ಕಾರವಾರ: ಇಲ್ಲಿನ ಸೀಬರ್ಡ್ ನಿರಾಶ್ರಿತರಿಗೆ ಯುಗಾದಿಯ ಸಂದರ್ಭದಲ್ಲಿ ಶುಭ ಸುದ್ದಿಯಾಗಿ 2008-09ರಿಂದ ಬಾಕಿ ಉಳಿದಿದ್ದ 28/ಎ ಕೇಸ್‌ನಲ್ಲಿ 10.47 ಕೋಟಿ ರೂ. ಪರಿಹಾರ ಮಂಜೂರಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri) ತಿಳಿಸಿದರು.
ಸೀಬರ್ಡ್ ಯೋಜನೆ ಅಡಿಯಲ್ಲಿ ಸೇನಾ ನೆಲೆ ನಿರ್ಮಾಣಕ್ಕಾಗಿ ನೂರಾರು ಕುಟುಂಬಗಳನ್ನು ಸ್ಥಳಾಂತರಿಸಲಾಗಿತ್ತು. ಈ ಸ್ಥಳಾಂತರಕ್ಕೆ ಸೂಕ್ತ ಪರಿಹಾರ ನೀಡುವ ಪ್ರಕ್ರಿಯೆ ವಿಳಂಬವಾಗಿತ್ತು. ಇದರಿಂದಾಗಿ ಅನೇಕ ಕುಟುಂಬಗಳು ಆರ್ಥಿಕ ಸಂಕಷ್ಟ ಅನುಭವಿಸುತ್ತಿದ್ದವು ಎಂದರು. ಇದನ್ನೂ ಓದಿ: ನೀರಿನ ಸಮಸ್ಯೆ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ: ಶರಣಪ್ರಕಾಶ್ ಪಾಟೀಲ್
ಈ ಪ್ರಕರಣಗಳು ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದು, ಅದನ್ನು ಸಂಸದನಾಗಿ ಆಯ್ಕೆ ಆದ ಮೇಲೆ ಈ ಕುರಿತು ತಕ್ಷಣ ನೌಕಾ ನೆಲೆ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳು, ಸಂಬಂಧಿಸಿದ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಕೇಂದ್ರ ರಕ್ಷಣಾಮಂತ್ರಿಗಳ ಗಮನಕ್ಕೆ ತಂದು, ನಿರಂತರ ಪ್ರಯತ್ನದಿಂದ 57 ಪ್ರಕರಣಗಳಿಗೆ ಪರಿಹಾರ ದೊರಕಿದೆ ಎಂದು ಹೇಳಿದರು. ಇದನ್ನೂ ಓದಿ: ಬರೋಬ್ಬರಿ 1.15 ಲಕ್ಷಕ್ಕೆ ಕೋಣ ಮಾರಾಟ
ಅಮದಳ್ಳಿ (Amadalli), ಕೊಡರ, ಹಟ್ಟಿಕೇರಿ, ಬಿಣಗ, ಚೆಂಡಿಯಾ, ಬಿರಾಡೆ ಈ ಗ್ರಾಮಗಳ ಕೆಲವು ನಿರಾಶ್ರಿತರ ಪ್ರಕರಣಗಳು ಅನೇಕ ವರ್ಷಗಳಿಂದ ಪರಿಹಾರಕ್ಕಾಗಿ ನಿರಂತರವಾಗಿ ಸರ್ಕಾರದ ಬಾಗಿಲು ತಟ್ಟುತ್ತಾ ಬಂದಿದ್ದರು. ಕೇಂದ್ರ ಸರ್ಕಾರದ ಈ ಆದೇಶದಿಂದ ಈಗ 10.47 ಕೋಟಿ ರೂ. ಪರಿಹಾರ ನಿಧಿಯ ಮಂಜೂರಾತಿಯಿಂದ ಸಂಕಷ್ಟದಲ್ಲಿದ್ದ ಕುಟುಂಬಗಳು ದೀರ್ಘಕಾಲದ ನಿರೀಕ್ಷೆಯಿಂದ ಮುಕ್ತಿಗೊಳ್ಳಲಿದೆ ಎಂದು ನುಡಿದರು. ಇದನ್ನೂ ಓದಿ: ನಮ್ಮ ಪಕ್ಷದ ಗಾಡಿ ಫುಲ್ ಇದೆ: ಸತೀಶ್ ಜಾರಕಿಹೊಳಿ
ಕೆಲವೇ ದಿನಗಳಲ್ಲಿ ಈ 57 ಪ್ರಕರಣಗಳಿಗೆ ಪರಿಹಾರ ಅವರ ಖಾತೆಗಳಿಗೆ ಜಮಾ ಆಗಲಿದೆ. ಉಳಿದ ಪ್ರಕರಣಗಳಲ್ಲಿ ಹಂತ ಹಂತವಾಗಿ ಪರಿಹಾರವನ್ನು ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈ ಆದೇಶಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi), ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ (Rajnath Singh) ಅವರನ್ನು ಮತ್ತು ಜಿಲ್ಲಾಡಳಿತ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದರು.