ಬೆಂಗಳೂರು: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಅಭಿಯಾನ ವಿಚಾರವಾಗಿ ಶಾಸಕ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾರಿಕೆ ಉತ್ತರ ನೀಡಿದ್ದಾರೆ.
ಅಭಿಯಾನದ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮೊದಲಿನಿಂದಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಕೂಗು ಇದೆ. ಈಗಾಗಲೇ ಈ ಬಗ್ಗೆ ಆರೋಗ್ಯ ಸಚಿವರ ಜೊತೆ ಮಾತನಾಡಿದ್ದೇನೆ. ನಮ್ಮ ಜಿಲ್ಲೆಯ ಜನಪ್ರತಿನಿಧಿಗಳ ಜೊತೆಯೂ ಮಾತುಕತೆ ಮಾಡುತ್ತಿದ್ದೇವೆ. ಸುಧಾಕರ್ ಕೂಡ ಸಿಎಂ ಜೊತೆ ಮಾತನಾಡುವುದಾಗಿ ಹೇಳಿದ್ದಾರೆ. ಸರ್ಕಾರವು ಈ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಿದೆ. ಈ ಪ್ರಯತ್ನಕ್ಕೆ ಫಲ ಸಿಗುತ್ತದೆ ಎಂದರು.
Advertisement
Advertisement
ಅತಿ ಹೆಚ್ಚು ಬಾರಿ ಶಾಸಕರಾಗಿದರೂ, ಮಂತ್ರಿ ಆಗಿದರೂ ಆಸ್ಪತ್ರೆ ಕಟ್ಟಿಸಲು ಆಗಿಲ್ಲವಲ್ಲಾ ಎಂಬ ಪ್ರಶ್ನೆಗೆ ಸರಿಯಾಗಿ ಉತ್ತರ ನೀಡದೆ ಹಾರಿಕೆ ಉತ್ತರ ನೀಡಿದರು. ಈಗ ಸಚಿವ ಸುಧಾಕರ್ ಜೊತೆ ಮಾತಾಡಿದ್ದೇನೆ. ಅವರು ಸಿಎಂ ಜೊತೆ ಮಾತಾಡುತ್ತೇನೆ ಎಂದಿದ್ದಾರೆ. ನಾವು ನಮ್ಮ ಪ್ರಯತ್ನ ಮಾಡುತ್ತೇವೆ ಎಂದರು. ಸರ್ಕಾರ ಯಾವಾಗ ಒಪ್ಪಿಗೆ ಕೊಡುತ್ತೋ, ಆಗ ಆಸ್ಪತ್ರೆ ಆಗುತ್ತದೆ ಎಂದು ಹಾರಿಕೆ ಉತ್ತರ ಕೊಟ್ಟರು. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಸುಸಜ್ಜಿತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ ಜೊತೆ ಚರ್ಚಿಸುವೆ ಎಂದ ಸುಧಾಕರ್
Advertisement
ಪತ್ರಕರ್ತರ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡದೇ ಕೈ ಮುಗಿದು ಹೋದರು. ಆಸ್ಪತ್ರೆ ಕಟ್ಟಲು ಇನ್ನೆಷ್ಟು ವರ್ಷ ಬೇಕೆನ್ನುವ ಪ್ರಶ್ನೆಗೆ ಉತ್ತರ ಕೊಡದೇ ಮತ್ತದೇ ಹಾರಿಕೆ ಉತ್ತರ ಕೊಟ್ಟರು. ನಾವು ಸರ್ಕಾರದ ಹಂತದಲ್ಲಿ ಪ್ರಯತ್ನ ಮಾಡುತ್ತಿದ್ದೇವೆ. ಸರ್ಕಾರದಲ್ಲಿ ಮಂಜೂರು ಆದಾಗ ಆಸ್ಪತ್ರೆ ಆಗುತ್ತದೆ. ಈಗ ಅಗತ್ಯ ಪ್ರಯತ್ನ ಮಾಡೋದಾಗಿ ಹೇಳಿದರು.
Advertisement
ಲಿಟಿ ಆಸ್ಪತ್ರೆಗೆ ಪ್ರಯತ್ನ ಮಾಡುತ್ತಿದ್ದೇವೆ, ನಿರಂತರವಾಗಿ ಪ್ರಯತ್ನ ನಡೆಯಲಿದೆ. ಆಸ್ಪತ್ರೆ ಸಿಗುವವರೆಗೂ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತೇವೆ ಎಂದ ಹಾರಿಕೆ ಉತ್ತರ ನೀಡಿದರು. ಇದನ್ನೂ ಓದಿ: ಆಸ್ಪತ್ರೆಗಾಗಿ ಟ್ಟಿಟ್ಟರ್ ಅಭಿಯಾನ – ದೇಶದ 35 ಟಾಪ್ ಹ್ಯಾಷ್‌ಟ್ಯಾಗ್‌ನಡಿ ಟ್ರೆಂಡಿಂಗ್