಸಿದರು.

ಶುಕ್ರವಾರ ಶಿವಮೊಗ್ಗದ (Shivamogga) ಜಿಲ್ಲಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಆಜಾನ್ ಕೂಗಿರುವುದು ಖಂಡನೀಯ. ಆಜಾನ್ ಕೂಗಿದ ಯುವಕನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು. ಇದೇ ವೇಳೆ ಕಾರ್ಯಕರ್ತರು ಡಿಸಿ ಕಚೇರಿಗೆ ಗೋಮೂತ್ರ ಸಿಂಪಡಿಸಲು ಮುಂದಾದರು. ಆದರೆ ಇದಕ್ಕೆ ಪೊಲೀಸರು ತಡೆಯೊಡ್ಡಿದರು. ಪೊಲೀಸರ ವಿರೋಧದ ನಡುವೆಯೂ ಕಾರ್ಯಕರ್ತರು ಗೋಮೂತ್ರ ಹಾಕಿ ಶುದ್ಧೀಕರಿಸಿದರು. ಇದನ್ನೂ ಓದಿ: ಡಿಸಿ ಕಚೇರಿ ಮೇಲೆ ಆಜಾನ್ ಕೂಗಿದ ಕೇಸ್ – ಎಚ್ಚರಿಕೆ ನೀಡಿ ಯುವಕನಿಗೆ ಜಾಮೀನು ನೀಡಿದ ಪೊಲೀಸರು

shivamogga protest

ಮುಸ್ಲಿಂ ಸಂಘಟನೆ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಆಜಾನ್ ಕೂಗಿದ ಯುವಕನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನಮ್ಮ ದೇಶದ ಸಂವಿಧಾನಕ್ಕೆ ಮತ್ತು ಕಾನೂನಿಗೆ ಬೆಲೆ, ಗೌರವ ನೀಡದ ದೇಶ ವಿರೋಧಿಗಳನ್ನ ಜಿಲ್ಲಾಡಳಿತ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿ ಬಳಿ ಯುವಕನೊಬ್ಬ ಆಜಾನ್‌ ಕೂಗಿದ್ದ. ಸರ್ಕಾರಿ ಕಚೇರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಯುವಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಕೇಳಿಬಂದಿತ್ತು. ಘಟನೆ ವಿರುದ್ಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ

Share This Article
Leave a Comment

Leave a Reply

Your email address will not be published. Required fields are marked *